- Kannada News Photo gallery Cricket photos IND vs BAN 2nd test India Opt To Bowl first In Kanpur after 60 Years
IND vs BAN: 60 ವರ್ಷಗಳ ಸಂಪ್ರದಾಯ ಮುರಿದು ದಾಖಲೆ ಬರೆದ ರೋಹಿತ್ ಶರ್ಮಾ
Rohit Sharma: ಬಾಂಗ್ಲಾದೇಶ ವಿರುದ್ಧ ಟಾಸ್ ಗೆದ್ದ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡುವುದಾಗಿ ಹೇಳಿದರು. ಇದರೊಂದಿಗೆ 60 ವರ್ಷಗಳ ನಂತರ ಅಂದರೆ 1964 ನಂತರ ಟಾಸ್ ಗೆದ್ದು ಎದುರಾಳಿ ತಂಡವನ್ನು ಮೊದಲು ಬ್ಯಾಟಿಂಗ್ಗೆ ಆಹ್ವಾನಿಸಿದ್ದ ಮೊದಲ ನಾಯಕ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ಬರೆದರು.
Updated on: Sep 27, 2024 | 12:45 PM

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯ ಕಾನ್ಪುರದಲ್ಲಿ ಇಂದಿನಿಂದ ಆರಂಭವಾಗಿದೆ. ಮಳೆಯಿಂದಾಗಿ ಪಂದ್ಯ ಆರಂಭವಾಗುವುದು 1 ಗಂಟೆ ತಡವಾಯಿತು. ಆ ಬಳಿಕ ನಡೆದ ಟಾಸ್ನಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಎದುರಾಳಿ ತಂಡವನ್ನು ಬ್ಯಾಟಿಂಗ್ಗೆ ಆಹ್ವಾನಿಸಿದರು. ಈ ಮೂಲಕ ಕಾನ್ಪುರದಲ್ಲಿನ 60 ವರ್ಷಗಳ ಸಂಪ್ರದಾಯಕ್ಕೆ ಕೊನೆ ಹಾಡಿದರು.

ಬಾಂಗ್ಲಾದೇಶ ವಿರುದ್ಧ ಟಾಸ್ ಗೆದ್ದ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡುವುದಾಗಿ ಹೇಳಿದರು. ಇದರೊಂದಿಗೆ 60 ವರ್ಷಗಳ ನಂತರ ಅಂದರೆ 1964 ನಂತರ ಟಾಸ್ ಗೆದ್ದು ಎದುರಾಳಿ ತಂಡವನ್ನು ಮೊದಲು ಬ್ಯಾಟಿಂಗ್ಗೆ ಆಹ್ವಾನಿಸಿದ್ದ ಮೊದಲ ನಾಯಕ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ಬರೆದರು.

ರೋಹಿತ್ ಶರ್ಮಾಗೂ ಮೊದಲು 1964 ರಲ್ಲಿ ಭಾರತ ಟೆಸ್ಟ್ ತಂಡದ ನಾಯಕರಾಗಿದ್ದ ಮನ್ಸೂರ್ ಅಲಿ ಖಾನ್ ಪಟೌಡಿ ಇಂಗ್ಲೆಂಡ್ ವಿರುದ್ಧ ನಡೆದಿದ್ದ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡಿದ್ದರು. ಇದೀಗ ಅವರ ನಂತರ ರೋಹಿತ್ ಶರ್ಮಾ 60 ವರ್ಷಗಳ ನಂತರ ಬಾಂಗ್ಲಾದೇಶ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಕಾನ್ಪುರದ ಗ್ರೀನ್ ಪಾರ್ಕ್ನಲ್ಲಿ ಟೀಂ ಇಂಡಿಯಾ ಇಂದಿನ ಪಂದ್ಯವನ್ನು ಸೇರಿದಂತೆ ಒಟ್ಟು 24 ಟೆಸ್ಟ್ ಪಂದ್ಯಗಳನ್ನು ಆಡಿದೆ. ಇದರಲ್ಲಿ 22 ಟೆಸ್ಟ್ ಪಂದ್ಯಗಳಲ್ಲಿ ಟಾಸ್ ಗೆದ್ದ ನಾಯಕರು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಉಳಿದಂತೆ ಇಬ್ಬರು ನಾಯಕರು ಮಾತ್ರ ಮೊದಲು ಬೌಲಿಂಗ್ ಮಾಡುವುದಾಗಿ ನಿರ್ಧರಿಸಿದ್ದಾರೆ.

ಇದೀಗ ಕಾನ್ಪುರದಲ್ಲಿ ಸಂಪ್ರದಾಯ ಮುರಿದಿರುವ ರೋಹಿತ್ ಶರ್ಮಾ, ಗೆಲುವಿನ ಸಿಂಚನ ಪಡೆಯುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಪ್ರಸ್ತುತ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಬಾಂಗ್ಲಾದೇಶ ತಂಡ ಊಟದ ವಿರಾಮದ ವೇಳೆಗೆ 2 ವಿಕೆಟ್ ಕಳೆದುಕೊಂಡು 74 ರನ್ ಕಲೆಹಾಕಿದೆ.

ಭಾರತ ತಂಡ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಬಾಂಗ್ಲಾದೇಶ ತಂಡ: ಶದ್ಮನ್ ಇಸ್ಲಾಂ, ಜಾಕಿರ್ ಹಸನ್, ನಜ್ಮುಲ್ ಹುಸೇನ್ ಶಾಂಟೊ (ನಾಯಕ), ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್, ಲಿಟನ್ ದಾಸ್ (ವಿಕೆಟ್ ಕೀಪರ್), ಮೆಹದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ಹಸನ್ ಮಹಮೂದ್, ಖಾಲಿದ್ ಅಹ್ಮದ್.



















