IND vs ENG 2nd Test: ಒಂದಲ್ಲ.. ಎರಡಲ್ಲ.., ಬರೋಬ್ಬರಿ 5 ದಾಖಲೆ ಪುಡಿಗಟ್ಟಲು ಸಜ್ಜಾದ ರವಿಚಂದ್ರನ್ ಅಶ್ವಿನ್
Ravichandran Ashwin Record: ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ರವೀಂದ್ರ ಜಡೇಜಾ ಅವರ ಅನುಪಸ್ಥಿತಿಯಲ್ಲಿ ರವಿಚಂದ್ರನ್ ಅಶ್ವಿನ್ ಅವರ ಹೆಗಲ ಮೇಲೆ ಹೆಚ್ಚಿನ ಜವಾಬ್ದಾರಿಗಳಿವೆ. ಇದರ ನಡುವೆ ಟೆಸ್ಟ್ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನದಲ್ಲಿರುವ ಮತ್ತು ಮೊದಲ ಪಂದ್ಯದಲ್ಲಿ 6 ವಿಕೆಟ್‌ಗಳನ್ನು ಪಡೆದಿರುವ ಅಶ್ವಿನ್ ಅನೇಕ ವೈಯಕ್ತಿಕ ಮೈಲಿಗಲ್ಲುಗಳನ್ನು ಸಾಧಿಸುವ ಸಾಲಿನಲ್ಲಿದ್ದಾರೆ.
1 / 7
ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಸರಣಿಯ ಎರಡನೇ ಟೆಸ್ಟ್ ವಿಶಾಖಪಟ್ಟಣದಲ್ಲಿ ನಡೆಯಲಿದೆ. ಡಾ.ವೈ.ಎಸ್.ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ಶುಕ್ರವಾರ (ಫೆಬ್ರವರಿ 2) ಪಂದ್ಯ ಆರಂಭವಾಗಲಿದೆ. ಕಳೆದ ವಾರ ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ 28 ರನ್‌ಗಳಿಂದ ಸೋತ ನಂತರ, ಭಾರತ ತಂಡವು ಎರಡನೇ ಟೆಸ್ಟ್‌ನಲ್ಲಿ ಕಮ್‌ಬ್ಯಾಕ್ ಮಾಡಿ ಸರಣಿಯನ್ನು ಸಮಬಲಗೊಳಿಸಲು ಬಯಸುತ್ತದೆ.
2 / 7
ಎರಡನೇ ಟೆಸ್ಟ್‌ಗೆ ಭಾರತವು ರವೀಂದ್ರ ಜಡೇಜಾ ಮತ್ತು ಕೆಎಲ್ ರಾಹುಲ್ ಅವರ ಸೇವೆಯಿಲ್ಲದೆ ಕಣಕ್ಕಿಳಿಯಲಿದೆ. ಜಡೇಜಾ ಮಂಡಿರಜ್ಜು ಸಮಸ್ಯೆಯಿಂದ ಹೊರಗುಳಿದಿದ್ದು, ಅವರ ಅನುಪಸ್ಥಿತಿಯಲ್ಲಿ ರವಿಚಂದ್ರನ್ ಅಶ್ವಿನ್ ಅವರ ಹೆಗಲ ಮೇಲೆ ಹೆಚ್ಚಿನ ಜವಾಬ್ದಾರಿಗಳಿವೆ. ಟೆಸ್ಟ್ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನದಲ್ಲಿರುವ ಮತ್ತು ಮೊದಲ ಪಂದ್ಯದಲ್ಲಿ 6 ವಿಕೆಟ್‌ಗಳನ್ನು ಪಡೆದಿರುವ ಅಶ್ವಿನ್ ಅನೇಕ ವೈಯಕ್ತಿಕ ಮೈಲಿಗಲ್ಲುಗಳನ್ನು ಸಾಧಿಸುವ ಸಾಲಿನಲ್ಲಿದ್ದಾರೆ.
3 / 7
ಇಂಗ್ಲೆಂಡ್ ವಿರುದ್ಧದ ಒಟ್ಟು 20 ಟೆಸ್ಟ್ ಪಂದ್ಯಗಳಲ್ಲಿ ಅಶ್ವಿನ್ ಇದುವರೆಗೆ 93 ವಿಕೆಟ್ ಪಡೆದಿದ್ದಾರೆ. 23 ಟೆಸ್ಟ್‌ಗಳಲ್ಲಿ 95 ವಿಕೆಟ್‌ಗಳನ್ನು ಕಬಳಿಸಿದ ಭಗವತ್ ಚಂದ್ರಶೇಖರ್ ಅವರ ದಾಖಲೆಯನ್ನು ಮುರಿಯಲು ಮತ್ತು ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ಗಳಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಲು ಅವರಿಗೆ ಎರಡನೇ ಟೆಸ್ಟ್‌ನಲ್ಲಿ ಇನ್ನೂ ಮೂರು ವಿಕೆಟ್‌ಗಳ ಅಗತ್ಯವಿದೆ.
4 / 7
ಅಶ್ವಿನ್ ಇದುವರೆಗೆ ಆಡಿರುವ 96 ಟೆಸ್ಟ್‌ಗಳಲ್ಲಿ 496 ವಿಕೆಟ್‌ಗಳನ್ನು ಪಡೆದಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ 500 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್‌ಗಳನ್ನು ಪಡೆದ ಎರಡನೇ ಭಾರತೀಯ ಮತ್ತು ಒಂಬತ್ತನೇ ಬೌಲರ್ ಆಗಲು ಅವರಿಗೆ ವೈಜಾಗ್ ಟೆಸ್ಟ್‌ನಲ್ಲಿ ನಾಲ್ಕು ವಿಕೆಟ್‌ಗಳ ಅಗತ್ಯವಿದೆ. ಅಶ್ವಿನ್ ವಿಶಾಖಪಟ್ಟಣಂನಲ್ಲಿ ಈ ಸಾಧನೆ ಮಾಡಲು ಯಶಸ್ವಿಯಾದರೆ ಟೆಸ್ಟ್ ಕ್ರಿಕೆಟ್‌ನಲ್ಲಿ 500 ವಿಕೆಟ್‌ಗಳನ್ನು ಕಬಳಿಸಿದ ವೇಗದ ಭಾರತೀಯ ಮತ್ತು ಒಟ್ಟಾರೆ ಎರಡನೇ ಅತಿ ವೇಗದ ಆಟಗಾರನಾಗಲಿದ್ದಾರೆ.
5 / 7
ಅಶ್ವಿನ್ ಎರಡನೇ ಟೆಸ್ಟ್‌ನಲ್ಲಿ ಏಳು ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾದರೆ, ಅವರು ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯಗಳಲ್ಲಿ 100 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್‌ಗಳನ್ನು ಪಡೆದ ಮೊದಲ ಭಾರತೀಯ ಬೌಲರ್ ಮತ್ತು ಎರಡನೇ ಬೌಲರ್ ಆಗುತ್ತಾರೆ. ಇಂಗ್ಲೆಂಡ್‌ನ ಜೇಮ್ಸ್ ಆಂಡರ್ಸನ್ 139 ವಿಕೆಟ್‌ಗಳೊಂದಿಗೆ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ.
6 / 7
ಅಶ್ವಿನ್ ಭಾರತದಲ್ಲಿ ಇದುವರೆಗೆ ಆಡಿರುವ 56 ಟೆಸ್ಟ್‌ಗಳಲ್ಲಿ 343 ವಿಕೆಟ್‌ಗಳನ್ನು ಪಡೆದಿದ್ದಾರೆ. ಭಾರತದ ನೆಲದಲ್ಲಿ ಆಡಿದ ಟೆಸ್ಟ್‌ಗಳಲ್ಲಿ 350 ಬ್ಯಾಟರ್‌ಗಳನ್ನು ಔಟ್ ಮಾಡಿದ ಅನಿಲ್ ಕುಂಬ್ಳೆ ಅವರ ದಾಖಲೆಯನ್ನು ಮುರಿಯಲು ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ಅವರಿಗೆ ಎಂಟು ವಿಕೆಟ್‌ಗಳ ಅಗತ್ಯವಿದೆ.
7 / 7
ಇದುವರೆಗೆ ಆಡಿರುವ 96 ಟೆಸ್ಟ್ ಪಂದ್ಯಗಳಲ್ಲಿ ಅಶ್ವಿನ್ 34 ಐದು ವಿಕೆಟ್ ಗೊಂಚಲು ಪಡೆದಿದ್ದಾರೆ. ಅವರು ಎರಡೂ ಇನ್ನಿಂಗ್ಸ್‌ಗಳಲ್ಲಿ ಐದು ವಿಕೆಟ್‌ಗಳನ್ನು ಗಳಿಸುವಲ್ಲಿ ಯಶಸ್ವಿಯಾದರೆ, ಟೆಸ್ಟ್‌ನಲ್ಲಿ ಭಾರತಕ್ಕಾಗಿ 35 ಐದು ವಿಕೆಟ್‌ಗಳನ್ನು ಪಡೆದ ಅನಿಲ್ ಕುಂಬ್ಳೆ ಅವರ ದಾಖಲೆಯನ್ನು ಮುರಿಯುತ್ತಾರೆ.