IND vs BAN: ಟೀಮ್ ಇಂಡಿಯಾಗೆ ಬಿಗ್ ಶಾಕ್: ಸ್ಟಾರ್ ಆಟಗಾರ ತಂಡದಿಂದ ಔಟ್
India vs Bangladesh T20Is: ಭಾರತ ಮತ್ತು ಬಾಂಗ್ಲಾದೇಶ್ ನಡುವಿನ ಮೊದಲ ಟಿ20 ಪಂದ್ಯವು ಭಾನುವಾರ (ಅಕ್ಟೋಬರ್ 6) ನಡೆಯಲಿದೆ. ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ತಂಡದಿಂದ ಪ್ರಮುಖ ಆಟಗಾರ ಹೊರಬಿದ್ದಿದ್ದಾರೆ. ಅಲ್ಲದೆ ಬದಲಿಯಾಗಿ ಯುವ ಎಡಗೈ ದಾಂಡಿಗ ಆಯ್ಕೆಯಾಗಿದ್ದಾರೆ.
1 / 5
ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಮೂರು ಪಂದ್ಯಗಳ ಟಿ20 ಸರಣಿ ಇಂದಿನಿಂದ (ಅಕ್ಟೋಬರ್ 6) ಶುರುವಾಗಲಿದೆ. ಈ ಸರಣಿಯ ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾಗೆ ಆಘಾತ ಎದುರಾಗಿದ್ದು, ಪ್ರಮುಖ ಆಲ್ರೌಂಡರ್ ಶಿವಂ ದುಬೆ ತಂಡದಿಂದ ಹೊರಗುಳಿದಿದ್ದಾರೆ.
2 / 5
ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಶಿವಂ ದುಬೆ ಬಾಂಗ್ಲಾದೇಶ್ ವಿರುದ್ಧದ ಟಿ20 ಸರಣಿಯಿಂದ ಹಿಂದೆ ಸರಿದಿದ್ದಾರೆ. ಇದಕ್ಕೂ ಮುನ್ನ ಅವರು ಇರಾನಿ ಕಪ್ ಪಂದ್ಯಕ್ಕೆ ಆಯ್ಕೆಯಾಗಿದ್ದರು. ಆದರೆ ಬೆನ್ನು ನೋವಿನ ಕಾರಣ ಅವರು ಶೇಷ ಭಾರತ ತಂಡದ ಪರ ಕಣಕ್ಕಿಳಿದಿರಲಿಲ್ಲ.
3 / 5
ಇದೀಗ ಈ ನೋವಿನ ಸಮಸ್ಯೆಯಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಮೂರು ಪಂದ್ಯಗಳ ಟಿ20 ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಟಿ20 ಸರಣಿಯಲ್ಲಿ ಶಿವಂ ದುಬೆ ಕಾಣಿಸಿಕೊಳ್ಳುವುದಿಲ್ಲ.
4 / 5
ಇನ್ನು ಶಿವಂ ದುಬೆ ಅವರ ಬದಲಿಯಾಗಿ ಟೀಮ್ ಇಂಡಿಯಾಗೆ ತಿಲಕ್ ವರ್ಮಾ ಆಯ್ಕೆಯಾಗಿದ್ದಾರೆ. ಭಾರತದ ಪರ 16 ಟಿ20 ಪಂದ್ಯಗಳನ್ನಾಡಿರುವ ತಿಲಕ್ 2 ಅರ್ಧಶತಕಗಳೊಂದಿಗೆ 336 ರನ್ ಕಲೆಹಾಕಿದ್ದಾರೆ. ಹೀಗಾಗಿ ಎಡಗೈ ದಾಂಡಿಗನನ್ನು ಬಾಂಗ್ಲಾದೇಶ್ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾಗಿದೆ. ಅದರಂತೆ 3 ಪಂದ್ಯಗಳ ಸರಣಿಗೆ ಟೀಮ್ ಇಂಡಿಯಾ ಈ ಕೆಳಗಿನಂತಿದೆ...
5 / 5
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್(ನಾಯಕ) ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಮಯಾಂಕ್ ಯಾದವ್, ತಿಲಕ್ ವರ್ಮಾ. (ಸಾಂದರ್ಭಿಕ ಚಿತ್ರ)