ಬಾಂಗ್ಲಾದೇಶ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತದ ಯುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ದಾಖಲೆಯ ದ್ವಿಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಕೇವಲ 131 ಎಸೆತಗಳನ್ನು ಎದುರಿಸಿದ ಕಿಶನ್, 24 ಬೌಂಡರಿ ಹಾಗೂ 10 ಸಿಕ್ಸರ್ ಸಹಿತ 210 ರನ್ ಚಚ್ಚಿದರು. ಇದರೊಂದಿಗೆ ಇಶಾನ್ ಹಲವು ವಿಶ್ವದಾಖಲೆಗಳನ್ನು ಬರೆದಿದ್ದಾರೆ.
ಕೇವಲ 126 ಎಸೆತಗಳಲ್ಲಿ ದ್ವಿಶತಕ ಸಿಡಿಸಿದ ಕಿಶನ್, ಈ ಹಿಂದೆ 138 ಎಸೆತಗಳಲ್ಲಿ ದ್ವಿಶತಕ ಸಿಡಿಸಿ ಅತಿ ಕಡಿಮೆ ಎಸೆತಗಳಲ್ಲಿ ದ್ವಿಶತಕ ಪೂರ್ಣಗೊಳಿಸಿದ್ದ ಗೇಲ್ ದಾಖಲೆಯನ್ನು ಮುರಿದಿದ್ದಾರೆ.
ಇಶಾನ್ ಕಿಶನ್ ಏಕದಿನದಲ್ಲಿ ದ್ವಿಶತಕ ಸಿಡಿಸಿದ ನಾಲ್ಕನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ದ್ವಿಶತಕ ಸಿಡಿಸುವುದರೊಂದಿಗೆ ಇಶಾನ್ ಕಿಶನ್, ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್ ಮತ್ತು ರೋಹಿತ್ ಶರ್ಮಾ ಜೊತೆ ಭಾರತದ ಪರ ದ್ವಿಶತಕ ಸಿಡಿಸಿದ ಆಟಗಾರ ಎಂಬ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ.
ಟೀಂ ಇಂಡಿಯಾ ಪರ ದ್ವಿಶತಕ ಸಿಡಿಸಿದ ಮೊದಲ ಎಡಗೈ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಕಿಶನ್ ಪಾತ್ರರಾಗಿದ್ದಾರೆ.
ಅಲ್ಲದೆ ವಿಶ್ವಕ್ರಿಕೆಟ್ನಲ್ಲಿ ದ್ವಿಶತಕ ಸಿಡಿಸಿದ ಮೊದಲ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್
ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ದ್ವಿಶತಕ ಸಿಡಿಸಿದ ಅತ್ಯಂತ ಕಿರಿಯ ಕ್ರಿಕೆಟರ್ ಎಂಬ ದಾಖಲೆ ಕಿಶನ್ ಕಿಸೆ ಸೇರಿದೆ.
ಏಕದಿನ ಕ್ರಿಕೆಟ್ನಲ್ಲಿ ಬಾಂಗ್ಲಾ ವಿರುದ್ಧ ಅತ್ಯಧಿಕ ಸ್ಕೋರ್ ಗಳಿಸಿದ ವಿಶ್ವದ ಮೊದಲ ಬ್ಯಾಟರ್ ಕಿಶನ್. ಈ ಹಿಂದೆ ಈ ದಾಖಲೆ ಶೇನ್ ವ್ಯಾಟ್ಸನ್ ಹೆಸರಿನಲ್ಲಿತ್ತು.
ಬಾಂಗ್ಲಾ ವಿರುದ್ಧ ಅತ್ಯಧಿಕ ವೈಯಕ್ತಿಕ ರನ್ ಬಾರಿಸಿದ ಭಾರತೀಯರ ಬ್ಯಾಟ್ಸ್‌ಮನ್ ಎಂಬ ದಾಖಲೆಯೂ ಕಿಶನ್ ಹೆಸರಿನಲ್ಲಿ ದಾಖಲಾಗಿದೆ. ಈ ಹಿಂದೆ ಸೆಹ್ವಾಗ್ ಬಾಂಗ್ಲಾ ವಿರುದ್ಧ 175 ರನ್ ಬಾರಿಸಿದ್ದರು.
ಬಾಂಗ್ಲಾದೇಶ ವಿರುದ್ಧ ಏಕದಿನ ಪಂದ್ಯದಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಭಾರತೀಯ ಬ್ಯಾಟ್ಸ್‌ಮನ್ ನಮ್ಮ ಕಿಶನ್ (10 ಸಿಕ್ಸರ್). ಈ ಹಿಂದೆ ಗಂಗೂಲಿ 7 ಸಿಕ್ಸರ್ ಸಿಡಿಸಿ ಮೊದಲ ಸ್ಥಾನದಲ್ಲಿದ್ದರು.
103 ಎಸೆತಗಳಲ್ಲಿ 150 ರನ್ ಗಳಿಸಿ ವೇಗವಾಗಿ 150+ ರನ್ ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೊಸ ದಾಖಲೆಯನ್ನು ಇಶಾನ್ ಕಿಶನ್ ನಿರ್ಮಿಸಿದರು. ಇದಕ್ಕೂ ಮುನ್ನ ವೀರೇಂದ್ರ ಸೆಹ್ವಾಗ್ 112 ಎಸೆತಗಳಲ್ಲಿ 150+ ರನ್ ಗಳಿಸಿದ್ದರು.
Published On - 4:21 pm, Sat, 10 December 22