- Kannada News Photo gallery Cricket photos IND vs ENG 3rd test kl rahul likely to get fit in time for rajkot test says report
IND vs ENG: ಟೀಂ ಇಂಡಿಯಾಗೆ ಸಿಹಿ ಸುದ್ದಿ; ಮೂರನೇ ಟೆಸ್ಟ್‌ಗೆ ಸ್ಟಾರ್ ಬ್ಯಾಟರ್ ಎಂಟ್ರಿ..!
IND vs ENG: ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯ ನಾಳೆಯಿಂದ ವಿಶಾಖಪಟ್ಟಣಂನಲ್ಲಿ ಆರಂಭವಾಗಲಿದೆ. ಟೀಂ ಇಂಡಿಯಾದಲ್ಲಿ ಪ್ರಮುಖ ಆಟಗಾರರಿಲ್ಲದಿರುವುದು ನಾಯಕ ರೋಹಿತ್ಗೆ ಸಂಕಷ್ಟ ತಂದೊಡ್ಡಿದೆ. ಈ ನಡುವೆ ಸಿಹಿ ಸುದ್ದಿಯೊಂದು ಹೊರಬಿದ್ದಿದ್ದು, ತಂಡದ ಅನುಭವಿ ಆಟಗಾರ ಕೆಎಲ್ ರಾಹುಲ್ ಮೂರನೇ ಟೆಸ್ಟ್‌ಗೆ ಲಭ್ಯವಿರುತ್ತಾರೆ ಎಂದು ವರದಿಯಾಗಿದೆ.
Updated on: Feb 01, 2024 | 8:40 PM

ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯ ನಾಳೆಯಿಂದ ವಿಶಾಖಪಟ್ಟಣಂನಲ್ಲಿ ಆರಂಭವಾಗಲಿದೆ. ಟೀಂ ಇಂಡಿಯಾದಲ್ಲಿ ಪ್ರಮುಖ ಆಟಗಾರರಿಲ್ಲದಿರುವುದು ನಾಯಕ ರೋಹಿತ್ಗೆ ಸಂಕಷ್ಟ ತಂದೊಡ್ಡಿದೆ. ಈ ನಡುವೆ ಸಿಹಿ ಸುದ್ದಿಯೊಂದು ಹೊರಬಿದ್ದಿದ್ದು, ತಂಡದ ಅನುಭವಿ ಆಟಗಾರ ಕೆಎಲ್ ರಾಹುಲ್ ಮೂರನೇ ಟೆಸ್ಟ್‌ಗೆ ಲಭ್ಯವಿರುತ್ತಾರೆ ಎಂದು ವರದಿಯಾಗಿದೆ.

ಮೊದಲ ಟೆಸ್ಟ್ ಪಂದ್ಯದ ವೇಳೆ ಕೆಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾ ಇಂಜುರಿಗೆ ತುತ್ತಾಗಿದ್ದರು. ಹೀಗಾಗಿ ಈ ಇಬ್ಬರು ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಸದ್ಯ ಈ ಇಬ್ಬರು ಬೆಂಗಳೂರಿನ ಎನ್ಸಿಎನಲ್ಲಿ ರಿಹ್ಯಾಬ್ಗೆ ಒಳಗಾಗಿದ್ದಾರೆ.

ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ಆಲ್‌ರೌಂಡರ್ ರವೀಂದ್ರ ಜಡೇಜಾ ಚೇತರಿಸಿಕೊಳ್ಳಲು ಇನ್ನು 4 ರಿಂದ 8 ವಾರ ಸಮಯಾವಕಾಶ ಬೇಕು ಎಂದು ಹೇಳಲಾಗುತ್ತಿದೆ. ಹೀಗಾಗಿ ಜಡೇಜಾ ಇಡೀ ಟೆಸ್ಟ್ ಸರಣಿಯಿಂದಲೇ ಹೊರಬೀಳಬಹುದು ಎಂದು ವರದಿಯಾಗಿದೆ.

ಆದರೆ ಬಲಗಾಲಿನ ಗಾಯಕ್ಕೆ ತುತ್ತಾಗಿದ್ದ ವಿಕೆಟ್‌ಕೀಪರ್ ಬ್ಯಾಟರ್ ಕೆಎಲ್ ರಾಹುಲ್ ಎರಡನೇ ಟೆಸ್ಟ್‌ಗೆ ಅಲಭ್ಯರಾದರೂ ಮೂರನೇ ಟೆಸ್ಟ್ನಲ್ಲಿ ಟೀಂ ಇಂಡಿಯಾದಲ್ಲಿ ಕಾಣಿಸಿಕೊಳ್ಳುವುದು ಖಚಿತ ಎಂದು ಹೇಳಲಾಗುತ್ತಿದೆ. ಇದು ನಾಯಕ ರೋಹಿತ್ ಶರ್ಮಾಗೆ ಕೊಂಚ ನಿರಾಳ ತಂದಿದೆ.

ಕ್ರಿಕ್‌ಬಜ್‌ನಲ್ಲಿನ ವರದಿಯ ಪ್ರಕಾರ, ವಿಶಾಖಪಟ್ಟಣಂನಲ್ಲಿ ನಡೆಯುವ ಎರಡನೇ ಟೆಸ್ಟ್ ಮುಗಿದ ಎಂಟು ದಿನಗಳ ನಂತರ ಪ್ರಾರಂಭವಾಗುವ ಮೂರನೇ ಟೆಸ್ಟ್‌ಗೆ ಸ್ಟಾರ್ ಬ್ಯಾಟರ್ ಕೆಎಲ್ ರಾಹುಲ್ ಸಮಯಕ್ಕೆ ಸರಿಯಾಗಿ ಫಿಟ್ ಆಗಲ್ಲಿದ್ದಾರೆ ಎಂದು ವರದಿ ಮಾಡಿದೆ.

ಸದ್ಯ ಎರಡನೇ ಟೆಸ್ಟ್‌ಗೆ ರಾಹುಲ್ ಬದಲಿಗೆ ಯಾರನ್ನು ಆಯ್ಕೆ ಮಾಡಬಹುದು ಎಂಬ ಬಗ್ಗೆ ಆಯ್ಕೆ ಮಂಡಳಿ ಚಿಂತನೆ ನಡೆಸುತ್ತಿದೆ. ವರದ ಪ್ರಕಾರ ರಜತ್ ಪಾಟಿದಾರ್ ಅಥವಾ ಸರ್ಫರಾಜ್ ಖಾನ್ ಈ ಇಬ್ಬರಲ್ಲಿ ಒಬ್ಬರು ಅವಕಾಶ ಪಡೆಯುವುದು ಖಚಿತವಾಗಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ , ರಜತ್ ಪಾಟಿದಾರ್, ಸರ್ಫರಾಜ್ ಖಾನ್, ವಾಷಿಂಗ್ಟನ್ ಸುಂದರ್, ಸೌರಭ್ ಕುಮಾರ್.









