IND vs ENG: ವಿಶಾಖಪಟ್ಟಣಂನಲ್ಲಿ ಅಜೇಯ ಓಟ ಮುಂದುವರೆಸಿದ ಟೀಂ ಇಂಡಿಯಾ..!
TV9 Web | Updated By: ಪೃಥ್ವಿಶಂಕರ
Updated on:
Feb 05, 2024 | 2:54 PM
IND vs ENG: ವಾಸ್ತವವಾಗಿ ವಿಶಾಖಪಟ್ಟಣಂ ಟೆಸ್ಟ್ನಲ್ಲಿ ಟೀಂ ಇಂಡಿಯಾಗೆ ಇದು ಮೂರನೇ ಟೆಸ್ಟ್ ಪಂದ್ಯವಾಗಿದೆ. ಇದಕ್ಕೂ ಮುನ್ನ ತಂಡ ಈ ಮೈದಾನದಲ್ಲಿ ಇದೇ ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳನ್ನು ಎದುರಿಸಿತ್ತು. ಈ ಎರಡೂ ಪಂದ್ಯಗಳಲ್ಲೂ ಅಮೋಘ ಜಯ ಸಾಧಿಸಿತ್ತು.
1 / 8
ವಿಶಾಖಪಟ್ಟಣಂನ ಡಾ. ವೈಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ 106 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಸರಣಿಯನ್ನು 1-1 ರಿಂದ ಸಮಬಲಗೊಳಿಸಿದೆ.
2 / 8
ವಿಶಾಖಪಟ್ಟಣಂನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ಮೊದಲ ಇನ್ನಿಂಗ್ಸ್ನಲ್ಲಿ 396 ರನ್ ಕಲೆಹಾಕಿತು. ತಂಡದ ಪರ ಆರಂಭಿಕ ಯಶಸ್ವಿ ಜೈಸ್ವಾಲ್ ದಾಖಲೆಯ ದ್ವಿಶತಕ ಸಿಡಿಸಿ ಮಿಂಚಿದರು. ಇದಕ್ಕುತ್ತರವಾಗಿ ಇಂಗ್ಲೆಂಡ್ ತಂಡ 253 ರನ್ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತ್ತು
3 / 8
143 ರನ್‌ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ 255 ರನ್ಗಳಿಗೆ ತನ್ನ ಎರಡನೇ ಇನ್ನಿಂಗ್ಸ್ ಮುಗಿಸಿತು. ತಂಡದ ಪರ ಶುಭ್ಮನ್ ಗಿಲ್ ಶತಕ ಸಿಡಿಸಿ ಮಿಂಚಿದರು. ಇದರೊಂದಿಗೆ ಇಂಗ್ಲೆಂಡ್ಗೆ 399 ರನ್‌ಗಳ ಗೆಲುವಿನ ಗುರಿ ನೀಡಿತು.
4 / 8
ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ 4ನೇ ದಿನದಾಟದ ಎರಡನೇ ಸೆಷನ್ನಲ್ಲಿ 292 ರನ್ಗಳಿಗೆ ಆಲೌಟ್ ಆಗುವ ಮೂಲಕ 106 ರನ್‌ಗಳ ಸೋಲೊಪ್ಪಿಕೊಂಡಿತು. ವಿಶಾಖಪಟ್ಟಣಂನಲ್ಲಿ ಆಂಗ್ಲರನ್ನು ಮಣಿಸುವ ಮೂಲಕ ಮೊದಲ ಟೆಸ್ಟ್ ಸೋಲಿಗೆ ಸೇಡು ತೀರಿಸಿಕೊಂಡ ಭಾರತ, ಈ ಗೆಲುವಿನೊಂದಿಗೆ ಈ ಮೈದಾನದಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿತು.
5 / 8
ವಾಸ್ತವವಾಗಿ ವಿಶಾಖಪಟ್ಟಣಂ ಟೆಸ್ಟ್ನಲ್ಲಿ ಟೀಂ ಇಂಡಿಯಾಗೆ ಇದು ಮೂರನೇ ಟೆಸ್ಟ್ ಪಂದ್ಯವಾಗಿದೆ. ಇದಕ್ಕೂ ಮುನ್ನ ತಂಡ ಈ ಮೈದಾನದಲ್ಲಿ ಇದೇ ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳನ್ನು ಎದುರಿಸಿತ್ತು. ಈ ಎರಡೂ ಪಂದ್ಯಗಳಲ್ಲೂ ಅಮೋಘ ಜಯ ಸಾಧಿಸಿತ್ತು.
6 / 8
ಇದೇ ಇಂಗ್ಲೆಂಡ್ ವಿರುದ್ಧ 2016 ರಲ್ಲಿ ತನ್ನ ಮೊದಲ ಟೆಸ್ಟ್ ಪಂದ್ಯವನ್ನು ಈ ಮೈದಾನದಲಲಿ ಆಡಿದ್ದ ಭಾರತ, ಈ ಪಂದ್ಯವನ್ನು 246 ರನ್‌ಗಳಿಂದ ಗೆದ್ದುಕೊಂಡಿತ್ತು. ಆ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತು ಚೇತೇಶ್ವರ ಪೂಜಾರ ಶತಕದ ಇನಿಂಗ್ಸ್ ಆಡಿದ್ದರು.
7 / 8
ಆ ನಂತರ ದಕ್ಷಿಣ ಆಫ್ರಿಕಾ ವಿರುದ್ಧ 2019 ರಲ್ಲಿ ಇದೇ ಮೈದಾನದಲ್ಲಿ ತನ್ನ ಎರಡನೇ ಟೆಸ್ಟ್ ಪಂದ್ಯವನ್ನಾಡಿದ್ದ ಟೀಂ ಇಂಡಿಯಾ, ಈ ಪಂದ್ಯದಲ್ಲೂ 203 ರನ್‌ಗಳ ಭಾರಿ ಜಯ ಸಾಧಿಸಿತ್ತು.
8 / 8
ಇದೀಗ ಎರಡನೇ ಬಾರಿಗೆ ವಿಶಾಖಪಟ್ಟಣಂ ಮೈದಾನದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಿದ್ದ ಭಾರತ ಈ ಮೈದಾನದಲ್ಲಿ ಆಂಗ್ಲರ ವಿರುದ್ಧ ಸತತ ಎರಡನೇ ಜಯ ದಾಖಲಿಸಿದೆ. ಈ ಮೂಲಕ ವಿಶಾಖಪಟ್ಟಣಂನಲ್ಲಿ ಟೀಂ ಇಂಡಿಯಾ ಸೋಲಿಲ್ಲದ ಸರದಾರನೆನಿಸಿಕೊಂಡಿದೆ.
Published On - 2:45 pm, Mon, 5 February 24