ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 56 ರನ್‌ಗಳ ಇನ್ನಿಂಗ್ಸ್ ಆಡಿದ ಜೈಸ್ವಾಲ್, 147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ, ಅದರಲ್ಲೂ ತವರು ನೆಲದಲ್ಲಿ ತಮ್ಮ ಮೊದಲ 10 ಇನ್ನಿಂಗ್ಸ್‌ಗಳಲ್ಲಿ 750 ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಹಿಂದೆ ಈ ದಾಖಲೆ ವೆಸ್ಟ್ ಇಂಡೀಸ್‌ನ ಜಾರ್ಜ್ ಹ್ಯಾಡ್ಲಿ ಹೆಸರಿನಲ್ಲಿತ್ತು. ಅವರು 1935 ರಲ್ಲಿ 747 ರನ್ ಬಾರಿಸುವ ಮೂಲಕ ಈ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದ್ದರು