Team India: ಟೀಮ್ ಇಂಡಿಯಾದಿಂದ ಮೂವರು ಔಟ್: ಮತ್ತಿಬ್ಬರು ಡೌಟ್..!
TV9 Web | Updated By: ಝಾಹಿರ್ ಯೂಸುಫ್
Updated on:
Feb 10, 2024 | 1:04 PM
India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ 3ನೇ ಟೆಸ್ಟ್ ಪಂದ್ಯವು ಫೆಬ್ರವರಿ 15 ರಿಂದ ಶುರುವಾಗಲಿದೆ. ರಾಜ್ಕೋಟ್ನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾವನ್ನು ಘೋಷಿಸಲಾಗಿದೆ. ಈ ತಂಡದಲ್ಲಿರುವ ಇಬ್ಬರು ಆಟಗಾರರು ಮುಂದಿನ ಪಂದ್ಯಕ್ಕೆ ಅನುಮಾನ. ಹಾಗೆಯೇ ಮೊದಲೆರಡು ಟೆಸ್ಟ್ ಪಂದ್ಯಗಳ ವೇಳೆ ಕಾಣಿಸಿಕೊಂಡಿದ್ದ ಮೂವರು ಆಟಗಾರರು ತಂಡದಿಂದ ಹೊರಬಿದ್ದಿದ್ದಾರೆ.
1 / 7
ಇಂಗ್ಲೆಂಡ್ ವಿರುದ್ಧದ ಕೊನೆಯ ಮೂರು ಟೆಸ್ಟ್ ಪಂದ್ಯಗಳಿಗೆ ಭಾರತ ತಂಡವನ್ನು (India Test Squad) ಪ್ರಕಟಿಸಲಾಗಿದೆ. ಈ ಬಾರಿಯ ಒಟ್ಟು 17 ಸದಸ್ಯರಿಗೆ ಅವಕಾಶ ನೀಡಲಾಗಿದ್ದು, ಮೂವರು ಆಟಗಾರರನ್ನು ಕೈ ಬಿಡಲಾಗಿದೆ. ಅಂದರೆ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿದ್ದ ಮೂವರು ಆಟಗಾರರು ಈ ಬಾರಿ ಆಯ್ಕೆಯಾಗಿಲ್ಲ. ಆ ಆಟಗಾರರೆಂದರೆ...
2 / 7
ಶ್ರೇಯಸ್ ಅಯ್ಯರ್: ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಪರ ಶ್ರೇಯಸ್ ಅಯ್ಯರ್ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದರು. ಆದರೆ ಅವರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಇದೀಗ ಅಯ್ಯರ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಇತ್ತ ಗಾಯದ ಕಾರಣ ಶ್ರೇಯಸ್ಗೆ ಅವಕಾಶ ನೀಡಲಾಗಿಲ್ಲ ಎಂಬ ಮಾತು ಕೇಳಿಬಂದರೂ ಬಿಸಿಸಿಐ ಈ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ. ಹೀಗಾಗಿ ಕಳಪೆ ಪ್ರದರ್ಶನದ ಕಾರಣ ಶ್ರೇಯಸ್ ಅಯ್ಯರ್ ಅವರನ್ನು ಆಯ್ಕೆಗೆ ಪರಿಗಣಿಸಿಲ್ಲ ಎಂದೇ ಹೇಳಬಹುದು.
3 / 7
ಅವೇಶ್ ಖಾನ್: ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಆಯ್ಕೆ ಮಾಡಲಾದ ತಂಡದಲ್ಲಿ ಅವೇಶ್ ಖಾನ್ ಕೂಡ ಕಾಣಿಸಿಕೊಂಡಿದ್ದರು. ಆದರೆ ಅವರಿಗೆ ಆಡುವ ಅವಕಾಶ ದೊರೆತಿರಲಿಲ್ಲ. ಇದೀಗ ಉಳಿದ ಮೂರು ಪಂದ್ಯಗಳಿಗೆ ಆಯ್ಕೆ ಮಾಡಲಾದ ತಂಡದಲ್ಲಿ ಅವೇಶ್ ಖಾನ್ ಅವರಿಗೆ ಸ್ಥಾನ ನೀಡಲಾಗಿಲ್ಲ.
4 / 7
ಸೌರಭ್ ಕುಮಾರ್: ಎರಡನೇ ಟೆಸ್ಟ್ ಪಂದ್ಯದಿಂದ ರವೀಂದ್ರ ಜಡೇಜಾ ಗಾಯದ ಕಾರಣ ಹೊರಗುಳಿದಿದ್ದರು. ಅವರ ಬದಲಿಗೆ ಎಡಗೈ ಸ್ಪಿನ್ನರ್ ಸೌರಭ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿತ್ತು. ಇದಾಗ್ಯೂ ಅವರು ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ಉಳಿದ ಪಂದ್ಯಗಳಿಗೆ ಆಯ್ಕೆ ಮಾಡಲಾದ ತಂಡದಿಂದ ಸೌರಭ್ ಅವರನ್ನು ಕೈಬಿಡಲಾಗಿದೆ.
5 / 7
ರವೀಂದ್ರ ಜಡೇಜಾ: ಟೀಮ್ ಇಂಡಿಯಾದ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಮಂಡಿರಜ್ಜು ಗಾಯದ ಸಮಸ್ಯೆಯ ಕಾರಣ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರಗುಳಿದ್ದರು. ಇದೀಗ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಡೇಜಾ ಅವರನ್ನು ಉಳಿದ ಪಂದ್ಯಗಳಿಗೆ ಆಯ್ಕೆ ಮಾಡಲಾಗಿದೆ. ಆದರೆ ಅವರು ಫಿಟ್ನೆಸ್ ಅನ್ನು ಸಾಬೀತುಪಡಿಸಿದರೆ ಮಾತ್ರ ತಂಡಕ್ಕೆ ಸೇರಿಕೊಳ್ಳಬಹುದು. ಹೀಗಾಗಿ 3ನೇ ಪಂದ್ಯಕ್ಕೆ ಜಡ್ಡು ಅಲಭ್ಯರಾದರೂ ಅಚ್ಚರಿಪಡಬೇಕಿಲ್ಲ.
6 / 7
ಕೆಎಲ್ ರಾಹುಲ್: ಮೊದಲ ಟೆಸ್ಟ್ ಪಂದ್ಯದ ವೇಳೆ ತೊಡೆಸಂಧು ಗಾಯದ ಸಮಸ್ಯೆಗೆ ಒಳಗಾಗಿದ್ದ ಕೆಎಲ್ ರಾಹುಲ್ ದ್ವಿತೀಯ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ರಾಹುಲ್ ಎನ್ಸಿಎನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಕೂಡ ಫಿಟ್ನೆಸ್ ಸಾಬೀತುಪಡಿಸಿದರೆ ಮಾತ್ರ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ. ಹೀಗಾಗಿ 3ನೇ ಪಂದ್ಯದಲ್ಲಿ ಕೆಎಲ್ ರಾಹುಲ್ ಕಾಣಿಸಿಕೊಳ್ಳುವುದು ಅನುಮಾನ ಎನ್ನಬಹುದು.
7 / 7
ಭಾರತ ಟೆಸ್ಟ್ ತಂಡ (ಪ್ರಸ್ತುತ): ರೋಹಿತ್ ಶರ್ಮಾ (ನಾಯಕ ), ಶುಭ್‌ಮನ್ ಗಿಲ್, ಯಶಸ್ವಿ ಜೈಸ್ವಾಲ್, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಕೆಎಸ್ ಭರತ್ (ವಿಕೇಟ್ ಕೀಪರ್), ಧ್ರುವ್ ಜುರೇಲ್ (ವಿಕೇಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.