IND vs ENG: ವಿಶಾಖಪಟ್ಟಣಂನಲ್ಲಿ ಅಜೇಯ ಓಟ ಮುಂದುವರೆಸಿದ ಟೀಂ ಇಂಡಿಯಾ..!

IND vs ENG: ವಾಸ್ತವವಾಗಿ ವಿಶಾಖಪಟ್ಟಣಂ ಟೆಸ್ಟ್​ನಲ್ಲಿ ಟೀಂ ಇಂಡಿಯಾಗೆ ಇದು ಮೂರನೇ ಟೆಸ್ಟ್ ಪಂದ್ಯವಾಗಿದೆ. ಇದಕ್ಕೂ ಮುನ್ನ ತಂಡ ಈ ಮೈದಾನದಲ್ಲಿ ಇದೇ ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳನ್ನು ಎದುರಿಸಿತ್ತು. ಈ ಎರಡೂ ಪಂದ್ಯಗಳಲ್ಲೂ ಅಮೋಘ ಜಯ ಸಾಧಿಸಿತ್ತು.

TV9 Web
| Updated By: ಪೃಥ್ವಿಶಂಕರ

Updated on:Feb 05, 2024 | 2:54 PM

ವಿಶಾಖಪಟ್ಟಣಂನ ಡಾ. ವೈಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ 106 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಸರಣಿಯನ್ನು 1-1 ರಿಂದ ಸಮಬಲಗೊಳಿಸಿದೆ.

1 / 8
ವಿಶಾಖಪಟ್ಟಣಂನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ಮೊದಲ ಇನ್ನಿಂಗ್ಸ್​ನಲ್ಲಿ 396 ರನ್ ಕಲೆಹಾಕಿತು. ತಂಡದ ಪರ ಆರಂಭಿಕ ಯಶಸ್ವಿ ಜೈಸ್ವಾಲ್ ದಾಖಲೆಯ ದ್ವಿಶತಕ ಸಿಡಿಸಿ ಮಿಂಚಿದರು. ಇದಕ್ಕುತ್ತರವಾಗಿ ಇಂಗ್ಲೆಂಡ್ ತಂಡ 253 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತ್ತು

2 / 8
143 ರನ್​ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ 255 ರನ್​ಗಳಿಗೆ ತನ್ನ ಎರಡನೇ ಇನ್ನಿಂಗ್ಸ್ ಮುಗಿಸಿತು. ತಂಡದ ಪರ ಶುಭ್​ಮನ್ ಗಿಲ್ ಶತಕ ಸಿಡಿಸಿ ಮಿಂಚಿದರು. ಇದರೊಂದಿಗೆ ಇಂಗ್ಲೆಂಡ್​ಗೆ 399 ರನ್​ಗಳ ಗೆಲುವಿನ ಗುರಿ ನೀಡಿತು.

3 / 8
ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ 4ನೇ ದಿನದಾಟದ ಎರಡನೇ ಸೆಷನ್​ನಲ್ಲಿ 292 ರನ್​ಗಳಿಗೆ ಆಲೌಟ್ ಆಗುವ ಮೂಲಕ 106 ರನ್​ಗಳ ಸೋಲೊಪ್ಪಿಕೊಂಡಿತು. ವಿಶಾಖಪಟ್ಟಣಂನಲ್ಲಿ ಆಂಗ್ಲರನ್ನು ಮಣಿಸುವ ಮೂಲಕ ಮೊದಲ ಟೆಸ್ಟ್ ಸೋಲಿಗೆ ಸೇಡು ತೀರಿಸಿಕೊಂಡ ಭಾರತ, ಈ ಗೆಲುವಿನೊಂದಿಗೆ ಈ ಮೈದಾನದಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿತು.

4 / 8
ವಾಸ್ತವವಾಗಿ ವಿಶಾಖಪಟ್ಟಣಂ ಟೆಸ್ಟ್​ನಲ್ಲಿ ಟೀಂ ಇಂಡಿಯಾಗೆ ಇದು ಮೂರನೇ ಟೆಸ್ಟ್ ಪಂದ್ಯವಾಗಿದೆ. ಇದಕ್ಕೂ ಮುನ್ನ ತಂಡ ಈ ಮೈದಾನದಲ್ಲಿ ಇದೇ ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳನ್ನು ಎದುರಿಸಿತ್ತು. ಈ ಎರಡೂ ಪಂದ್ಯಗಳಲ್ಲೂ ಅಮೋಘ ಜಯ ಸಾಧಿಸಿತ್ತು.

5 / 8
ಇದೇ ಇಂಗ್ಲೆಂಡ್ ವಿರುದ್ಧ 2016 ರಲ್ಲಿ ತನ್ನ ಮೊದಲ ಟೆಸ್ಟ್ ಪಂದ್ಯವನ್ನು ಈ ಮೈದಾನದಲಲಿ ಆಡಿದ್ದ ಭಾರತ, ಈ ಪಂದ್ಯವನ್ನು 246 ರನ್‌ಗಳಿಂದ ಗೆದ್ದುಕೊಂಡಿತ್ತು. ಆ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತು ಚೇತೇಶ್ವರ ಪೂಜಾರ ಶತಕದ ಇನಿಂಗ್ಸ್ ಆಡಿದ್ದರು.

6 / 8
ಆ ನಂತರ ದಕ್ಷಿಣ ಆಫ್ರಿಕಾ ವಿರುದ್ಧ 2019 ರಲ್ಲಿ ಇದೇ ಮೈದಾನದಲ್ಲಿ ತನ್ನ ಎರಡನೇ ಟೆಸ್ಟ್ ಪಂದ್ಯವನ್ನಾಡಿದ್ದ ಟೀಂ ಇಂಡಿಯಾ, ಈ ಪಂದ್ಯದಲ್ಲೂ 203 ರನ್‌ಗಳ ಭಾರಿ ಜಯ ಸಾಧಿಸಿತ್ತು.

7 / 8
ಇದೀಗ ಎರಡನೇ ಬಾರಿಗೆ ವಿಶಾಖಪಟ್ಟಣಂ ಮೈದಾನದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಿದ್ದ ಭಾರತ ಈ ಮೈದಾನದಲ್ಲಿ ಆಂಗ್ಲರ ವಿರುದ್ಧ ಸತತ ಎರಡನೇ ಜಯ ದಾಖಲಿಸಿದೆ. ಈ ಮೂಲಕ ವಿಶಾಖಪಟ್ಟಣಂನಲ್ಲಿ ಟೀಂ ಇಂಡಿಯಾ ಸೋಲಿಲ್ಲದ ಸರದಾರನೆನಿಸಿಕೊಂಡಿದೆ.

8 / 8

Published On - 2:45 pm, Mon, 5 February 24

Follow us
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ

ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ

ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು

ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?

ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ

ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ

ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ

Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು

ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು

ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ