ಗೆಲುವಿನ ಹೊರತಾಗಿಯೂ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ 2 ಬದಲಾವಣೆ ಖಚಿತ
India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಮ್ಯಾಚ್ನಲ್ಲಿ ಆಂಗ್ಲ ಪಡೆ ಭರ್ಜರಿ ಜಯ ಸಾಧಿಸಿತ್ತು. ಇದೀಗ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡಕ್ಕೆ ಸೋಲುಣಿಸಿ ಟೀಮ್ ಇಂಡಿಯಾ ಸರಣಿಯನ್ನು ಸಮಬಲಗೊಳಿಸಿದೆ. ಇನ್ನು ಉಭಯ ತಂಡಗಳ ಮೂರನೇ ಪಂದ್ಯವು ಗುರುವಾರದಿಂದ ಶುರುವಾಗಲಿದೆ.
ಇಂಗ್ಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಸೋತಿದ್ದ ಟೀಮ್ ಇಂಡಿಯಾ ದ್ವಿತೀಯ ಟೆಸ್ಟ್ ಪಂದ್ಯದ ಮೂಲಕ ಕಂಬ್ಯಾಕ್ ಮಾಡಿದೆ. ಎಡ್ಜ್ಬಾಸ್ಟ್ನ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ತಂಡವು ಬರೋಬ್ಬರಿ 336 ರನ್ಗಳಿಂದ ಆತಿಥೇಯ ಇಂಗ್ಲೆಂಡ್ ತಂಡವನ್ನು ಬಗ್ಗು ಬಡಿದಿದೆ. ಈ ಮೂಲಕ 5 ಪಂದ್ಯಗಳ ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸಿದೆ.
1 / 5
ಇದೀಗ ಸರಣಿಯಲ್ಲಿ ಸಮಬಲ ಸಾಧಿಸಿರುವ ಟೀಮ್ ಇಂಡಿಯಾ ಮೂರನೇ ಪಂದ್ಯಕ್ಕಾಗಿ ಸಜ್ಜಾಗಬೇಕಿದೆ. ಜುಲೈ 10 ರಿಂದ ಲಂಡನ್ನ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಭಾರತ ತಂಡವು ತನ್ನ ಆಡುವ ಬಳಗದಲ್ಲಿ ಬದಲಾವಣೆ ಮಾಡುವುದು ಬಹುತೇಕ ಖಚಿತ. ಅದರಲ್ಲೂ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಎರಡು ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.
2 / 5
ಏಕೆಂದರೆ ಲಾರ್ಡ್ಸ್ ಟೆಸ್ಟ್ನಲ್ಲಿ ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಕಣಕ್ಕಿಳಿಯುವುದು ಖಚಿತವಾಗಿದೆ. ಹೀಗಾಗಿ ಎಡ್ಜ್ಬಾಸ್ಟನ್ನಲ್ಲಿ ಕಣಕ್ಕಿಳಿದ ವೇಗಿಯೊಬ್ಬರು ಆಡುವ ಬಳಗದಿಂದ ಹೊರಬೀಳಲಿದ್ದಾರೆ. ಅದರಂತೆ ಕಳೆದ ಎರಡು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿರುವ ಕನ್ನಡಿಗ ಪ್ರಸಿದ್ಧ್ ಕೃಷ್ಣಗೆ ಗೇಟ್ ಪಾಸ್ ಸಿಗುವುದು ಖಚಿತ ಎನ್ನಬಹುದು.
3 / 5
ಇನ್ನು ಆಲ್ರೌಂಡರ್ ಬದಲಿಗೆ ಲಾರ್ಡ್ಸ್ನಲ್ಲಿ ಮತ್ತೋರ್ವ ವೇಗಿಯನ್ನು ಕಣಕ್ಕಿಳಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಏಕೆಂದರೆ ಈ ಮೈದಾನದಲ್ಲಿ ಇತ್ತೀಚೆಗೆ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ತಂಡಗಳು ನಾಲ್ವರು ವೇಗಿಗಳೊಂದಿಗೆ ಕಣಕ್ಕಿಳಿದಿದ್ದರು. ಅಲ್ಲದೆ ಈ ಪಿಚ್ ವೇಗದ ಬೌಲಿಂಗ್ಗೆ ಸಹಕಾರಿ. ಹೀಗಾಗಿ ಟೀಮ್ ಇಂಡಿಯಾ ಎಡಗೈ ವೇಗಿ ಅರ್ಷದೀಪ್ ಸಿಂಗ್ ಅವರನ್ನು ಸಹ ಕಣಕ್ಕಿಳಿಸುವ ಸಾಧ್ಯತೆಯಿದೆ. ಅದರಂತೆ ಮೂರನೇ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11 ಹೀಗಿರಲಿದೆ…
4 / 5
ಭಾರತ ಸಂಭಾವ್ಯ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಕರುಣ್ ನಾಯರ್, ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅರ್ಷ್‌ದೀಪ್ ಸಿಂಗ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.