IND vs BAN: ಬಾಂಗ್ಲಾ ವಿರುದ್ಧ ಚೆನ್ನೈ ಟೆಸ್ಟ್ ಗೆದ್ದರೆ ಇತಿಹಾಸ ನಿರ್ಮಿಸಲಿದೆ ಟೀಂ ಇಂಡಿಯಾ

|

Updated on: Sep 14, 2024 | 9:43 PM

IND vs BAN: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಸೆಪ್ಟೆಂಬರ್ 19 ರಿಂದ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಇತಿಹಾಸ ಸೃಷ್ಟಿಸುವ ಅವಕಾಶ ಪಡೆದಿದೆ. ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಗೆದ್ದ ತಕ್ಷಣ ಅಪರೂಪದ ದಾಖಲೆ ನಿರ್ಮಿಸಲಿದೆ.

1 / 8
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಸೆಪ್ಟೆಂಬರ್ 19 ರಿಂದ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಇತಿಹಾಸ ಸೃಷ್ಟಿಸುವ ಅವಕಾಶ ಪಡೆದಿದೆ. ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಗೆದ್ದ ತಕ್ಷಣ ಅಪರೂಪದ ದಾಖಲೆ ನಿರ್ಮಿಸಲಿದೆ.

2 / 8
ವಾಸ್ತವವಾಗಿ ಟೀಂ ಇಂಡಿಯಾ ಟೆಸ್ಟ್ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದು 1932ರಲ್ಲಿ. ಅಂದಿನಿಂದ ಟೀಂ ಇಂಡಿಯಾ 579 ಪಂದ್ಯಗಳನ್ನು ಆಡಿದ್ದು, ಇದರಲ್ಲಿ 178 ಪಂದ್ಯಗಳನ್ನು ಗೆದ್ದಿದ್ದರೆ, 178 ಪಂದ್ಯಗಳಲ್ಲಿ ಸೋಲು ಕಂಡಿದೆ. ಉಳಿದಂತೆ 222 ಪಂದ್ಯಗಳು ಡ್ರಾ ಆಗಿವೆ.

3 / 8
ಒಂದು ವೇಳೆ ಚೆನ್ನೈನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ದಾಖಲಿಸಿದರೆ ಅದು ತನ್ನ ಟೆಸ್ಟ್ ಇತಿಹಾಸದಲ್ಲಿ 179ನೇ ಗೆಲುವು ದಾಖಲಿಸಲಿದಂತ್ತಾಗುತ್ತದೆ. ಇದರೊಂದಿಗೆ ಭಾರತ ಕ್ರಿಕೆಟ್ ತಂಡ 1932ರ ನಂತರ ಮೊದಲ ಬಾರಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಸೋಲುಗಳ ಸಂಖ್ಯೆಯನ್ನು ಮೀರಲಿದೆ. ಅಂದರೆ ಟೀಂ ಇಂಡಿಯಾ ಸೋತ ಪಂದ್ಯಗಳಿಗಿಂತ ಗೆದ್ದ ಪಂದ್ಯಗಳ ಸಂಖ್ಯೆ ಹೆಚ್ಚಾಗಲಿದೆ.

4 / 8
ಇದಲ್ಲದೆ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ತಂಡಗಳ ಪಟ್ಟಿಯಲ್ಲಿ ಜಂಟಿಯಾಗಿ 4ನೇ ಸ್ಥಾನ ಪಡೆಯಲ್ಲಿದೆ. ಪ್ರಸ್ತುತ 179 ಪಂದ್ಯಗಳನ್ನು ಗೆದ್ದಿರುವ ದಕ್ಷಿಣ ಆಫ್ರಿಕಾ ನಾಲ್ಕನೇ ಸ್ಥಾನದಲ್ಲಿದೆ.

5 / 8
ಆಸ್ಟ್ರೇಲಿಯಾ ಇದುವರೆಗೆ 866 ಟೆಸ್ಟ್‌ಗಳಲ್ಲಿ 414 ಪಂದ್ಯಗಳನ್ನು ಗೆಲ್ಲುವ ಮೂಲಕ ಮೊದಲ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್ ತಂಡ 1077 ಟೆಸ್ಟ್‌ಗಳಲ್ಲಿ 397 ಗೆಲುವಿನೊಂದಿಗೆ ಎರಡನೇ ಸ್ಥಾನದಲ್ಲಿದೆ. ವೆಸ್ಟ್ ಇಂಡೀಸ್ 580 ಟೆಸ್ಟ್‌ಗಳಲ್ಲಿ 183 ಪಂದ್ಯಗಳನ್ನು ಗೆದ್ದು ಮೂರನೇ ಸ್ಥಾನದಲ್ಲಿದೆ.

6 / 8
ಇನ್ನು ಟೆಸ್ಟ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವೆ 13 ಟೆಸ್ಟ್ ಪಂದ್ಯಗಳು ನಡೆದಿದ್ದು, ಇದರಲ್ಲಿ ಟೀಂ ಇಂಡಿಯಾ 11 ಪಂದ್ಯಗಳನ್ನು ಗೆದ್ದಿದ್ದರೆ, ಎರಡು ಪಂದ್ಯಗಳು ಡ್ರಾದಲ್ಲಿ ಅಂತ್ಯಗೊಂಡಿವೆ. ಅಂದರೆ ಟೀಂ ಇಂಡಿಯಾ ವಿರುದ್ಧ ಬಾಂಗ್ಲಾದೇಶ ಇದುವರೆಗೆ ಯಾವುದೇ ಟೆಸ್ಟ್ ಪಂದ್ಯವನ್ನು ಗೆದ್ದಿಲ್ಲ.

7 / 8
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಸಿರಾಜ್, ಮೊಹಮ್ಮದ್ ಯಾದವ್, , ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಯಶ್ ದಯಾಳ್

8 / 8
ಬಾಂಗ್ಲಾದೇಶ ತಂಡ: ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ಮಹ್ಮದುಲ್ ಹಸನ್ ಜಾಯ್, ಜಾಕಿರ್ ಹಸನ್, ಶದ್ಮಾನ್ ಇಸ್ಲಾಂ, ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್, ಲಿಟನ್ ದಾಸ್, ಮೆಹದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ನಯೀಮ್ ಹಸನ್, ನಹಿದ್ ರಾಣಾ, ತಾಸ್ ಮಹಮೂದ್, ತಾಸ್ ಅಹ್ಮದ್, ಸೈಯದ್ ಖಾಲಿದ್ ಅಹ್ಮದ್, ಜೆಕರ್ ಅಲಿ ಅನಿಕ್.