IND vs BAN: ವಿಶೇಷ ದಾಖಲೆ ಬರೆಯಲು ಜಡೇಜಾಗೆ ಬೇಕು ಇನ್ನೊಂದು ವಿಕೆಟ್
Ravindra Jadeja: ಕಾನ್ಪುರ ಟೆಸ್ಟ್ ಪಂದ್ಯದಲ್ಲಿ ಒಂದು ವಿಕೆಟ್ ಪಡೆದ ತಕ್ಷಣ ರವೀಂದ್ರ ಜಡೇಜಾ ಇತಿಹಾಸ ನಿರ್ಮಿಸಲಿದ್ದಾರೆ. ವಾಸ್ತವವಾಗಿ, ರವೀಂದ್ರ ಜಡೇಜಾ ಅವರು ಟೆಸ್ಟ್ ಮಾದರಿಯಲ್ಲಿ ಇದುವರೆಗೆ 299 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದೀಗ ಕಾನ್ಪುರದಲ್ಲಿ ಒಂದು ವಿಕೆಟ್ ಪಡೆಯುವ ಮೂಲಕ ಅವರು ತಮ್ಮ 300 ವಿಕೆಟ್‌ಗಳನ್ನು ಪೂರ್ಣಗೊಳಿಸಲಿದ್ದಾರೆ.
1 / 6
ಬಾಂಗ್ಲಾದೇಶ ವಿರುದ್ಧ ನಡೆದ ಚೆನ್ನೈ ಟೆಸ್ಟ್ ಪಂದ್ಯದಲ್ಲಿ 280 ರನ್‌ಗಳ ಬೃಹತ್ ಅಂತರದ ಜಯ ಸಾದಿಸಿದ ಭಾರತ ಇದೀಗ ಎರಡನೇ ಟೆಸ್ಟ್ ಪಂದ್ಯಕ್ಕಾಗಿ ತಯಾರಿ ಆರಂಭಿಸಿದೆ. ಉಭಯ ತಂಡಗಳ ನಡುವಿನ ಎರಡನೇ ಟೆಸ್ಟ್ ಪಂದ್ಯ ಕಾನ್ಪುರದಲ್ಲಿ ನಡೆಯಲ್ಲಿದೆ. ಇದೇ ಪಂದ್ಯದಲ್ಲಿ ತಂಡದ ಆಲ್‌ರೌಂಡರ್ ರವೀಂದ್ರ ಜಡೇಜಾ ವಿಶೇಷ ಮೈಲಿಗಲ್ಲೊಂದನ್ನು ಸ್ಥಾಪಿಸಲಿದ್ದಾರೆ.
2 / 6
ವಾಸ್ತವವಾಗಿ ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಬೌಲಿಂಗ್ ಮತ್ತು ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಮೊದಲ ಇನ್ನಿಂಗ್ಸ್‌ನಲ್ಲಿ ಅಶ್ವಿನ್ ಅವರೊಂದಿಗೆ ಜಡೇಜಾ 199 ರನ್‌ಗಳ ದಾಖಲೆಯ ಜೊತೆಯಾಟ ನಡೆಸಿ ಟೀಂ ಇಂಡಿಯಾವನ್ನು ಸಂಕಷ್ಟದಿಂದ ಪಾರು ಮಾಡಿದ್ದರು.
3 / 6
ಅಲ್ಲದೆ ವೈಯಕ್ತಿಕವಾಗಿಯೂ ಅರ್ಧಶತಕದ ಇನ್ನಿಂಗ್ಸ್ ಆಡಿದ್ದ ಜಡೇಜಾ 86 ರನ್‌ಗಳ ಪ್ರಮುಖ ಕೊಡುಗೆ ನೀಡಿದ್ದರು. ಆದರೆ ಕೇವಲ 14 ರನ್ಗಳಿಂದ ಶತಕ ವಂಚಿತರಾಗಿದ್ದರು. ಎರಡನೇ ಇನ್ನಿಂಗ್ಸ್‌ನಲ್ಲಿ ಜಡೇಜಾಗೆ ಬ್ಯಾಟಿಂಗ್ ಮಾಡುವ ಅವಕಾಶ ಸಿಗಲಿಲ್ಲ. ಆದರೆ ಬೌಲಿಂಗ್‌ನಲ್ಲಿ ಕಮಾಲ್ ಮಾಡಿದ ಜಡೇಜಾ ಮೊದಲ ಇನ್ನಿಂಗ್ಸ್‌ನಲ್ಲಿ 2 ವಿಕೆಟ್ ಪಡೆದರೆ ಎರಡನೇ ಇನ್ನಿಂಗ್ಸ್‌ನಲ್ಲಿ 3 ವಿಕೆಟ್ ಉರುಳಿಸಿದರು.
4 / 6
ಇದೇ ಪಂದ್ಯದಲ್ಲಿ ಜಡೇಜಾ ಇನ್ನೊಂದು ವಿಕೆಟ್ ಪಡೆದಿದ್ದರೆ, ಟೆಸ್ಟ್ ಕ್ರಿಕೆಟ್‌ನಲ್ಲಿ ವಿಶೇಷ ದಾಖಲೆಯೊಂದನ್ನು ನಿರ್ಮಿಸುತ್ತಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ. ಇದೀಗ ಉಭಯ ತಂಡಗಳ ನಡುವೆ ಎರಡನೇ ಟೆಸ್ಟ್ ಪಂದ್ಯ ಕಾನ್ಪುರದಲ್ಲಿ ನಡೆಯಲ್ಲಿದ್ದು, ಈ ಪಂದ್ಯದಲ್ಲಿ ಜಡೇಜಾ ಒಂದೇ ಒಂದು ವಿಕೆಟ್ ಉರುಳಿಸಿದರೆ ಅಪರೂಪದ ದಾಖಲೆಯೊಂದನ್ನು ನಿರ್ಮಿಸಲಿದ್ದಾರೆ.
5 / 6
ವಾಸ್ತವವಾಗಿ ಕಾನ್ಪುರ ಟೆಸ್ಟ್ ಪಂದ್ಯದಲ್ಲಿ ಒಂದು ವಿಕೆಟ್ ಪಡೆದ ತಕ್ಷಣ ರವೀಂದ್ರ ಜಡೇಜಾ ಇತಿಹಾಸ ನಿರ್ಮಿಸಲಿದ್ದಾರೆ. ವಾಸ್ತವವಾಗಿ, ರವೀಂದ್ರ ಜಡೇಜಾ ಅವರು ಟೆಸ್ಟ್ ಮಾದರಿಯಲ್ಲಿ ಇದುವರೆಗೆ 299 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದೀಗ ಕಾನ್ಪುರದಲ್ಲಿ ಒಂದು ವಿಕೆಟ್ ಪಡೆಯುವ ಮೂಲಕ ಅವರು ತಮ್ಮ 300 ವಿಕೆಟ್‌ಗಳನ್ನು ಪೂರ್ಣಗೊಳಿಸಲಿದ್ದಾರೆ.
6 / 6
ಅಷ್ಟೇ ಅಲ್ಲ, ಟೆಸ್ಟ್ ಮಾದರಿಯಲ್ಲಿ ಭಾರತ ಪರ 300 ವಿಕೆಟ್ ಪಡೆದ ಮೊದಲ ಎಡಗೈ ಸ್ಪಿನ್ನರ್ ಎನಿಸಿಕೊಳ್ಳಲಿದ್ದಾರೆ. ಇದಲ್ಲದೆ, ಭಾರತದ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ 300 ವಿಕೆಟ್‌ಗಳನ್ನು ಪಡೆದ ಒಟ್ಟಾರೆ 7 ನೇ ಭಾರತೀಯ ಆಟಗಾರ ಎನಿಸಿಕೊಳ್ಳಲಿದ್ದಾರೆ.