AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಇಂಗ್ಲೆಂಡ್ ವಿರುದ್ಧ ಎರಡನೇ ಬಾರಿಗೆ ಈ ದಾಖಲೆ ಬರೆದ ರವೀಂದ್ರ ಜಡೇಜಾ..!

Ravindra Jadeja: ರಾಜ್‌ಕೋಟ್ ಟೆಸ್ಟ್‌ನಲ್ಲಿ ಇಂಗ್ಲೆಂಡ್ ತಂಡವನ್ನು 434 ರನ್​ಗಳಿಂದ ಮಣಿಸುವಲ್ಲಿ ಪ್ರಮುಖ ಪಾತ್ರವಹಿಸಿದ ರವೀಂದ್ರ ಜಡೇಜಾ ಎರಡನೇ ಇನ್ನಿಂಗ್ಸ್​ನಲ್ಲಿ ಅದ್ಭುತ ಬೌಲಿಂಗ್ ಮಾಡಿ 5 ವಿಕೆಟ್ ಪಡೆದರು. ಈ ಮೂಲಕ ಆಂಗ್ಲರ ವಿರುದ್ಧ ಎರಡನೇ ಬಾರಿಗೆ 5 ವಿಕೆಟ್ ಪಡೆದ ಸಾಧನೆ ಮಾಡಿದರು.

ಪೃಥ್ವಿಶಂಕರ
|

Updated on: Feb 18, 2024 | 8:15 PM

Share
ರಾಜ್‌ಕೋಟ್ ಟೆಸ್ಟ್‌ನಲ್ಲಿ ಇಂಗ್ಲೆಂಡ್ ತಂಡವನ್ನು 434 ರನ್​ಗಳಿಂದ ಮಣಿಸುವಲ್ಲಿ ಪ್ರಮುಖ ಪಾತ್ರವಹಿಸಿದ ರವೀಂದ್ರ ಜಡೇಜಾ ಮೊದಲ ಇನ್ನಿಂಗ್ಸ್​ನಲ್ಲಿ ಅದ್ಭುತ ಶತಕ ಸಿಡಿಸಿದಲ್ಲದೆ, ಎರಡನೇ ಇನ್ನಿಂಗ್ಸ್​ನಲ್ಲಿ ಅದ್ಭುತ ಬೌಲಿಂಗ್ ಮಾಡಿ 5 ವಿಕೆಟ್ ಪಡೆದರು. ಈ ಮೂಲಕ ಆಂಗ್ಲರ ವಿರುದ್ಧ ಎರಡನೇ ಬಾರಿಗೆ 5 ವಿಕೆಟ್ ಪಡೆದ ಸಾಧನೆ ಮಾಡಿದರು.

1 / 6
ಎರಡನೇ ಇನ್ನಿಂಗ್ಸ್​ನಲ್ಲಿ ಜಡೇಜಾಗೆ ಬಲಿಯಾದವರಲ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ಒಲಿ ಪೋಪ್ (3) ರೂಪದಲ್ಲಿ ಜಡೇಜಾ ಮೊದಲ ವಿಕೆಟ್ ಪಡೆದರು. ಇದಾದ ನಂತರ ಜಡೇಜಾ ಜೋ ರೂಟ್ (7), ಜಾನಿ ಬೈರ್‌ಸ್ಟೋವ್ (4) ಮತ್ತು ಬೆನ್ ಫಾಕ್ಸ್ (16) ರೂಪದಲ್ಲಿ ಪ್ರಮುಖ ಬ್ಯಾಟ್ಸ್‌ಮನ್‌ಗಳನ್ನು ಪೆವಿಲಿಯನ್​ಗಟ್ಟಿದರು.

2 / 6
ಇದಾದ ಬಳಿಕ ಸಿಡಿಲಬ್ಬರದ ಬ್ಯಾಟಿಂಗ್ ಮಾಡುತ್ತಿದ್ದ ಮಾರ್ಕ್ ವುಡ್ (33) ಅವರನ್ನು ಔಟ್ ಮಾಡುವ ಮೂಲಕ ಜಡೇಜಾ ಇಂಗ್ಲೆಂಡ್ ಇನ್ನಿಂಗ್ಸ್​ಗೆ ಅಂತ್ಯ ಹಾಡಿದರು. ಎರಡನೇ ಇನ್ನಿಂಗ್ಸ್ ಹೊರತಾಗಿ ಜಡೇಜಾ, ಮೊದಲ ಇನ್ನಿಂಗ್ಸ್​ನಲ್ಲೂ 2 ವಿಕೆಟ್ ಕಬಳಿಸಿದ್ದರು.

3 / 6
ಎರಡನೇ ಇನ್ನಿಂಗ್ಸ್​ನಲ್ಲಿ 12.4 ಓವರ್‌ ಬೌಲ್ ಮಾಡಿದ ಜಡೇಜಾ, 41 ರನ್ ನೀಡಿ 5 ಬ್ಯಾಟ್ಸ್‌ಮನ್‌ಗಳನ್ನು ತಮ್ಮ ಬಲಿಪಶುವನ್ನಾಗಿ ಮಾಡಿದರು. ಈ ಆಲ್‌ರೌಂಡರ್ ಪ್ರದರ್ಶನಕ್ಕೆ ರವೀಂದ್ರ ಜಡೇಜಾ ಪಂದ್ಯದ ಆಟಗಾರ ಪ್ರಶಸ್ತಿಗೂ ಭಾಜನರಾದರು.

4 / 6
ಬೌಲಿಂಗ್ ಹೊರತಾಗಿ ಬ್ಯಾಟಿಂಗ್​ನಲ್ಲೂ ಕಮಾಲ್ ಮಾಡಿದ ಜಡೇಜಾ ಮೊದಲ ಇನ್ನಿಂಗ್ಸ್​ನಲ್ಲಿ 225 ಎಸೆತಗಳಲ್ಲಿ 9 ಬೌಂಡರಿ ಹಾಗೂ 2 ಸಿಕ್ಸರ್​ಗಳ ಸಹಿತ 112 ರನ್ ಕಲೆಹಾಕಿ. ಅಲ್ಲದೆ ನಾಯಕ ರೋಹಿತ್ ಶರ್ಮಾ ಜೊತೆಗೆ ದ್ವಿಶತಕದ ಜೊತೆಯಾಟವನ್ನು ಹಂಚಿಕೊಂಡಿದ್ದರು.

5 / 6
ಟೀಂ ಇಂಡಿಯಾ ಪರ ಇದುವರೆಗೆ 70 ಟೆಸ್ಟ್ ಪಂದ್ಯಗಳನ್ನಾಡಿರುವ ಜಡೇಜಾ 132 ಇನ್ನಿಂಗ್ಸ್‌ಗಳಲ್ಲಿ 24ಕ್ಕೂ ಹೆಚ್ಚು ಸರಾಸರಿಯಲ್ಲಿ 287 ವಿಕೆಟ್‌ಗಳನ್ನು ಪಡೆದಿದ್ದಾರೆ. ಹಾಗೆಯೇ 13 ಬಾರಿ 5 ವಿಕೆಟ್ ಮತ್ತು ಎರಡು ಬಾರಿ 10 ವಿಕೆಟ್ಗಳನ್ನು ಪಡೆದಿದ್ದಾರೆ. ಕುತೂಹಲಕಾರಿಯಾಗಿ, ಜಡೇಜಾ ತಮ್ಮ ಪ್ರಥಮ ದರ್ಜೆ ವೃತ್ತಿಜೀವನದಲ್ಲಿ 500 ಕ್ಕೂ ಹೆಚ್ಚು ವಿಕೆಟ್‌ಗಳನ್ನು ಪಡೆದಿದ್ದಾರೆ.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್

ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ

ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್

ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?

ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ

ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ

IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ

ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ

ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ

ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!