- Kannada News Photo gallery Cricket photos IND vs ENG 1st test kl rahul completed 1000 test runs in home conditions
IND vs ENG: ಶತಕ ವಂಚಿತರಾದರೂ ತವರಿನಲ್ಲಿ ವಿಶೇಷ ದಾಖಲೆ ಬರೆದ ಕೆಎಲ್ ರಾಹುಲ್..!
IND vs ENG: ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ರಾಹುಲ್ 123 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 2 ಬೌಂಡರಿ ಸಹಿತ 86 ರನ್ಗಳ ಉಪಯುಕ್ತ ಇನ್ನಿಂಗ್ಸ್ ಆಡಿದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ತವರಿನಲ್ಲಿ 1000 ರನ್ ಪೂರೈಸಿದ್ದಾರೆ.
Updated on: Jan 26, 2024 | 4:13 PM

ಹೈದರಾಬಾದ್ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 243 ರನ್ಗಳಿಗೆ ಆಲೌಟ್ ಮಾಡಿದ ಭಾರತ, ಮೊದಲ ಇನ್ನಿಂಗ್ಸ್ನಲ್ಲಿ 400 ರನ್ಗಳತ್ತ ಸಾಗುತ್ತಿದೆ. ತಂಡದ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 76 ಎಸೆತಗಳಲ್ಲಿ 80 ರನ್ ಗಳಿಸಿದರೆ, ಕನ್ನಡಿಗ ಕೆಎಲ್ ರಾಹುಲ್ ಕೂಡ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು.

ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ರಾಹುಲ್ 123 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 2 ಬೌಂಡರಿ ಸಹಿತ 86 ರನ್ಗಳ ಉಪಯುಕ್ತ ಇನ್ನಿಂಗ್ಸ್ ಆಡಿದರು. ರಾಹುಲ್ ಆಟವನ್ನು ನೋಡಿದವರು ಅವರ ಬ್ಯಾಟ್ನಿಂದ ಶತಕ ಬರುವುದು ಖಚಿತ ಎನ್ನುತ್ತಿದ್ದರು. ಆದರೆ ರಾಹುಲ್ ಬಿಗ್ ಶಾಟ್ ಆಡುವ ಯತ್ನದಲ್ಲಿ ವಿಕೆಟ್ ಕೈಚೆಲ್ಲಿದರು.

ಇದಾಗ್ಯೂ ಆಂಗ್ಲರ ವಿರುದ್ಧ ಅರ್ಧಶತಕದ ಇನ್ನಿಂಗ್ಸ್ ಆಡಿದ ಕೆಎಲ್ ರಾಹುಲ್ ಟೆಸ್ಟ್ ಕ್ರಿಕೆಟ್‌ನಲ್ಲಿ ತವರಿನಲ್ಲಿ 1000 ರನ್ ಪೂರೈಸಿದ್ದಾರೆ.

ರಾಹುಲ್ ಭಾರತದಲ್ಲಿ ಇದುವರೆಗೆ 17 ಟೆಸ್ಟ್ ಪಂದ್ಯಗಳನ್ನಾಡಿದ್ದು, 43.00 ಕ್ಕಿಂತ ಹೆಚ್ಚು ಸರಾಸರಿಯಲ್ಲಿ ರನ್ ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ ಮತ್ತು ಒಂಬತ್ತು ಅರ್ಧಶತಕಗಳು ಸೇರಿವೆ.

2014ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯ ಆಡಿದ್ದ ಕೆಎಲ್ ರಾಹುಲ್ ಇದುವರೆಗೆ 50 ಟೆಸ್ಟ್ ಪಂದ್ಯಗಳಲ್ಲಿ 2841 ರನ್ ಗಳಿಸಿದ್ದಾರೆ. ಇನ್ನು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಕ್ರಿಕೆಟ್‌ನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿರುವ ರಾಹುಲ್, ಆಂಗ್ಲರ ವಿರುದ್ಧ ಆಡಿರುವ 13 ಪಂದ್ಯಗಳಲ್ಲಿ 933 ರನ್ ಕಲೆಹಾಕಿದ್ದಾರೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.




