
ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಗೆದ್ದರೆ, ಆ ಬಳಿಕ 2 ಪಂದ್ಯಗಳಲ್ಲಿ ಭಾರತ ತಂಡವು ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸಿದೆ. ಇದೀಗ ನಾಲ್ಕನೇ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿದೆ ಇಂಗ್ಲೆಂಡ್.

ಏಕೆಂದರೆ ನಾಲ್ಕನೇ ಪಂದ್ಯದಲ್ಲೂ ಟೀಮ್ ಇಂಡಿಯಾ ಗೆದ್ದರೆ ಸರಣಿ ಕೈ ತಪ್ಪಲಿದೆ. ಹೀಗಾಗಿ ಈ ಪಂದ್ಯಕ್ಕಾಗಿ ಇಂಗ್ಲೆಂಡ್ ತಂಡವು ಪ್ಲೇಯಿಂಗ್ ಇಲೆವೆನ್ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಅದರಲ್ಲೂ ಬೌಲಿಂಗ್ ಲೈನಪ್ನಿಂದ ಅನುಭವಿ ವೇಗಿ ಜೇಮ್ಸ್ ಅ್ಯಂಡರ್ಸನ್ ಅವರನ್ನು ಕೈ ಬಿಡಲಿದ್ದಾರೆ ಎಂದು ತಿಳಿದು ಬಂದಿದೆ.

ರಾಂಚಿಯ JSCA ಸ್ಟೇಡಿಯಂ ಪಿಚ್ ಸ್ವಿಂಗ್ ಬೌಲಿಂಗ್ಗೆ ಸಹಕಾರಿಯಲ್ಲ. ಹೀಗಾಗಿ ಸ್ವಿಂಗ್ ಮಾಸ್ಟರ್ ಜೇಮ್ಸ್ ಅ್ಯಂಡರ್ಸನ್ ಅವರಿಗೆ ವಿಶ್ರಾಂತಿ ನೀಡಲು ಇಂಗ್ಲೆಂಡ್ ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ. ಅಲ್ಲದೆ ಧರ್ಮಶಾಲಾದಲ್ಲಿ ನಡೆಯಲಿರುವ ಕೊನೆಯ ಪಂದ್ಯದಲ್ಲಿ ಅವರನ್ನು ಕಣಕ್ಕಿಳಿಸಲು ಪ್ಲ್ಯಾನ್ ರೂಪಿಸಲಾಗಿದೆ.

ಇತ್ತ ಜೇಮ್ಸ್ ಅ್ಯಂಡರ್ಸನ್ ಅವರನ್ನು ತಂಡದಿಂದ ಹೊರಗಿಟ್ಟರೆ ಅವರ ಬದಲಿಗೆ ಗಸ್ ಅಟ್ಕಿನ್ಸನ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಇದೇ ಮೊದಲ ಬಾರಿಗೆ ಇಂಗ್ಲೆಂಡ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿರುವ ಅಟ್ಕಿನ್ಸನ್ಗೆ ಚೊಚ್ಚಲ ಪಂದ್ಯವಾಡುವ ಅವಕಾಶ ಸಿಕ್ಕಿಲ್ಲ. ಅದರಲ್ಲೂ ಭಾರತೀಯ ಬ್ಯಾಟರ್ಗಳಿಗೆ ಗಸ್ ಅವರ ತಂತ್ರಗಾರಿಕೆ ಬಗ್ಗೆ ಹೆಚ್ಚಿನ ಮಾಹಿತಿಯಿಲ್ಲ. ಹೀಗಾಗಿ ರಾಂಚಿ ಟೆಸ್ಟ್ನಲ್ಲಿ 26 ವರ್ಷದ ಗಸ್ ಅಟ್ಕಿನ್ಸನ್ ಅವರು ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

ಇಂಗ್ಲೆಂಡ್ ಟೆಸ್ಟ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂಡರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್‌ಸ್ಟೋವ್, ಶೋಯೆಬ್ ಬಶೀರ್, ಡ್ಯಾನ್ ಲಾರೆನ್ಸ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಒಲೀ ಪೋಪ್, ಆಲಿ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.