AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಧ್ರುವ್ ಜುರೆಲ್ ಭವಿಷ್ಯದ ಎಂಎಸ್ ಧೋನಿ ಎಂದ ಭಾರತದ ಮಾಜಿ ನಾಯಕ

IND vs ENG: ಮೂರನೇ ಟೆಸ್ಟ್ ಪಂದ್ಯದಲ್ಲಿ ಅರ್ಧಶತಕದಂಚಿನಲ್ಲಿ ಎಡವಿದ ಜುರೇಲ್ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ 90 ರನ್​ಗಳ ನಿರ್ಣಾಯಕ ಇನ್ನಿಂಗ್ಸ್ ಆಡಿದರು. ಅಲ್ಲದೆ ತಮ್ಮ ಆಟದಿಂದ ಪರಿಣಿತರ ಪ್ರಶಂಸೆಗೆ ಪಾತ್ರರಾದರು. ಪಂದ್ಯದ ವೇಳೆ ವೀಕ್ಷಕ ವಿವರಣೆ ನೀಡುತ್ತಿದ್ದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಧ್ರುವ್ ಅವರನ್ನು ಭವಿಷ್ಯದ ಧೋನಿ ಎಂದಿದ್ದು ಅವರ ಆಟಕ್ಕೆ ಸಾಕ್ಷಿಯಾಗಿತ್ತು.

ಪೃಥ್ವಿಶಂಕರ
|

Updated on: Feb 25, 2024 | 8:18 PM

Share
ರಾಂಚಿಯಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 90 ರನ್‌ಗಳ ಅದ್ಭುತ ಇನ್ನಿಂಗ್ಸ್‌ ಆಡಿದ ಭಾರತದ ವಿಕೆಟ್‌ಕೀಪರ್ ಧ್ರುವ್ ಜುರೆಲ್ ಅವರಿಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಸರಣಿಯಲ್ಲಿ ಎರಡನೇ ಪಂದ್ಯವನ್ನಾಡುತ್ತಿರುವ ಜುರೇಲ್ ಅದ್ಭುತ ಪ್ರದರ್ಶನ ನೀಡಿದ್ದಾರೆ.

1 / 6
ಮೂರನೇ ಟೆಸ್ಟ್ ಪಂದ್ಯದಲ್ಲಿ ಅರ್ಧಶತಕದಂಚಿನಲ್ಲಿ ಎಡವಿದ ಜುರೇಲ್ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ 90 ರನ್​ಗಳ ನಿರ್ಣಾಯಕ ಇನ್ನಿಂಗ್ಸ್ ಆಡಿದರು. ಅಲ್ಲದೆ ತಮ್ಮ ಆಟದಿಂದ ಪರಿಣಿತರ ಪ್ರಶಂಸೆಗೆ ಪಾತ್ರರಾದರು. ಪಂದ್ಯದ ವೇಳೆ ವೀಕ್ಷಕ ವಿವರಣೆ ನೀಡುತ್ತಿದ್ದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಧ್ರುವ್ ಅವರನ್ನು ಭವಿಷ್ಯದ ಧೋನಿ ಎಂದಿದ್ದು ಅವರ ಆಟಕ್ಕೆ ಸಾಕ್ಷಿಯಾಗಿತ್ತು.

2 / 6
ಆಂಗ್ಲರ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿ ಕೆಟ್ಟ ಎಸೆತಗಳನ್ನು ದಂಡಿಸುತ್ತಿದ್ದ ಧ್ರುವ್ ಆಟವನ್ನು ನೋಡಿದ ಗವಾಸ್ಕರ್, ಜುರೆಲ್ ಅವರ ಉಪಸ್ಥಿತಿಯನ್ನು ದಂತಕಥೆ ಎಂಎಸ್ ಧೋನಿಯವರ ಉಪಸ್ಥಿತಿಗೆ ಹೋಲಿಸಿದರು ಮತ್ತು ಭವಿಷ್ಯದಲ್ಲಿ ಜುರೇಲ್ ಅನೇಕ ಶತಕಗಳನ್ನು ಸಿಡಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

3 / 6
ತಮ್ಮ ಇನ್ನಿಂಗ್ಸ್​ನಲ್ಲಿ 149 ಎಸೆತಗಳನ್ನು ಎದುರಿಸಿದ ಜುರೇಲ್ ಆರು ಬೌಂಡರಿ ಹಾಗೂ ನಾಲ್ಕು ಸಿಕ್ಸರ್‌ಗಳನ್ನು ಬಾರಿಸಿದ್ದರು. ಅಲ್ಲದೆ ಅವರು ಎಂಟನೇ ವಿಕೆಟ್‌ಗೆ ಕುಲ್ದೀಪ್ ಯಾದವ್ ಅವರೊಂದಿಗೆ 76 ರನ್‌ಗಳ ಪ್ರಮುಖ ಜೊತೆಯಾಟವನ್ನು ಮಾಡಿದರು.

4 / 6
ಮೂರನೇ ಟೆಸ್ಟ್​ನಲ್ಲೂ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ್ದ ಜುರೇಲ್ ಮೊದಲ ಇನ್ನಿಂಗ್ಸ್​ನಲ್ಲಿ 2 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 46 ರನ್​ಗಳ ಇನ್ನಿಂಗ್ಸ್ ಆಡಿದ್ದರು. ಬ್ಯಾಟಿಂಗ್ ಜೊತೆಗೆ ವಿಕೆಟ್ ಕೀಪಿಂಗ್​ನಲ್ಲೂ ತಮ್ಮ ಸಾಮಥ್ಯ್ರ ತೋರಿದ್ದ ಜುರೇಲ್, ತಮ್ಮ ಅದ್ಭುತ ಕೈಚಳಕದ ಮೂಲಕ ಬೈರ್​​ಸ್ಟೋವ್​ರನ್ನು ರನ್ಔಟ್ ಮಾಡುವಲ್ಲಿ ಯಶಸ್ವಿಯಾಗಿದ್ದರು.

5 / 6
ಪ್ರಸ್ತುತ ನಾಲ್ಕನೇ ಟೆಸ್ಟ್​ನಲ್ಲಿ 192 ರನ್​ಗಳ ಗೆಲುವಿನ ಗುರಿ ಪಡೆದಿರುವ ಭಾರತ ನಾಲ್ಕನೇ ದಿನದಾಟದಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 40 ರನ್ ಕಲೆಹಾಕಿದೆ. ನಾಲ್ಕನೇ ದಿನದಂದು ಭಾರತದ ಗೆಲುವಿಗೆ ಇನ್ನು 152 ರನ್ ಬೇಕಾಗಿದೆ. ಇಂಗ್ಲೆಂಡ್‌ ಗೆಲುವಿಗೆ 10 ವಿಕೆಟ್ ಅವಶ್ಯಕವಾಗಿದೆ.

6 / 6
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮೇಷ, ಕರ್ಕಾಟಕ ರಾಶಿಗೆ ಭಾರಿ ಧನಯೋಗ
ಮೇಷ, ಕರ್ಕಾಟಕ ರಾಶಿಗೆ ಭಾರಿ ಧನಯೋಗ
ಎಲ್‌ಎಸಿಯಲ್ಲಿ ಸೈನ್ಯದ ಗಸ್ತು ಮಾದರಿ ಬದಲಾವಣೆ; ಚೀನಾ ನಡೆಗೆ ಭಾರತ ಆಕ್ಷೇಪ

ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!

ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ

ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ