IND vs BAN: ಸಿಡಿಲಮರಿ ಸೆಹ್ವಾಗ್ ದಾಖಲೆ ಮುರಿಯುವ ಸಮೀಪದಲ್ಲಿ ರೋಹಿತ್ ಶರ್ಮಾ

|

Updated on: Sep 16, 2024 | 10:08 PM

Rohit Sharma: ರೋಹಿತ್ ಶರ್ಮಾ ಇದುವರೆಗೆ ಆಡಿರುವ 59 ಟೆಸ್ಟ್ ಪಂದ್ಯಗಳ 101 ಇನ್ನಿಂಗ್ಸ್‌ಗಳಲ್ಲಿ 84 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಇದರೊಂದಿಗೆ ಅಧಿಕ ಸಿಕ್ಸರ್ ಬಾರಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಇದೀಗ ರೋಹಿತ್​ಗೆ, ಸೆಹ್ವಾಗ್ ಅವರ ದಾಖಲೆ ಮುರಿದು ಮೊದಲ ಸ್ಥಾನಕ್ಕೇರುವ ಅವಕಾಶವಿದೆ.

1 / 7
ಸುಮಾರು 6 ತಿಂಗಳ ಸುದೀರ್ಘ ಕಾಯುವಿಕೆಯ ನಂತರ ಟೀಂ ಇಂಡಿಯಾ ಟೆಸ್ಟ್ ಕ್ರಿಕೆಟ್ ಆಡಲು ತಯಾರಿ ಆರಂಭಿಸಿದೆ. ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಇದೇ ಸೆಪ್ಟೆಂಬರ್ 19 ರಿಂದ ಚೆನ್ನೈನಲ್ಲಿ ಆರಂಭವಾಗಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ದಾಖಲೆ ಸೃಷ್ಟಿಸುವ ಸನಿಹದಲ್ಲಿದ್ದಾರೆ.

2 / 7
ಟೀಂ ಇಂಡಿಯಾದ ಹಲವು ಐತಿಹಾಸಿಕ ಟೆಸ್ಟ್ ಪಂದ್ಯಗಳಿಗೆ ಸಾಕ್ಷಿಯಾಗಿರುವ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸುಮಾರು 15 ವರ್ಷಗಳ ಹಿಂದೆ ವೀರೇಂದ್ರ ಸೆಹ್ವಾಗ್ ಅವರು ದಕ್ಷಿಣ ಆಫ್ರಿಕಾ ವಿರುದ್ಧ 319 ರನ್‌ಗಳ ಸ್ಮರಣೀಯ ಇನ್ನಿಂಗ್ಸ್ ಆಡುವ ಮೂಲಕ ಇತಿಹಾಸ ನಿರ್ಮಿಸಿದ್ದರು. ಇದೀಗ ಇದೇ ನೆಲದಲ್ಲಿಯೇ ಅವರ ದಾಖಲೆ ಮುರಿಯುವುದಕ್ಕೆ ರೋಹಿತ್ ಶರ್ಮಾ ಸಿದ್ಧರಾಗಿದ್ದಾರೆ.

3 / 7
ಸೆಪ್ಟೆಂಬರ್ 19 ರಿಂದ ಚೆಪಾಕ್ ಸ್ಟೇಡಿಯಂನಲ್ಲಿ ಆರಂಭವಾಗಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಹಲವು ದಾಖಲೆ ಸೃಷ್ಟಿಯಾಗುವ ಸಾಧ್ಯತೆಗಳಿವೆ. ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ರವೀಂದ್ರ ಜಡೇಜಾ, ಆರ್​ ಅಶ್ವಿನ್,  ಸೇರಿದಂತೆ ಹಲವು ಆಟಗಾರರು ದಾಖಲೆ ಮುರಿಯುವ ಹಾಗೂ ಸೃಷ್ಟಿಸುವ ಅವಕಾಶ ಪಡೆ

4 / 7
ಇತರ ಆಟಗಾರರಂತೆ ನಾಯಕ ರೋಹಿತ್ ಶರ್ಮಾ ಕೂಡ ಈ ಸರಣಿಯಲ್ಲಿ ದಾಖಲೆ ಸೃಷ್ಟಿಸುವ ಸನಿಹದಲ್ಲಿದ್ದು, ಟೆಸ್ಟ್ ಕ್ರಿಕೆಟ್‌ನಲ್ಲಿ ಅತ್ಯಧಿಕ ಸಿಕ್ಸರ್ ಬಾರಿಸಿದವರ ಪಟ್ಟಿಯಲ್ಲಿ ಟೀಂ ಇಂಡಿಯಾದ ಮಾಜಿ ಆಟಗಾರ ಸಿಡಿಲಮರಿ ಸೆಹ್ವಾಗ್ ಅವರ ದಾಖಲೆ ಮುರಿಯುವ ಸನಿಹದಲ್ಲಿದ್ದಾರೆ.

5 / 7
ರೋಹಿತ್ ಶರ್ಮಾ ಇದುವರೆಗೆ ಆಡಿರುವ 59 ಟೆಸ್ಟ್ ಪಂದ್ಯಗಳ 101 ಇನ್ನಿಂಗ್ಸ್‌ಗಳಲ್ಲಿ 84 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಇದರೊಂದಿಗೆ ಅಧಿಕ ಸಿಕ್ಸರ್ ಬಾರಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಇದೀಗ ರೋಹಿತ್​ಗೆ, ಸೆಹ್ವಾಗ್ ಅವರ ದಾಖಲೆ ಮುರಿದು ಮೊದಲ ಸ್ಥಾನಕ್ಕೇರುವ ಅವಕಾಶವಿದೆ.

6 / 7
ಟೀಂ ಇಂಡಿಯಾದ ಮಾಜಿ ಅನುಭವಿ ಆರಂಭಿಕ ಆಟಗಾರ ಸೆಹ್ವಾಗ್ ಆಡಿರುವ 104 ಟೆಸ್ಟ್‌ಗಳಲ್ಲಿ ಒಟ್ಟು 91 ಸಿಕ್ಸರ್‌ಗಳನ್ನು ಹೊಡೆದಿದ್ದು ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಟೆಸ್ಟ್ ಕ್ರಿಕೆಟ್​ನಲ್ಲಿ ಇದುವರೆಗೆ 84 ಸಿಕ್ಸರ್‌ಗಳನ್ನು ಬಾರಿಸಿರುವ ರೋಹಿತ್‌, ಬಾಂಗ್ಲಾದೇಶ ವಿರುದ್ಧ 7 ಸಿಕ್ಸರ್‌ಗಳನ್ನು ಬಾರಿಸಿದರೆ, ಟೆಸ್ಟ್​ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

7 / 7
ರೋಹಿತ್ ಈಗಾಗಲೇ ಏಕದಿನ ಹಾಗೂ ಟಿ20ಯಲ್ಲಿ ಟೀಂ ಇಂಡಿಯಾ ಮಾತ್ರವಲ್ಲದೆ ಇಡೀ ವಿಶ್ವದಲ್ಲೇ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರ ಎಂಬ ದಾಖಲೆ ಹೊಂದಿದ್ದಾರೆ. ಅಲ್ಲದೆ ಕ್ರಿಕೆಟ್​ನ ಮೂರು ಮಾದರಿಗಳಲ್ಲಿ ಭಾರತದ ಪರ ಅಧಿಕ ಸಿಕ್ಸ್ ಬಾರಿಸಿದ ದಾಖಲೆ ಕೂಡ ರೋಹಿತ್ ಹೆಸರಿನಲ್ಲಿದೆ.

Published On - 10:08 pm, Mon, 16 September 24