IND vs ENG: ಇಂಗ್ಲೆಂಡ್ ವಿರುದ್ಧ ಎರಡನೇ ಬಾರಿಗೆ ಈ ದಾಖಲೆ ಬರೆದ ರವೀಂದ್ರ ಜಡೇಜಾ..!
Ravindra Jadeja: ರಾಜ್‌ಕೋಟ್ ಟೆಸ್ಟ್‌ನಲ್ಲಿ ಇಂಗ್ಲೆಂಡ್ ತಂಡವನ್ನು 434 ರನ್ಗಳಿಂದ ಮಣಿಸುವಲ್ಲಿ ಪ್ರಮುಖ ಪಾತ್ರವಹಿಸಿದ ರವೀಂದ್ರ ಜಡೇಜಾ ಎರಡನೇ ಇನ್ನಿಂಗ್ಸ್ನಲ್ಲಿ ಅದ್ಭುತ ಬೌಲಿಂಗ್ ಮಾಡಿ 5 ವಿಕೆಟ್ ಪಡೆದರು. ಈ ಮೂಲಕ ಆಂಗ್ಲರ ವಿರುದ್ಧ ಎರಡನೇ ಬಾರಿಗೆ 5 ವಿಕೆಟ್ ಪಡೆದ ಸಾಧನೆ ಮಾಡಿದರು.
1 / 6
ರಾಜ್‌ಕೋಟ್ ಟೆಸ್ಟ್‌ನಲ್ಲಿ ಇಂಗ್ಲೆಂಡ್ ತಂಡವನ್ನು 434 ರನ್ಗಳಿಂದ ಮಣಿಸುವಲ್ಲಿ ಪ್ರಮುಖ ಪಾತ್ರವಹಿಸಿದ ರವೀಂದ್ರ ಜಡೇಜಾ ಮೊದಲ ಇನ್ನಿಂಗ್ಸ್ನಲ್ಲಿ ಅದ್ಭುತ ಶತಕ ಸಿಡಿಸಿದಲ್ಲದೆ, ಎರಡನೇ ಇನ್ನಿಂಗ್ಸ್ನಲ್ಲಿ ಅದ್ಭುತ ಬೌಲಿಂಗ್ ಮಾಡಿ 5 ವಿಕೆಟ್ ಪಡೆದರು. ಈ ಮೂಲಕ ಆಂಗ್ಲರ ವಿರುದ್ಧ ಎರಡನೇ ಬಾರಿಗೆ 5 ವಿಕೆಟ್ ಪಡೆದ ಸಾಧನೆ ಮಾಡಿದರು.
2 / 6
ಎರಡನೇ ಇನ್ನಿಂಗ್ಸ್ನಲ್ಲಿ ಜಡೇಜಾಗೆ ಬಲಿಯಾದವರಲ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ಒಲಿ ಪೋಪ್ (3) ರೂಪದಲ್ಲಿ ಜಡೇಜಾ ಮೊದಲ ವಿಕೆಟ್ ಪಡೆದರು. ಇದಾದ ನಂತರ ಜಡೇಜಾ ಜೋ ರೂಟ್ (7), ಜಾನಿ ಬೈರ್‌ಸ್ಟೋವ್ (4) ಮತ್ತು ಬೆನ್ ಫಾಕ್ಸ್ (16) ರೂಪದಲ್ಲಿ ಪ್ರಮುಖ ಬ್ಯಾಟ್ಸ್‌ಮನ್‌ಗಳನ್ನು ಪೆವಿಲಿಯನ್ಗಟ್ಟಿದರು.
3 / 6
ಇದಾದ ಬಳಿಕ ಸಿಡಿಲಬ್ಬರದ ಬ್ಯಾಟಿಂಗ್ ಮಾಡುತ್ತಿದ್ದ ಮಾರ್ಕ್ ವುಡ್ (33) ಅವರನ್ನು ಔಟ್ ಮಾಡುವ ಮೂಲಕ ಜಡೇಜಾ ಇಂಗ್ಲೆಂಡ್ ಇನ್ನಿಂಗ್ಸ್ಗೆ ಅಂತ್ಯ ಹಾಡಿದರು. ಎರಡನೇ ಇನ್ನಿಂಗ್ಸ್ ಹೊರತಾಗಿ ಜಡೇಜಾ, ಮೊದಲ ಇನ್ನಿಂಗ್ಸ್ನಲ್ಲೂ 2 ವಿಕೆಟ್ ಕಬಳಿಸಿದ್ದರು.
4 / 6
ಎರಡನೇ ಇನ್ನಿಂಗ್ಸ್ನಲ್ಲಿ 12.4 ಓವರ್ ಬೌಲ್ ಮಾಡಿದ ಜಡೇಜಾ, 41 ರನ್ ನೀಡಿ 5 ಬ್ಯಾಟ್ಸ್‌ಮನ್‌ಗಳನ್ನು ತಮ್ಮ ಬಲಿಪಶುವನ್ನಾಗಿ ಮಾಡಿದರು. ಈ ಆಲ್‌ರೌಂಡರ್ ಪ್ರದರ್ಶನಕ್ಕೆ ರವೀಂದ್ರ ಜಡೇಜಾ ಪಂದ್ಯದ ಆಟಗಾರ ಪ್ರಶಸ್ತಿಗೂ ಭಾಜನರಾದರು.
5 / 6
ಬೌಲಿಂಗ್ ಹೊರತಾಗಿ ಬ್ಯಾಟಿಂಗ್ನಲ್ಲೂ ಕಮಾಲ್ ಮಾಡಿದ ಜಡೇಜಾ ಮೊದಲ ಇನ್ನಿಂಗ್ಸ್ನಲ್ಲಿ 225 ಎಸೆತಗಳಲ್ಲಿ 9 ಬೌಂಡರಿ ಹಾಗೂ 2 ಸಿಕ್ಸರ್ಗಳ ಸಹಿತ 112 ರನ್ ಕಲೆಹಾಕಿ. ಅಲ್ಲದೆ ನಾಯಕ ರೋಹಿತ್ ಶರ್ಮಾ ಜೊತೆಗೆ ದ್ವಿಶತಕದ ಜೊತೆಯಾಟವನ್ನು ಹಂಚಿಕೊಂಡಿದ್ದರು.
6 / 6
ಟೀಂ ಇಂಡಿಯಾ ಪರ ಇದುವರೆಗೆ 70 ಟೆಸ್ಟ್ ಪಂದ್ಯಗಳನ್ನಾಡಿರುವ ಜಡೇಜಾ 132 ಇನ್ನಿಂಗ್ಸ್‌ಗಳಲ್ಲಿ 24ಕ್ಕೂ ಹೆಚ್ಚು ಸರಾಸರಿಯಲ್ಲಿ 287 ವಿಕೆಟ್‌ಗಳನ್ನು ಪಡೆದಿದ್ದಾರೆ. ಹಾಗೆಯೇ 13 ಬಾರಿ 5 ವಿಕೆಟ್ ಮತ್ತು ಎರಡು ಬಾರಿ 10 ವಿಕೆಟ್ಗಳನ್ನು ಪಡೆದಿದ್ದಾರೆ. ಕುತೂಹಲಕಾರಿಯಾಗಿ, ಜಡೇಜಾ ತಮ್ಮ ಪ್ರಥಮ ದರ್ಜೆ ವೃತ್ತಿಜೀವನದಲ್ಲಿ 500 ಕ್ಕೂ ಹೆಚ್ಚು ವಿಕೆಟ್‌ಗಳನ್ನು ಪಡೆದಿದ್ದಾರೆ.