IND vs BAN: ಕಾನ್ಪುರ ಟೆಸ್ಟ್ನಿಂದ ಕನ್ನಡಿಗ ಕೆಎಲ್ ರಾಹುಲ್ಗೆ ಕೋಕ್?
KL Rahul: ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ರಾಹುಲ್ ಕ್ರೀಸ್‌ನಲ್ಲಿ ಸುದೀರ್ಘ ಸಮಯ ಕಳೆದ ನಂತರವೂ ದೊಡ್ಡ ಇನ್ನಿಂಗ್ಸ್ ಆಡಲು ವಿಫಲರಾಗಿದ್ದರು. ರಾಹುಲ್ ಮೊದಲ ಇನ್ನಿಂಗ್ಸ್‌ನಲ್ಲಿ 16 ರನ್ ಬಾರಿಸಿದ್ದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಅಜೇಯ 22 ರನ್ ಗಳಿಸಿದ್ದರು. ಈ ಹಿನ್ನೆಲೆಯಲ್ಲಿ ಕಾನ್ಪುರ ಟೆಸ್ಟ್ ಪಂದ್ಯದಿಂದ ರಾಹುಲ್ಗೆ ಕೋಕ್ ನೀಡುವ ಸಾಧ್ಯತೆಗಳಿವೆ.
1 / 8
ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 280 ರನ್‌ಗಳಿಂದ ಸೋಲಿಸಿದ ಭಾರತ ತಂಡ ಇದೀಗ ಎರಡನೇ ಟೆಸ್ಟ್ ಪಂದ್ಯಕ್ಕೆ ತಯಾರಿ ನಡೆಸುತ್ತಿದೆ. ಎರಡನೇ ಟೆಸ್ಟ್ ಪಂದ್ಯಕ್ಕಾಗಿ ಈಗಾಗಲೇ ಭಾರತ ತಂಡವನ್ನು ಸಹ ಪ್ರಕಟಿಸಲಾಗಿದೆ. ಅದರಂತೆ ಮೊದಲ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿದ್ದ ಆಟಗಾರರೇ ಎರಡನೇ ಟೆಸ್ಟ್ ಪಂದ್ಯಕ್ಕೂ ಆಯ್ಕೆಯಾಗಿದ್ದಾರೆ.
2 / 8
ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ, ಆಲ್‌ರೌಂಡರ್ಸ್ ಹಾಗೂ ಬೌಲರ್ಗಳು ಉತ್ತಮ ಪ್ರದರ್ಶನ ನೀಡಿದ್ದರು. ಉಳಿದಂತೆ ಟಾಪ್ ಆರ್ಡರ್ನಲ್ಲಿ ನಾಯಕ ರೋಹಿತ್, ವಿರಾಟ್ ಕೊಹ್ಲಿ ಹಾಗೂ ಕನ್ನಡಿಗ ಕೆಎಲ್ ರಾಹುಲ್ ರನ್ ಗಳಿಸಲು ವಿಫಲರಾಗಿದ್ದರು. ಹೀಗಾಗಿ ಎರಡನೇ ಟೆಸ್ಟ್ ಪಂದ್ಯದಲ್ಲಿ ಒಬ್ಬರ ತಲೆದಂಡವಾಗುವ ಸಾಧ್ಯತೆಗಳು ಹೆಚ್ಚಿವೆ.
3 / 8
ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಹೊಲಿಸಿದರೆ, ಕೆಎಲ್ ರಾಹುಲ್ ಅವರ ಪ್ರದರ್ಶನದ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ. ತೀರ ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡುತ್ತಿರುವ ರಾಹುಲ್, ಸುಲಭವಾಗಿ ವಿಕೆಟ್ ಕೈಚೆಲ್ಲುತ್ತಿದ್ದಾರೆ. ಹೀಗಾಗಿ ಅವರನ್ನು ತಂಡದಿಂದ ಕೈಬಿಡಬೇಕು ಎಂಬ ಕೂಗು ಜೋರಾಗಿ ಕೇಳಿ ಬರುತ್ತಿದೆ.
4 / 8
ಮೇಲೆ ಹೇಳಿದಂತೆ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ರಾಹುಲ್ ಕ್ರೀಸ್‌ನಲ್ಲಿ ಸುದೀರ್ಘ ಸಮಯ ಕಳೆದ ನಂತರವೂ ದೊಡ್ಡ ಇನ್ನಿಂಗ್ಸ್ ಆಡಲು ವಿಫಲರಾಗಿದ್ದರು. ರಾಹುಲ್ ಮೊದಲ ಇನ್ನಿಂಗ್ಸ್‌ನಲ್ಲಿ 16 ರನ್ ಬಾರಿಸಿದ್ದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಅಜೇಯ 22 ರನ್ ಗಳಿಸಿದ್ದರು. ಈ ಹಿನ್ನೆಲೆಯಲ್ಲಿ ಕಾನ್ಪುರ ಟೆಸ್ಟ್ ಪಂದ್ಯದಿಂದ ರಾಹುಲ್ಗೆ ಕೋಕ್ ನೀಡುವ ಸಾಧ್ಯತೆಗಳಿವೆ.
5 / 8
ಟೆಸ್ಟ್ ಸರಣಿಗೂ ಮುನ್ನ ರಾಹುಲ್ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಭಾಗವಾಗಿದ್ದರು. ಆದರೆ ಈ ಸರಣಿಯಲ್ಲಿ ರಾಹುಲ್ ತಮ್ಮ ಮ್ಯಾಜಿಕ್ ತೋರಿಸಲು ಸಾಧ್ಯವಾಗಲಿಲ್ಲ. ರಾಹುಲ್ ತಮ್ಮ ಮೊದಲ ಪಂದ್ಯದಲ್ಲಿ 31 ರನ್ ಮತ್ತು ಎರಡನೇ ಪಂದ್ಯದಲ್ಲಿ 0 ರನ್ ಗಳಿಸಿದ್ದರು. ಆ ಬಳಿಕ 3ನೇ ಪಂದ್ಯದಿಂದ ಅವರನ್ನು ಕೈಬಿಡಲಾಗಿತ್ತು.
6 / 8
ಹೀಗಾಗಿ ಕಾನ್ಪುರ ಟೆಸ್ಟ್‌ನಲ್ಲಿ ರಾಹುಲ್ ಬದಲಿಗೆ ನಾಯಕ ರೋಹಿತ್ ಶರ್ಮಾ ಸರ್ಫರಾಜ್ ಖಾನ್‌ಗೆ ಅವಕಾಶ ನೀಡಬಹುದು. 2024ರ ಆರಂಭದಲ್ಲಿ ಇಂಗ್ಲೆಂಡ್ ವಿರುದ್ಧ ಸರ್ಫರಾಜ್ ಅದ್ಭುತ ಪ್ರದರ್ಶನ ನೀಡಿದ್ದರು. ಕೊನೆಯ ಮೂರು ಪಂದ್ಯಗಳಲ್ಲಿ ಭಾಗವಹಿಸಿದ ಅವರು 50 ಸರಾಸರಿಯೊಂದಿಗೆ 200 ರನ್ ಗಳಿಸಿದ್ದರು.
7 / 8
ಕೆಳ ಮಧ್ಯಮ ಕ್ರಮಾಂಕದಲ್ಲಿ ಸರ್ಫರಾಜ್ ಖಾನ್ ಈ ಸರಣಿಯಲ್ಲಿ ಸಾಕಷ್ಟು ಪ್ರಭಾವ ಬೀರಿದ್ದರು. ರೋಹಿತ್ ಕೂಡ ಸರ್ಫರಾಜ್ ಅವರ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇಂತಹ ಪರಿಸ್ಥಿತಿಯಲ್ಲಿ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ರಾಹುಲ್ ಬದಲಿಗೆ ಸರ್ಫರಾಜ್‌ಗೆ ಅವಕಾಶ ಸಿಗಬಹುದು.
8 / 8
ಎರಡನೇ ಟೆಸ್ಟ್ ಪಂದ್ಯಕ್ಕೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೆಲ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ ಮತ್ತು ಯಶ್ ದಯಾಳ್.