IND vs ENG: ರೋಹಿತ್ ಸಿಡಿಲಬ್ಬರದ ಬ್ಯಾಟಿಂಗ್‌ಗೆ ದ್ರಾವಿಡ್, ಗೇಲ್ ದಾಖಲೆ ಉಡೀಸ್..!

Updated on: Feb 09, 2025 | 7:52 PM

Rohit Sharma: ಕಟಕ್ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಕೇವಲ 30 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದು, ಮತ್ತೆ ತಮ್ಮ ಹಳೆಯ ಫಾರ್ಮ್‌ಗೆ ಮರಳಿದ್ದಾರೆ. ರೋಹಿತ್ ತಮ್ಮ ಅರ್ಧಶತಕದ ಇನ್ನಿಂಗ್ಸ್​ನಲ್ಲಿ ಇದುವರೆಗೆ 4 ಬೌಂಡರಿ ಮತ್ತು 4 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಇದರ ಜೊತೆಗೆ ರೋಹಿತ್ ಟೀಂ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಹಾಗೂ ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್ ಗೇಲ್ ಅವರ ದಾಖಲೆಯನ್ನು ಮುರಿದಿದ್ದಾರೆ.

1 / 7
ಕಟಕ್‌ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್‌ ತಂಡ 304 ರನ್​​ಗಳ ಸ್ಪರ್ಧಾತ್ಮಕ ಮೊತ್ತವನ್ನು ಕಲೆಹಾಕಿದೆ. ಈ ಗುರಿ ಬೆನ್ನಟ್ಟಿರುವ ಟೀಂ ಇಂಡಿಯಾಕ್ಕೆ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಮುರಿಯದ ವಿಕೆಟ್​​ಗೆ ಶತಕದ ಜೊತೆಯಾಟವನ್ನಾಡಿದ್ದಾರೆ.

ಕಟಕ್‌ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್‌ ತಂಡ 304 ರನ್​​ಗಳ ಸ್ಪರ್ಧಾತ್ಮಕ ಮೊತ್ತವನ್ನು ಕಲೆಹಾಕಿದೆ. ಈ ಗುರಿ ಬೆನ್ನಟ್ಟಿರುವ ಟೀಂ ಇಂಡಿಯಾಕ್ಕೆ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಮುರಿಯದ ವಿಕೆಟ್​​ಗೆ ಶತಕದ ಜೊತೆಯಾಟವನ್ನಾಡಿದ್ದಾರೆ.

2 / 7

ಇದೇ ವೇಳೆ ನಾಯಕ ರೋಹಿತ್ ಶರ್ಮಾ ಕೇವಲ 30 ಎಸೆತಗಳಲ್ಲಿ ಏಕದಿನ ವೃತ್ತಿಜೀವನದ 58 ನೇ ಅರ್ಧಶತಕವನ್ನು ಕಲೆಹಾಕಿದ್ದಾರೆ. ರೋಹಿತ್ ತಮ್ಮ ಈ ಅಜೇಯ ಇನ್ನಿಂಗ್ಸ್​ನಲ್ಲಿ 4 ಬೌಂಡರಿ ಹಾಗೂ 4 ಭರ್ಜರಿ ಸಿಕ್ಸರ್​ಗಳನ್ನು ಸಿಡಿಸಿದ್ದಾರೆ. ಈ ಮೂಲಕ ರೋಹಿತ್ ಇಬ್ಬರು ದಿಗ್ಗಜ ಆಟಗಾರರ ದಾಖಲೆಯನ್ನು ಮುರಿದಿದ್ದಾರೆ.

3 / 7

ವಾಸ್ತವವಾಗಿ ಕಳೆದ ಕೆಲವು ದಿನಗಳಿಂದ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ರೋಹಿತ್ ಶರ್ಮಾರನ್ನು ಇನ್ನಿಲ್ಲದಂತೆ ಟೀಕಿಸಲಾಗುತ್ತಿತ್ತು. ರೋಹಿತ್ ಆದಷ್ಟು ಬೇಗ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಬೇಕು ಎಂಬುದು ಹಲವರ ಅಭಿಪ್ರಾಯವಾಗಿತ್ತು. ಆದರೆ ತನ್ನಲ್ಲಿ ಇನ್ನು ಕ್ರಿಕೆಟ್ ಹಸಿವು ಇದೇ ಎಂಬುದನ್ನು ಇಂದಿನ ಆಟದಲ್ಲಿ ರೋಹಿತ್ ಸಾಭೀತುಪಡಿಸಿದ್ದಾರೆ.

4 / 7

ಇಂಗ್ಲೆಂಡ್‌ ವಿರುದ್ಧ ಇಂದು ನಡೆಯುತ್ತಿರುವ ಪಂದ್ಯದಲ್ಲಿ ಅಜೇಯ ಅರ್ಧಶತಕ ಬಾರಿಸಿರುವ ರೋಹಿತ್ ಶರ್ಮಾ ಈ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ನಾಲ್ಕನೇ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ವಿಷಯದಲ್ಲಿ ರೋಹಿತ್, ತಂಡದ ಮಾಜಿ ನಾಯಕ ಮತ್ತು ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರನ್ನು ಹಿಂದಿಕ್ಕಿದ್ದಾರೆ.

5 / 7

ಈ ಪಂದ್ಯಕ್ಕೂ ಮುನ್ನ ಈ ವಿಚಾರದಲ್ಲಿ ರಾಹುಲ್ ದ್ರಾವಿಡ್ ಅವರನ್ನು ಹಿಂದಿಕ್ಕಲು ರೋಹಿತ್​ಗೆ 22 ರನ್‌ಗಳ ಅಗತ್ಯವಿತ್ತು. ಇದೀಗ ಈ ಪಂದ್ಯದ ಐದನೇ ಓವರ್‌ನಲ್ಲಿ ಸಾಕಿಬ್ ಮಹಮೂದ್ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ರೋಹಿತ್, ದ್ರಾವಿಡ್ ಅವರ ದಾಖಲೆಯನ್ನು ಮುರಿದರು. ಈ ಪಟ್ಟಿಯಲ್ಲಿ ರೋಹಿತ್ ಈಗ ನಾಲ್ಕನೇ ಸ್ಥಾನದಲ್ಲಿದ್ದು, ಅವರಿಗಿಂತ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ ಮತ್ತು ಸೌರವ್ ಗಂಗೂಲಿ ಮಾತ್ರ ಮುಂದಿದ್ದಾರೆ.

6 / 7

ಇದಲ್ಲದೆ ಇಂಗ್ಲೆಂಡ್ ವಿರುದ್ಧ 30 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ರೋಹಿತ್​ಗೆ ಇದು ಏಕದಿನ ಕ್ರಿಕೆಟ್‌ನಲ್ಲಿ ನಾಲ್ಕನೇ ವೇಗದ ಅರ್ಧಶತಕವಾಗಿದೆ. ಇದಕ್ಕೂ ಮುನ್ನ ರೋಹಿತ್ 2022 ರಲ್ಲಿ ಬಾಂಗ್ಲಾದೇಶ ವಿರುದ್ಧ 27 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು. ಇದು ಈ ಮಾದರಿಯಲ್ಲಿ ಅವರ ಅತ್ಯಂತ ವೇಗದ ಅರ್ಧಶತಕವಾಗಿದೆ. ಹಾಗೆಯೇ ಕಳೆದ ವರ್ಷ ಅವರು ಶ್ರೀಲಂಕಾ ವಿರುದ್ಧ 29 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರೆ, 2023 ರಲ್ಲಿ ಅಫ್ಘಾನಿಸ್ತಾನ ವಿರುದ್ಧ 30 ಎಸೆತಗಳಲ್ಲಿ ಅರ್ಧಶತಕ ಪೂರ್ಣಗೊಳಿಸಿದ್ದರು.

7 / 7

ಹಾಗೆಯೇ ತಮ್ಮ ಅರ್ಧಶತಕದ ಇನ್ನಿಂಗ್ಸ್​ನಲ್ಲಿ 4 ಸಿಕ್ಸರ್​ಗಳನ್ನು ಬಾರಿಸಿರುವ ರೋಹಿತ್ ಏಕದಿನ ಮಾದರಿಯಲ್ಲಿ ಅತ್ಯಧಿಕ ಸಿಕ್ಸರ್ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್​ನ ಮಾಜಿ ಸ್ಫೋಟಕ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಅವರನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದ್ದಾರೆ. ಗೇಲ್ ಈ ಮಾದರಿಯಲ್ಲಿ 331 ಸಿಕ್ಸರ್‌ಗಳನ್ನು ಬಾರಿಸಿದ್ದರೆ, ರೋಹಿತ್ ಈ ಪಂದ್ಯದಲ್ಲಿ 4 ಸಿಕ್ಸರ್‌ಗಳೊಂದಿಗೆ ಇದುವರೆಗೆ 335 ಸಿಕ್ಸರ್​ಗಳನ್ನು ಪೂರ್ಣಗೊಳಿಸಿದ್ದಾರೆ.

Published On - 7:38 pm, Sun, 9 February 25

Loading...
Unable to load recommendations.
Follow Us