IND vs ENG: 14 ವರ್ಷಗಳ ನಂತರ ಹೈದರಾಬಾದ್‌ನಲ್ಲಿ ಸೋತು ಬೇಡದ ದಾಖಲೆಗಳಿಗೆ ಕೊರಳೊಡ್ಡಿದ ಭಾರತ..!
IND vs ENG: ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಕಳಪೆ ಆರಂಭ ಕಂಡಿದೆ. ಹೈದರಾಬಾದ್‌ನಲ್ಲಿ ನಡೆದ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 28 ರನ್‌ಗಳಿಂದ ಸೋಲು ಅನುಭವಿಸಿದೆ. ಈ ಸೋಲಿನೊಂದಿಗೆ ಹಲವು ಬೇಡದ ದಾಖಲೆಗಳನ್ನು ತನ್ನ ಖಾತೆಗೆ ಹಾಕಿಕೊಂಡಿದೆ.
1 / 7
ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಕಳಪೆ ಆರಂಭ ಕಂಡಿದೆ. ಹೈದರಾಬಾದ್‌ನಲ್ಲಿ ನಡೆದ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 28 ರನ್‌ಗಳಿಂದ ಸೋಲು ಅನುಭವಿಸಿದೆ. ಈ ಸೋಲಿನೊಂದಿಗೆ ಹಲವು ಬೇಡದ ದಾಖಲೆಗಳನ್ನು ತನ್ನ ಖಾತೆಗೆ ಹಾಕಿಕೊಂಡಿದೆ.
2 / 7
ವಾಸ್ತವವಾಗಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ಟೆಸ್ಟ್ ಸರಣಿಯನ್ನು ಆಡಿತ್ತು. ಆ ಸರಣಿಯ ಕೊನೆಯ 2 ಪಂದ್ಯಗಳಲ್ಲಿ ಟೀಂ ಇಂಡಿಯಾ ಒಂದು ಪಂದ್ಯದಲ್ಲಿ ಸೋತಿದ್ದು, ಒಂದು ಪಂದ್ಯವನ್ನು ಡ್ರಾದಲ್ಲಿ ಅಂತ್ಯಗೊಳ್ಳಿಸಿತ್ತು.
3 / 7
ಇದೀಗ ಇಂಗ್ಲೆಂಡ್ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋತಿರುವ ಭಾರತ, ಕಳೆದ ಮೂರು ಪಂದ್ಯಗಳಲ್ಲಿ ಒಂದರಲ್ಲೂ ಗೆಲುವು ದಾಖಲಿಸದಿರುವುದು ಕಳೆದ 12 ವರ್ಷಗಳಲ್ಲಿ ಇದೇ ಮೊದಲು.
4 / 7
ಈ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಟೀಂ ಇಂಡಿಯಾ 190 ರನ್‌ಗಳ ಮುನ್ನಡೆ ಸಾಧಿಸಿತ್ತು. ಆದರೆ ಇದಾದ ಬಳಿಕವೂ ತಂಡ 28 ರನ್‌ಗಳಿಂದ ಸೋಲನ್ನು ಎದುರಿಸಬೇಕಾಯಿತು. ಮೊದಲ ಇನ್ನಿಂಗ್ಸ್‌ನಲ್ಲಿ 100 ರನ್‌ಗಳ ಮುನ್ನಡೆ ಸಾಧಿಸಿದ್ದ ಟೀಂ ಇಂಡಿಯಾ ತವರಿನಲ್ಲಿ ಟೆಸ್ಟ್ ಪಂದ್ಯವನ್ನು ಸೋತಿದ್ದು ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು.
5 / 7
ಭಾರತ ತಂಡ ತವರಿನಲ್ಲಿ 106 ಬಾರಿ ಟೆಸ್ಟ್‌ನಲ್ಲಿ 100ಕ್ಕೂ ಹೆಚ್ಚು ರನ್‌ಗಳ ಮುನ್ನಡೆ ಸಾಧಿಸಿದೆ. ಇದರಲ್ಲಿ 70 ಪಂದ್ಯಗಳನ್ನು ಗೆದ್ದಿರುವ ಟೀಂ ಇಂಡಿಯಾ ಇಷ್ಟೊಂದು ಮುನ್ನಡೆಯ ಹೊರತಾಗಿಯೂ ಸೋಲು ಅನುಭವಿಸಿದ್ದು ಇದೇ ಮೊದಲು.
6 / 7
ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಟೀಂ ಇಂಡಿಯಾ ಟೆಸ್ಟ್ ಪಂದ್ಯವನ್ನು ಸೋತಿರುವುದು ಇದೇ ಮೊದಲು. ಇದಕ್ಕೂ ಮುನ್ನ ಟೀಂ ಇಂಡಿಯಾ ಇಲ್ಲಿ 5 ಟೆಸ್ಟ್ ಪಂದ್ಯಗಳನ್ನು ಆಡಿತ್ತು. ಈ ಪೈಕಿ ಟೀಂ ಇಂಡಿಯಾ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, 1 ಪಂದ್ಯ ಡ್ರಾ ಆಗಿತ್ತು.
7 / 7
ಈ 4 ಪಂದ್ಯಗಳ ಪೈಕಿ ಭಾರತ 2 ಪಂದ್ಯಗಳನ್ನು ಇನಿಂಗ್ಸ್ ಅಂತರದಿಂದ ಗೆದ್ದಿದ್ದರೆ, ಒಂದು ಪಂದ್ಯವನ್ನು 10 ವಿಕೆಟ್‌ಗಳಿಂದ ಗೆದ್ದುಕೊಂಡಿತ್ತು. ಆದರೆ ಹೈದರಾಬಾದ್‌ನಲ್ಲಿ ಸೋಲಿಲ್ಲದ ಸರದಾರನಾಗಿದ್ದ ಭಾರತಕ್ಕೆ, ಆಂಗ್ಲರು ಮೊದಲ ಬಾರಿಗೆ ಸೋಲಿನ ಶಾಕ್ ನೀಡಿದ್ದಾರೆ.