IND vs ENG: ಟೀಂ ಇಂಡಿಯಾ ವಿರುದ್ಧ ದಾಖಲೆಯ ಶತಕ ಸಿಡಿಸಿದ ಜೋ ರೂಟ್..!

|

Updated on: Feb 23, 2024 | 6:15 PM

IND vs ENG: ಭಾರತ ವಿರುದ್ಧದ ಮೊದಲ ಮೂರು ಟೆಸ್ಟ್ ಪಂದ್ಯಗಳಲ್ಲಿ ಮಂಕಾಗಿದ್ದ ಇಂಗ್ಲೆಂಡ್ ತಂಡದ ಮಾಜಿ ನಾಯಕ ಜೋ ರೂಟ್ ಬ್ಯಾಟ್ ರಾಂಚಿಯಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಶತಕದ ಇನ್ನಿಂಗ್ಸ್ ಆಡಿದೆ. ತಂಡದ ಪರ ಅಜೇಯ ಶತಕ ಸಿಡಿಸಿದ ಜೋ ರೂಟ್ ಭಾರತದ ವಿರುದ್ಧ ಅಪರೂಪದ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ.

1 / 7
ಭಾರತ ವಿರುದ್ಧದ ಮೊದಲ ಮೂರು ಟೆಸ್ಟ್ ಪಂದ್ಯಗಳಲ್ಲಿ ಮಂಕಾಗಿದ್ದ ಇಂಗ್ಲೆಂಡ್ ತಂಡದ ಮಾಜಿ ನಾಯಕ ಜೋ ರೂಟ್ ಬ್ಯಾಟ್ ರಾಂಚಿಯಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಶತಕದ ಇನ್ನಿಂಗ್ಸ್ ಆಡಿದೆ. ತಂಡದ ಪರ ಏಕಾಂಗಿ ಹೋರಾಟ ನಡೆಸುತ್ತಿರುವ ರೂಟ್ ಅಜೇಯ ಶತಕ ಸಿಡಿಸಿದಲ್ಲದೆ, ಭಾರತದ ವಿರುದ್ಧ ಅಪರೂಪದ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ.

2 / 7
ಭಾರತ ವಿರುದ್ಧದ ಟೆಸ್ಟ್ ಸರಣಿ ಸೇರಿದಂತೆ ಬರೋಬ್ಬರಿ 8 ತಿಂಗಳಿಂದ ಶತಕದ ಬರ ಎದುರಿಸುತ್ತಿದ್ದ ರೂಟ್, ಇದೀಗ ಶತಕ ಇನ್ನಿಂಗ್ಸ್ ಆಡುವಲ್ಲಿ ಯಶಸ್ವಿಯಾಗಿದ್ದಾರೆ. ಜೋ ರೂಟ್ 219 ಎಸೆತಗಳಲ್ಲಿ 31ನೇ ಟೆಸ್ಟ್ ಶತಕ ಪೂರೈಸಿದ್ದಲ್ಲದೆ ಭಾರತದ ವಿರುದ್ಧ ಅತಿ ಹೆಚ್ಚು ಟೆಸ್ಟ್ ಶತಕಗಳನ್ನು ಸಿಡಿಸಿದ ದಾಖಲೆಯನ್ನು ನಿರ್ಮಿಸಿದ್ದಾರೆ.

3 / 7
ವಾಸ್ತವವಾಗಿ ಈ ಟೆಸ್ಟ್ ಸರಣಿಯ ಮೊದಲ ಮೂರು ಪಂದ್ಯಗಳಲ್ಲಿ ಜೋ ರೂಟ್ ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡದ ಕಾರಣ ಸಾಕಷ್ಟು ಟೀಕೆಗಳನ್ನು ಎದುರಿಸಬೇಕಾಯಿತು. ಇದೀಗ ಎಲ್ಲರಿಗೂ ಉತ್ತರ ನೀಡಿರುವ ರೂಟ್ ಭರ್ಜರಿ ಶತಕ ಬಾರಿಸಿದ್ದಾರೆ. ಇದರೊಂದಿಗೆ ರೂಟ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಭಾರತದ ವಿರುದ್ಧ ಅತಿ ಹೆಚ್ಚು ಶತಕ ಸಿಡಿಸಿದ ಆಟಗಾರ ಎನಿಸಿಕೊಂಡಿದ್ದಾರೆ.

4 / 7
ಇದುವರೆಗೆ ಭಾರತದ ವಿರುದ್ಧ 52 ಇನ್ನಿಂಗ್ಸ್​ಗಳಲ್ಲಿ ರೂಟ್ 10 ಟೆಸ್ಟ್ ಶತಕಗಳನ್ನು ಸಿಡಿಸುವ ಮೂಲಕ ಭಾರತದ ವಿರುದ್ಧ ಟೆಸ್ಟ್​ನಲ್ಲಿ ಅಧಿಕ ಶತಕ ಸಿಡಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ರೂಟ್​ಗೂ ಮುನ್ನ ಭಾರತ ವಿರುದ್ಧ ಅತಿ ಹೆಚ್ಚು ಶತಕ ಸಿಡಿಸಿದ ದಾಖಲೆ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಹೆಸರಿನಲ್ಲಿತ್ತು.

5 / 7
ಟೀಂ ಇಂಡಿಯಾ ವಿರುದ್ಧ ಇದುವರೆಗೆ 37 ಇನ್ನಿಂಗ್ಸ್​ಗಳನ್ನಾಡಿರುವ ಸ್ಟೀವ್ ಸ್ಮಿತ್ 9 ಶತಕ ಸಿಡಿಸಿದ್ದರು. ಮೂರನೇ ಸ್ಥಾನದಲ್ಲಿರುವ ಗ್ಯಾರಿ ಸೋಬರ್ಸ್ ಭಾರತದ ವಿರುದ್ಧ ಆಡಿರುವ 30 ಇನ್ನಿಂಗ್ಸ್​ಗಳಲ್ಲಿ 8 ಶತಕ ಸಿಡಿಸಿದ್ದರು.

6 / 7
ಭಾರತದ ವಿರುದ್ಧ ಅತಿ ಹೆಚ್ಚು ಟೆಸ್ಟ್ ಶತಕಗಳನ್ನು ಸಿಡಿಸಿರುವ ಆಟಗಾರ ಎನಿಸಿಕೊಂಡಿರುವ ರೂಟ್, ಇದಲ್ಲದೆ ಟೀಂ ಇಂಡಿಯಾ ವಿರುದ್ಧ ಅತಿ ಹೆಚ್ಚು ಬಾರಿ 50 ಕ್ಕೂ ಅಧಿಕ ರನ್ ಕಲೆಹಾಕಿದ ಆಟಗಾರರ ಪೈಕಿ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಜೊತೆಗೆ ರೂಟ್ ಜಂಟಿ ಮೊದಲ ಸ್ಥಾನದಲ್ಲಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ವಿರುದ್ಧ ರೂಟ್ ಇದುವರೆಗೆ 20 ಬಾರಿ ಈ ಸಾಧನೆ ಮಾಡಿದ್ದಾರೆ.

7 / 7
ಇದಲ್ಲದೆ ಇಂಗ್ಲೆಂಡ್ ಪರ ಅತಿ ಹೆಚ್ಚು ಬಾರಿ 50 ಕ್ಕೂ ಅಧಿಕ ರನ್ ಕಲೆಹಾಕಿದ ಆಟಗಾರರ ಪಟ್ಟಿಯಲ್ಲಿ ಇದೀಗ ರೂಟ್, ತಂಡದ ಮಾಜಿ ನಾಯಕ ಆಲಿಸ್ಟರ್ ಕುಕ್​ರನ್ನು ಹಿಂದಿಕ್ಕಿದ್ದಾರೆ. ಇದುವರೆಗೂ ರೂಟ್ ಇಂಗ್ಲೆಂಡ್‌ ಪರ 91 ಬಾರಿ 50+ ಇನ್ನಿಂಗ್ಸ್ ಆಡಿದ್ದಾರೆ.