ಈ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಇಳಿದು ಅಮೋಘ ಶತಕ ಸಿಡಿಸಿದ ಅಶ್ವಿನ್, ಏಳನೇ ಕ್ರಮಾಂಕ ಅಥವಾ ಅದಕ್ಕಿಂತ ಕೆಳಗಿನ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವಾಗ ಭಾರತದ ಪರ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಗೆ ಸೇರಿಕೊಂಡಿದ್ದಾರೆ. ಅವರಂತೆಯೇ ಶ್ರೇಷ್ಠ ಆಲ್‌ರೌಂಡರ್ ಕಪಿಲ್ ದೇವ್ ಮತ್ತು ಮಾಜಿ ನಾಯಕ ಎಂಎಸ್ ಧೋನಿ ಕೂಡ ಈ ಸಾಧನೆ ಮಾಡಿದ್ದಾರೆ. ಈ ಇಬ್ಬರೂ ದಿಗ್ಗಜರು ಭಾರತದಲ್ಲಿ 4 ಶತಕ ಬಾರಿಸಿದ್ದು, ಇದೀಗ ಅಶ್ವಿನ್ ಕೂಡ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.