IND vs ENG: ಟೆಸ್ಟ್ ಕ್ರಿಕೆಟ್​ನಲ್ಲಿ ಐತಿಹಾಸಿಕ ದಾಖಲೆ ಬರೆದ ಆರ್​ ಅಶ್ವಿನ್..!

|

Updated on: Feb 16, 2024 | 4:30 PM

R Ashwin: ರಾಜ್‌ಕೋಟ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್​ನ ಮೊದಲ ಇನ್ನಿಂಗ್ಸ್​ನಲ್ಲಿ ಇಂಗ್ಲೆಂಡ್​ನ ಜ್ಯಾಕ್ ಕ್ರೌಲಿ ವಿಕೆಟ್ ಪಡೆದ ಅಶ್ವಿನ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 500 ವಿಕೆಟ್ ಪೂರೈಸಿದ್ದಾರೆ. ಇದರೊಂದಿಗೆ ಟೆಸ್ಟ್ ವೃತ್ತಿಜೀವನದಲ್ಲಿ 500 ವಿಕೆಟ್ ಪಡೆದ ಭಾರತದ ಎರಡನೇ ಬೌಲರ್ ಎನಿಸಿಕೊಂಡಿದ್ದಾರೆ.

1 / 7
ಟೀಂ ಇಂಡಿಯಾದ ಅನುಭವಿ ಸ್ಪಿನ್ನರ್ ಆರ್ ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ರಾಜ್‌ಕೋಟ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್​ನ ಮೊದಲ ಇನ್ನಿಂಗ್ಸ್​ನಲ್ಲಿ ಇಂಗ್ಲೆಂಡ್​ನ ಜ್ಯಾಕ್ ಕ್ರೌಲಿ ವಿಕೆಟ್ ಪಡೆದ ಅಶ್ವಿನ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 500 ವಿಕೆಟ್ ಪೂರೈಸಿದ್ದಾರೆ.

2 / 7
ಇದರೊಂದಿಗೆ ಟೆಸ್ಟ್ ವೃತ್ತಿಜೀವನದಲ್ಲಿ 500 ವಿಕೆಟ್ ಪಡೆದ ಭಾರತದ ಎರಡನೇ ಬೌಲರ್ ಎನಿಸಿಕೊಂಡಿದ್ದಾರೆ. ಅಶ್ವಿನ್​ಗೂ ಮೊದಲು ಕನ್ನಡಿಗ ಅನಿಲ್ ಕುಂಬ್ಳೆ ಈ ಸಾಧನೆ ಮಾಡಿದ್ದರು. ಆರ್ ಅಶ್ವಿನ್-ಅನಿಲ್ ಕುಂಬ್ಳೆ ಹೊರತುಪಡಿಸಿ, ಕ್ರಿಕೆಟ್ ಇತಿಹಾಸದಲ್ಲಿ ಕೇವಲ 8 ಬೌಲರ್‌ಗಳು ಮಾತ್ರ 500 ಟೆಸ್ಟ್ ವಿಕೆಟ್‌ಗಳ ಗಡಿ ಮುಟ್ಟಿದ್ದಾರೆ.

3 / 7
98 ಟೆಸ್ಟ್ ಪಂದ್ಯಗಳ 184 ಇನ್ನಿಂಗ್ಸ್‌ಗಳಲ್ಲಿ 500 ವಿಕೆಟ್‌ಗಳನ್ನು ಪೂರೈಸಿರುವ ರವಿಚಂದ್ರನ್ ಅಶ್ವಿನ್ ಇದರೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 500 ವಿಕೆಟ್ ಪಡೆದ ಎರಡನೇ ಬೌಲರ್ ಎನಿಸಿಕೊಂಡಿದ್ದಾರೆ. ಈ ವಿಷಯದಲ್ಲಿ ಅನಿಲ್ ಕುಂಬ್ಳೆ ಅವರನ್ನು ಹಿಂದೆ ಹಾಕಿದ್ದಾರೆ.

4 / 7
ಟೀಂ ಇಂಡಿಯಾದ ಮಾಜಿ ದಂತಕಥೆ ಅನಿಲ್ ಕುಂಬ್ಳೆ 105 ಟೆಸ್ಟ್ ಪಂದ್ಯಗಳಲ್ಲಿ 500 ವಿಕೆಟ್ ಪೂರೈಸಿದ್ದರು. ಇನ್ನು ಟೆಸ್ಟ್‌ನಲ್ಲಿ ವೇಗವಾಗಿ 500 ವಿಕೆಟ್ ಪಡೆದ ದಾಖಲೆ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಹೆಸರಿನಲ್ಲಿದ್ದು, ಲಂಕಾ ಲೆಜೆಂಡ್ 87 ಟೆಸ್ಟ್ ಪಂದ್ಯಗಳಲ್ಲಿ 500 ವಿಕೆಟ್ ಪೂರೈಸಿದ್ದರು.

5 / 7
ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್​ಗಳ ಪೈಕಿ ಆರ್ ಅಶ್ವಿನ್ ಎರಡನೇ ಸ್ಥಾನದಲ್ಲಿದ್ದಾರೆ. ಆದರೆ, ಈ ಪಟ್ಟಿಯಲ್ಲಿ ಅನಿಲ್ ಕುಂಬ್ಳೆ ಮುಂಚೂಣಿಯಲ್ಲಿದ್ದಾರೆ. ಭಾರತ ಪರ ಅನಿಲ್ ಕುಂಬ್ಳೆ ಟೆಸ್ಟ್ ನಲ್ಲಿ ಒಟ್ಟು 619 ವಿಕೆಟ್ ಪಡೆದಿದ್ದಾರೆ.

6 / 7
ಮತ್ತೊಂದೆಡೆ, ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದವರ ವಿಷಯದಲ್ಲಿ ಅಶ್ವಿನ್ ಎರಡನೇ ಸ್ಥಾನದಲ್ಲಿದ್ದು, ಒಟ್ಟಾರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅಶ್ವಿನ್ 728 ವಿಕೆಟ್‌ಗಳನ್ನು ಪಡೆದಿದ್ದಾರೆ.

7 / 7
2011 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡಿದ್ದ ಅಶ್ವಿನ್, ಆ ನಂತರ ದೆಹಲಿಯ ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ನಡೆದ ಪಂದ್ಯದ ಎರಡೂ ಇನಿಂಗ್ಸ್‌ಗಳಲ್ಲಿ 9 ವಿಕೆಟ್ ಪಡೆದು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.