IND vs ENG: ಕಿಂಗ್ ಕೊಹ್ಲಿಯನ್ನು ಹಿಂದಿಕ್ಕಿ ಕುಂಬ್ಳೆ ದಾಖಲೆಯನ್ನು ಸರಿಗಟ್ಟಿದ ಜಡೇಜಾ..!

Ravindra Jadeja: ರಾಜ್‌ಕೋಟ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಶತಕ ಹಾಗೂ ಎರಡನೇ ಇನ್ನಿಂಗ್ಸ್​ನಲ್ಲಿ ಐದು ವಿಕೆಟ್, ಒಟ್ಟಾರೆ ಪಂದ್ಯದಲ್ಲಿ 7 ವಿಕೆಟ್ ಪಡೆದ ರವೀಂದ್ರ ಜಡೇಜಾ, ತಮ್ಮ ಆಲ್​ ರೌಂಡ್ ಪ್ರದರ್ಶನಕ್ಕೆ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು. ಇದರೊಂದಿಗೆ ಕೊಹ್ಲಿ ದಾಖಲೆಯನ್ನು ಮುರಿದರು.

ಪೃಥ್ವಿಶಂಕರ
|

Updated on:Feb 19, 2024 | 3:05 PM

ರಾಜ್‌ಕೋಟ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 434 ರನ್‌ಗಳ ಐತಿಹಾಸಿಕ ಗೆಲುವು ಸಾಧಿಸಿದ ಭಾರತ ಸರಣಿಯಲ್ಲಿ ಮೇಲುಗೈ ಸಾಧಿಸಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಆಲ್‌ರೌಂಡ್ ಪ್ರದರ್ಶನ ನೀಡಿದ ರವೀಂದ್ರ ಜಡೇಜಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

1 / 6
ಈ ಪಂದ್ಯದಲ್ಲಿ ಒಟ್ಟು ಏಳು ವಿಕೆಟ್ ಪಡೆದ ಜಡೇಜಾ, ಮೊದಲ ಇನ್ನಿಂಗ್ಸ್​ನಲ್ಲಿ ಶತಕ ಕೂಡ ಸಿಡಿಸಿದ್ದರು. ಅಲ್ಲದೆ ಇದೇ ಮೈದಾನದಲ್ಲಿ ಜಡೇಜಾ 200 ಟೆಸ್ಟ್ ವಿಕೆಟ್ ಪೂರೈಸಿದ ಸಾಧನೆ ಕೂಡ ಮಾಡಿದ್ದರು. ಹೀಗಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ಜಡೇಜಾ, ಭಾರತದಲ್ಲಿ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಗೆದ್ದ ಆಟಗಾರರ ಪಟ್ಟಿಯಲ್ಲಿ ಅನಿಲ್ ಕುಂಬ್ಳೆ ಅವರನ್ನು ಸರಿಗಟ್ಟಿದ್ದಾರೆ.

2 / 6
ರವೀಂದ್ರ ಜಡೇಜಾ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 10 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಇದರಲ್ಲಿ 9 ಬಾರಿ ಭಾರತದ ನೆಲದಲ್ಲೇ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಲ್ಲಿಯವರೆಗೆ, ಜಡೇಜಾ ಭಾರತದಲ್ಲಿ ಆಡಿರುವ 42 ಟೆಸ್ಟ್ ಪಂದ್ಯಗಳಲ್ಲಿ 206 ವಿಕೆಟ್‌ಗಳನ್ನು ಕಬಳಿಸಿದ್ದು, 9 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದಾರೆ.

3 / 6
ಇನ್ನು ಭಾರತದಲ್ಲಿ ನಡೆದ ಟೆಸ್ಟ್ ಪಂದ್ಯಗಳಲ್ಲಿ ಅತಿ ಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಗೆದ್ದ ಆಟಗಾರರ ಪಟ್ಟಿಯಲ್ಲಿ ಪ್ರಸ್ತುತ ರವೀಂದ್ರ ಜಡೇಜಾ, ಅನಿಲ್ ಕುಂಬ್ಳೆ ಅವರೊಂದಿಗೆ ಜಂಟಿ ಮೊದಲ ಸ್ಥಾನದಲ್ಲಿದ್ದಾರೆ. ಕನ್ನಡಿಗ ಕುಂಬ್ಳೆ ಭಾರತದಲ್ಲಿ ಆಡಿರುವ 63 ಟೆಸ್ಟ್‌ಗಳಲ್ಲಿ 9 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

4 / 6
ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮತ್ತು ಸಚಿನ್ ತೆಂಡೂಲ್ಕರ್ ಹೆಸರು ಕೂಡ ಸೇರಿದೆ. ಇಬ್ಬರೂ ಶ್ರೇಷ್ಠ ಆಟಗಾರರು ಭಾರತದಲ್ಲಿ ಟೆಸ್ಟ್‌ಗಳಲ್ಲಿ ಎಂಟು ಪಂದ್ಯ ಶ್ರೇಷ್ಠ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

5 / 6
ನಂತರದ ಸ್ಥಾನದಲ್ಲಿರುವ ಜಾವಗಲ್ ಶ್ರೀನಾಥ್ (32 ಟೆಸ್ಟ್), ರವಿಚಂದ್ರನ್ ಅಶ್ವಿನ್ (58 ಟೆಸ್ಟ್‌), ಹರ್ಭಜನ್ ಸಿಂಗ್ (55 ಟೆಸ್ಟ್‌) ತಲಾ 6 ಬಾರಿ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

6 / 6

Published On - 3:02 pm, Mon, 19 February 24

Follow us