IND vs BAN: ತವರು ನೆಲದಲ್ಲಿ ಈ ಸಾಧನೆ ಮಾಡಿದ 2ನೇ ಬ್ಯಾಟರ್ ವಿರಾಟ್ ಕೊಹ್ಲಿ
Virat Kohli: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ವಿಶೇಷ ಮೈಲಿಗಲ್ಲು ದಾಟಿದ್ದಾರೆ. ಈ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಬ್ಯಾಟ್ ಸದ್ದು ಮಾಡದಿದ್ದರೂ ತವರು ನೆಲದಲ್ಲಿ 12 ಸಾವಿರ ಅಂತರರಾಷ್ಟ್ರೀಯ ರನ್ ಪೂರೈಸಿದ ಭಾರತದ ಎರಡನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.