IND vs ENG: ತವರಿನಲ್ಲಿ ಚೊಚ್ಚಲ ಶತಕ ಸಿಡಿಸಿ ಹಲವು ದಾಖಲೆ ನಿರ್ಮಿಸಿದ ಯಶಸ್ವಿ ಜೈಸ್ವಾಲ್..!

|

Updated on: Feb 02, 2024 | 2:45 PM

Yashasvi Jaiswal: ವಿಶಾಖಪಟ್ಟಣಂನಲ್ಲಿ ತಾಳ್ಮೆಯ ಇನ್ನಿಂಗ್ಸ್ ಕಟ್ಟಿದ ಜೈಸ್ವಾಲ್ 151 ಎಸೆತಗಳಲ್ಲಿ ಶತಕ ಪೂರೈಸಿದರು. ಭಾರತದ ಪರ ಕೇವಲ 6 ಟೆಸ್ಟ್ ಪಂದ್ಯಗಳನ್ನಾಡಿರುವ ಜೈಸ್ವಾಲ್‌ಗೆ ಭಾರತದ ನೆಲದಲ್ಲಿ ಇದು ಚೊಚ್ಚಲ ಟೆಸ್ಟ್ ಶತಕವಾಗಿರುವುದರಿಂದ ಈ ಶತಕ ಜೈಸ್ವಾಲ್ ವೃತ್ತಿ ಬದುಕಿನಲ್ಲಿ ಅತ್ಯಂತ ವಿಶೇಷವಾಗಿದೆ.

1 / 7
ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಎಡಗೈ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ತಮ್ಮ ಟೆಸ್ಟ್ ಬದುಕಿನ ಎರಡನೇ ಶತಕ ಸಿಡಿಸಿ ಮಿಂಚಿದ್ದಾರೆ. ಇದಕ್ಕೂ ಮುನ್ನ ನಡೆದ ಹೈದರಾಬಾದ್ ಟೆಸ್ಟ್‌ನಲ್ಲಿ ಶತಕ ವಂಚಿತರಾಗಿದ್ದ ಜೈಸ್ವಾಲ್ 80 ರನ್ ಗಳಿಸಿ ಔಟಾಗಿದ್ದರು.

2 / 7
ಆದರೆ ವಿಶಾಖಪಟ್ಟಣಂನಲ್ಲಿ ತಾಳ್ಮೆಯ ಇನ್ನಿಂಗ್ಸ್ ಕಟ್ಟಿದ ಜೈಸ್ವಾಲ್ 151 ಎಸೆತಗಳಲ್ಲಿ ಶತಕ ಪೂರೈಸಿದರು. ಭಾರತದ ಪರ ಕೇವಲ 6 ಟೆಸ್ಟ್ ಪಂದ್ಯಗಳನ್ನಾಡಿರುವ ಜೈಸ್ವಾಲ್‌ಗೆ ಭಾರತದ ನೆಲದಲ್ಲಿ ಇದು ಚೊಚ್ಚಲ ಟೆಸ್ಟ್ ಶತಕವಾಗಿರುವುದರಿಂದ ಈ ಶತಕ ಜೈಸ್ವಾಲ್ ವೃತ್ತಿ ಬದುಕಿನಲ್ಲಿ ಅತ್ಯಂತ ವಿಶೇಷವಾಗಿದೆ.

3 / 7
ನಾಯಕ ರೋಹಿತ್ ಇನ್ನಿಂಗ್ಸ್ ಆರಂಭಿಸಿದ ಜೈಸ್ವಾಲ್‌ ಏಕಾಂಗಿಯಾಗಿ ತಂಡದ ಇನ್ನಿಂಗ್ಸ್ ನಿಭಾಯಿಸುತ್ತಿದ್ದಾರೆ. ಏಕೆಂದರೆ ನಾಯಕ ರೋಹಿತ್, ಶುಭ್​ಮನ್ ಗಿಲ್ ಹಾಗೂ ಶ್ರೇಯಸ್ ಅಯ್ಯರ್ ಬೇಗನೇ ಪೆವಿಲಿಯನ್ ಸೇರಿಕೊಂಡರೂ ಜವಬ್ದಾರಿ ಮರೆಯದ ಜೈಸ್ವಾಲ್ ತಂಡವನ್ನು 200 ರ ಗಡಿ ದಾಟಿಸಿದ್ದಾರೆ.

4 / 7
ಮೊದಲು ಅರ್ಧಶತಕ ಪೂರೈಸಿದ ಜೈಸ್ವಾಲ್ ನಂತರ 151 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಅವಧಿಯಲ್ಲಿ ಅವರ ಬ್ಯಾಟ್‌ನಿಂದ 11 ಬೌಂಡರಿ ಮತ್ತು ಮೂರು ಸಿಕ್ಸರ್‌ಗಳು ಸಿಡಿದವು. ಕುತೂಹಲಕಾರಿ ಸಂಗತಿಯೆಂದರೆ, ಅವರು ಸಿಕ್ಸರ್ ಬಾರಿಸುವ ಮೂಲಕ ತಮ್ಮ ಶತಕವನ್ನು ಪೂರ್ಣಗೊಳಿಸಿದರು. ಇದು ಹೆಚ್ಚಿನ ಮಟ್ಟಿಗೆ ಭಾರತದ ಆರಂಭಿಕ ಬ್ಯಾಟ್ಸ್‌ಮನ್ ವೀರೇಂದ್ರ ಸೆಹ್ವಾಗ್ ಅವರನ್ನು ನೆನಪಿಸುತ್ತದೆ.

5 / 7
ಇದರೊಂದಿಗೆ ಜೈಸ್ವಾಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 1000 ರನ್ ಪೂರೈಸಿದ್ದಾರೆ. ಜೈಸ್ವಾಲ್ ಈ ಹಿಂದೆ 17 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 502 ರನ್ ಗಳಿಸಿದ್ದರು. ಈ ಪಂದ್ಯಕ್ಕೂ ಮುನ್ನ ಅವರು 5 ಟೆಸ್ಟ್ ಪಂದ್ಯಗಳಲ್ಲಿ 411 ರನ್ ಗಳಿಸಿದ್ದರು. ಇದೀಗ ಶತಕ ಸಿಡಿಸುವ ಮೂಲಕ ತಮ್ಮ ಟೆಸ್ಟ್​ ರನ್​ಗಳನ್ನು 500ರ ಗಡಿ ದಾಟಿಸಿದ್ದಾರೆ.

6 / 7
ಯಶಸ್ವಿ ಜೈಸ್ವಾಲ್ ಅವರ ಈ ಶತಕದ ವಿಶೇಷವೆಂದರೆ ಭಾರತ ಮತ್ತು ಇಂಗ್ಲೆಂಡ್ ನಡುವಿನ ಈ ಟೆಸ್ಟ್ ಸರಣಿಯಲ್ಲಿ ಇದು ಟೀಂ ಇಂಡಿಯಾದಿಂದ ಮೊದಲ ಶತಕವಾಗಿದೆ. ಮೊದಲ ಪಂದ್ಯದಲ್ಲಿ ಕೆಎಲ್ ರಾಹುಲ್, ರವೀಂದ್ರ ಜಡೇಜಾ ಮತ್ತು ಯಶಸ್ವಿ ಜೈಸ್ವಾಲ್ 70ಕ್ಕೂ ಹೆಚ್ಚು ರನ್‌ಗಳ ಇನ್ನಿಂಗ್ಸ್‌ಗಳನ್ನು ಆಡಿದರು, ಆದರೆ ಯಾರೊಬ್ಬರಿಗೂ ಶತಕ ಪೂರೈಸಲು ಸಾಧ್ಯವಾಗಲಿಲ್ಲ.

7 / 7
ಮೊದಲ ದಿನದಾಟದ ಟೀ ವಿರಾಮದ ವೇಳೆಗೆ ಭಾರತ 3 ವಿಕೆಟ್ ಕಳೆದುಕೊಂಡು 227 ರನ್ ಕಲೆಹಾಕಿದೆ. ಆರಂಭಿಕ ಯಶಸ್ವಿ ಜೈಸ್ವಾಲ್ 190 ಎಸೆತಗಳಲ್ಲಿ 127 ರನ್ ಗಳಿಸಿ ಆಡುತ್ತಿದ್ದರೆ, ಚೊಚ್ಚಲ ಪಂದ್ಯವನ್ನಾಡುತ್ತಿರುವ ರಜತ್ ಪಾಟಿದರ್ 55 ಎಸೆತಗಳಲ್ಲಿ 26 ರನ್ ಸಿಡಿಸಿ ಬ್ಯಾಟ್ ಬೀಸುತ್ತಿದ್ದಾರೆ.