AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಟೀಮ್ ಇಂಡಿಯಾ ವಿರುದ್ಧ ಯುವ ವೇಗಿ ಕಣಕ್ಕೆ

India vs England 4th Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯವು ಫೆಬ್ರವರಿ 23 ರಿಂದ ಶುರುವಾಗಲಿದೆ. ರಾಂಚಿಯಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಇಂಗ್ಲೆಂಡ್ ಪರ 26 ವರ್ಷದ ಯುವ ವೇಗಿ ಗಸ್ ಅಟ್ಕಿನ್ಸನ್ ಕಣಕ್ಕಿಳಿಯುವ ಸಾಧ್ಯತೆಯಿದೆ. ಫಸ್ಟ್ ಕ್ಲಾಸ್ ಕ್ರಿಕೆಟ್​ನಲ್ಲಿ ಇದುವರೆಗೆ 14 ಪಂದ್ಯಗಳನ್ನಾಡಿರುವ ಗಸ್ ಒಟ್ಟು 45 ವಿಕೆಟ್​ಗಳನ್ನು ಕಬಳಿಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Feb 20, 2024 | 11:58 AM

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಗೆದ್ದರೆ, ಆ ಬಳಿಕ 2 ಪಂದ್ಯಗಳಲ್ಲಿ ಭಾರತ ತಂಡವು ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸಿದೆ. ಇದೀಗ ನಾಲ್ಕನೇ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿದೆ ಇಂಗ್ಲೆಂಡ್.

1 / 5
ಏಕೆಂದರೆ ನಾಲ್ಕನೇ ಪಂದ್ಯದಲ್ಲೂ ಟೀಮ್ ಇಂಡಿಯಾ ಗೆದ್ದರೆ ಸರಣಿ ಕೈ ತಪ್ಪಲಿದೆ. ಹೀಗಾಗಿ ಈ ಪಂದ್ಯಕ್ಕಾಗಿ ಇಂಗ್ಲೆಂಡ್ ತಂಡವು ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಅದರಲ್ಲೂ ಬೌಲಿಂಗ್ ಲೈನಪ್​ನಿಂದ ಅನುಭವಿ ವೇಗಿ ಜೇಮ್ಸ್ ಅ್ಯಂಡರ್ಸನ್ ಅವರನ್ನು ಕೈ ಬಿಡಲಿದ್ದಾರೆ ಎಂದು ತಿಳಿದು ಬಂದಿದೆ.

2 / 5
ರಾಂಚಿಯ JSCA ಸ್ಟೇಡಿಯಂ ಪಿಚ್ ಸ್ವಿಂಗ್‌ ಬೌಲಿಂಗ್​ಗೆ ಸಹಕಾರಿಯಲ್ಲ. ಹೀಗಾಗಿ ಸ್ವಿಂಗ್ ಮಾಸ್ಟರ್ ಜೇಮ್ಸ್ ಅ್ಯಂಡರ್ಸನ್ ಅವರಿಗೆ ವಿಶ್ರಾಂತಿ ನೀಡಲು ಇಂಗ್ಲೆಂಡ್ ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ. ಅಲ್ಲದೆ ಧರ್ಮಶಾಲಾದಲ್ಲಿ ನಡೆಯಲಿರುವ ಕೊನೆಯ ಪಂದ್ಯದಲ್ಲಿ ಅವರನ್ನು ಕಣಕ್ಕಿಳಿಸಲು ಪ್ಲ್ಯಾನ್ ರೂಪಿಸಲಾಗಿದೆ.

3 / 5
ಇತ್ತ ಜೇಮ್ಸ್ ಅ್ಯಂಡರ್ಸನ್ ಅವರನ್ನು ತಂಡದಿಂದ ಹೊರಗಿಟ್ಟರೆ ಅವರ ಬದಲಿಗೆ ಗಸ್ ಅಟ್ಕಿನ್ಸನ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಇದೇ ಮೊದಲ ಬಾರಿಗೆ ಇಂಗ್ಲೆಂಡ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿರುವ ಅಟ್ಕಿನ್ಸನ್​ಗೆ ಚೊಚ್ಚಲ ಪಂದ್ಯವಾಡುವ ಅವಕಾಶ ಸಿಕ್ಕಿಲ್ಲ. ಅದರಲ್ಲೂ ಭಾರತೀಯ ಬ್ಯಾಟರ್​ಗಳಿಗೆ ಗಸ್ ಅವರ ತಂತ್ರಗಾರಿಕೆ ಬಗ್ಗೆ ಹೆಚ್ಚಿನ ಮಾಹಿತಿಯಿಲ್ಲ. ಹೀಗಾಗಿ ರಾಂಚಿ ಟೆಸ್ಟ್​ನಲ್ಲಿ 26 ವರ್ಷದ ಗಸ್ ಅಟ್ಕಿನ್ಸನ್ ಅವರು ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

4 / 5
ಇಂಗ್ಲೆಂಡ್ ಟೆಸ್ಟ್​ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂಡರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್‌ಸ್ಟೋವ್, ಶೋಯೆಬ್ ಬಶೀರ್, ಡ್ಯಾನ್ ಲಾರೆನ್ಸ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಒಲೀ ಪೋಪ್, ಆಲಿ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.

5 / 5
Follow us
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್

ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ

ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್

ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ

ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ

ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ

ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ

ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್

ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ

ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!