- Kannada News Photo gallery Cricket photos IND vs ENG 2nd Test: Mohammed Siraj Equals Bumrah's Special Record
4 ಕಡೆ 5: ಬೆಂಕಿ ಬೌಲಿಂಗ್‌ನೊಂದಿಗೆ ಭರ್ಜರಿ ದಾಖಲೆ ಬರೆದ ಸಿರಾಜ್
India vs England 2nd Test: ಎಡ್ಜ್ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ನಲ್ಲಿ 587 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಇಂಗ್ಲೆಂಡ್ ತಂಡವು 407 ರನ್ಗಳಿಸಿದೆ. ಇದೀಗ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್ ಆರಂಭಿಸಿದ್ದು, ಮೂರನೇ ದಿನದಾಟದ ಅಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 64 ರನ್ಗಳಿಸಿದೆ.
Updated on: Jul 05, 2025 | 8:54 AM

ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶಿಸಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ (Mohammed Siraj) ವಿಶೇಷ ದಾಖಲೆ ಬರೆದಿದ್ದಾರೆ. ಅದು ಸಹ ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ ಅವರ ಸ್ಪೆಷಲ್ ರೆಕಾರ್ಡ್ ಅನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

ಬರ್ಮಿಂಗ್ಹ್ಯಾಮ್ನ ಎಡ್ಜ್ ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ 19.3 ಓವರ್ ಎಸೆದ ಸಿರಾಜ್ ಕೇವಲ 70 ರನ್ ನೀಡಿ 6 ವಿಕೆಟ್ ಉರುಳಿಸಿದರು. ಇದು ಇಂಗ್ಲೆಂಡ್ ನಲ್ಲಿ ಸಿರಾಜ್ ಅವರ ಮೊದಲ ಫೈಫರ್ ಎಂಬುದು ವಿಶೇಷ.

ಇದರೊಂದಿಗೆ ಇಂಗ್ಲೆಂಡ್, ಆಸ್ಟ್ರೇಲಿಯಾ, ವೆಸ್ಟ್ ಇಂಡೀಸ್ ಹಾಗೂ ಸೌತ್ ಆಫ್ರಿಕಾದಲ್ಲಿ ಇನಿಂಗ್ಸ್ ವೊಂದರಲ್ಲಿ 5 ವಿಕೆಟ್ ಗಳನ್ನು (ಫೈಫರ್) ಕಬಳಿಸಿದ ಭಾರತದ 2ನೇ ವೇಗಿ ಎಂಬ ದಾಖಲೆಯನ್ನು ಮೊಹಮ್ಮದ್ ಸಿರಾಜ್ ತಮ್ಮದಾಗಿಸಿಕೊಂಡರು.

ಇದಕ್ಕೂ ಮುನ್ನ ಇಂತಹದೊಂದು ಸಾಧನೆ ಮಾಡಿದ್ದು ಜಸ್ಪ್ರೀತ್ ಬುಮ್ರಾ ಮಾತ್ರ. ಬುಮ್ರಾ ಕೂಡ ಇಂಗ್ಲೆಂಡ್, ಆಸ್ಟ್ರೇಲಿಯಾ, ವೆಸ್ಟ್ ಇಂಡೀಸ್ ಹಾಗೂ ಸೌತ್ ಆಫ್ರಿಕಾದಲ್ಲಿ ಇನಿಂಗ್ಸ್ ವೊಂದರಲ್ಲಿ 5 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

ಇದೀಗ 6 ವಿಕೆಟ್ ಗಳೊಂದಿಗೆ ಈ ದಾಖಲೆ ಪಟ್ಟಿಗೆ ಮೊಹಮ್ಮದ್ ಸಿರಾಜ್ ಸೇರ್ಪಡೆಯಾಗಿದ್ದಾರೆ. ಇನ್ನು ಸಿರಾಜ್ ಅವರ ಈ ಮಾರಕ ದಾಳಿಯಿಂದಾಗಿ ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್ ನಲ್ಲಿ 407 ರನ್ ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 180 ರನ್ ಗಳ ಮುನ್ನಡೆ ಪಡೆದುಕೊಂಡಿದೆ.
