AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿಶ್ವಕಪ್‌ನಲ್ಲಿ ಇತಿಹಾಸ ನಿರ್ಮಿಸಿದ ಕಿಂಗ್ ಕೊಹ್ಲಿ..!

Virat Kohli: ಬಾಂಗ್ಲಾದೇಶ ವಿರುದ್ಧ ಸಿಡಿಸಿದ 37 ರನ್​ಗಳ ನೆರವಿನಿಂದ ಇದೀಗ ವಿರಾಟ್ ಕೊಹ್ಲಿ ಟಿ20 ಮತ್ತು ಏಕದಿನ ವಿಶ್ವಕಪ್‌ನಲ್ಲಿ 3000 ರನ್‌ಗಳ ಗಡಿ ದಾಟಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಐತಿಹಾಸಿಕ ದಾಖಲೆಯನ್ನು ಮುಟ್ಟಲು ಕೊಹ್ಲಿಗೆ 35 ರನ್‌ಗಳ ಅಗತ್ಯವಿತ್ತು. ಇಂದಿನ ಪಂದ್ಯದಲ್ಲಿ 37 ರನ್ ಬಾರಿಸಿದ ತಕ್ಷಣ ಕೊಹ್ಲಿ ಇತಿಹಾಸ ನಿರ್ಮಿಸಿದರು.

ಪೃಥ್ವಿಶಂಕರ
|

Updated on: Jun 22, 2024 | 11:05 PM

Share
ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ತಮ್ಮ ವೃತ್ತಿ ಜೀವನದಲ್ಲಿ ಒಂದರ ಹಿಂದೆ ಒಂದರಂತೆ ಹಲವು ಮೈಲುಗಲ್ಲುಗಳನ್ನು ದಾಟುತ್ತಿದ್ದಾರೆ. ಇದೀಗ ಇಂದು ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಸೂಪರ್ 8 ಪಂದ್ಯದಲ್ಲೂ ವಿಶೇಷ ಮೈಲಿಗಲ್ಲಿಗೆ ತನ್ನ ಹೆಸರನ್ನು ನಮೂದಿಸಿದ್ದಾರೆ.

1 / 7
ಬಾಂಗ್ಲಾದೇಶ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ ತಮ್ಮ ಇನ್ನಿಂಗ್ಸ್​ನಲ್ಲಿ 28 ಎಸೆತಗಳನ್ನು ಎದುರಿಸಿ 1 ಬೌಂಡರಿ ಮತ್ತು 3 ಸಿಕ್ಸರ್‌ಗಳ ನೆರವಿನಿಂದ 37 ರನ್ ಬಾರಿಸಿದರು. ಈ ಇನ್ನಿಂಗ್ಸ್‌ನ ಸಹಾಯದಿಂದ ವಿರಾಟ್ ಕೊಹ್ಲಿ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆಯನ್ನು ಬರೆದರು.

2 / 7
ಬಾಂಗ್ಲಾದೇಶ ವಿರುದ್ಧ ಸಿಡಿಸಿದ 37 ರನ್​ಗಳ ನೆರವಿನಿಂದ ಇದೀಗ ವಿರಾಟ್ ಕೊಹ್ಲಿ ಟಿ20 ಮತ್ತು ಏಕದಿನ ವಿಶ್ವಕಪ್‌ನಲ್ಲಿ 3000 ರನ್‌ಗಳ ಗಡಿ ದಾಟಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಐತಿಹಾಸಿಕ ದಾಖಲೆಯನ್ನು ಮುಟ್ಟಲು ಕೊಹ್ಲಿಗೆ 35 ರನ್‌ಗಳ ಅಗತ್ಯವಿತ್ತು. ಇಂದಿನ ಪಂದ್ಯದಲ್ಲಿ 37 ರನ್ ಬಾರಿಸಿದ ತಕ್ಷಣ ಕೊಹ್ಲಿ ಇತಿಹಾಸ ನಿರ್ಮಿಸಿದರು.

3 / 7
ಈ ವಿಷಯದಲ್ಲಿ ಕೊಹ್ಲಿ ನಂತರ ರೋಹಿತ್ ಶರ್ಮಾ ಹೆಸರು ಎರಡನೇ ಸ್ಥಾನದಲ್ಲಿದೆ. ರೋಹಿತ್ ಎರಡು ಮಾದರಿಯ ವಿಶ್ವಕಪ್‌ಗಳಲ್ಲಿ ಇದುವರೆಗೆ 2637 ರನ್ ಬಾರಿಸಿದ್ದಾರೆ.

4 / 7
ಮೂರನೇ ಸ್ಥಾನದಲ್ಲಿರುವ ಆಸ್ಟ್ರೇಲಿಯದ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಇದುವರೆಗೆ 2502 ರನ್ ಬಾರಿಸಿದ್ದರೆ, ಈ ಪಟ್ಟಿಯಲ್ಲಿ ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ನಾಲ್ಕನೇ ಸ್ಥಾನದಲ್ಲಿದ್ದಾರೆ. ತೆಂಡೂಲ್ಕರ್ 2278 ರನ್ ಬಾರಿಸಿದ್ದು, ಶ್ರೀಲಂಕಾದ ದಿಗ್ಗಜ ಕುಮಾರ ಸಂಗಕ್ಕಾರ 2193 ರನ್ ಬಾರಿಸಿ ಐದನೇ ಸ್ಥಾನದಲ್ಲಿದ್ದಾರೆ.

5 / 7
ಈ ದಾಖಲೆಯಲ್ಲದೆ ಕೊಹ್ಲಿ, ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಇದುವರೆಗೆ ಕೊಹ್ಲಿ ಆಡಿರುವ 32 ಪಂದ್ಯಗಳ 30 ಇನ್ನಿಂಗ್ಸ್‌ಗಳಲ್ಲಿ 1207 ರನ್ ಬಾರಿಸಿದ್ದಾರೆ. ಇದರಲ್ಲಿ 14 ಅರ್ಧಶತಕಗಳು ಸೇರಿವೆ.

6 / 7
ಏಕದಿನ ವಿಶ್ವಕಪ್‌ನಲ್ಲೂ ವಿರಾಟ್ ತಮ್ಮ ಬ್ಯಾಟ್‌ನಿಂದ ಸಾಕಷ್ಟು ರನ್ ಗಳಿಸಿದ್ದಾರೆ. ಕೊಹ್ಲಿ ಆಡಿರುವ 37 ಪಂದ್ಯಗಳಲ್ಲಿ 1795 ರನ್ ಬಾರಿಸಿದ್ದಾರೆ. ಇದರಲ್ಲಿ 5 ಶತಕ ಮತ್ತು 12 ಅರ್ಧ ಶತಕ ಸೇರಿವೆ.

7 / 7
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು

ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ

ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ

‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?

ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್

ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!

ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ

ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ