- Kannada News Photo gallery Cricket photos IND vs ENG 4th test Rohit Sharma records in JSCA Stadium in Ranchi
IND vs ENG: ರಾಂಚಿ ಮೈದಾನವೆಂದರೆ ಹಿಟ್ಮ್ಯಾನ್ ರೋಹಿತ್ಗೆ ಬಲು ಅಚ್ಚುಮೆಚ್ಚು
IND vs ENG: 2019 ರಲ್ಲಿ ರಾಂಚಿಯಲ್ಲಿ ನಡೆದಿದ್ದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ರೋಹಿತ್ ಶರ್ಮಾ 212 ರನ್‌ಗಳ ಪ್ರಬಲ ಇನ್ನಿಂಗ್ಸ್ ಆಡಿದ್ದರು. ಈ ಇನ್ನಿಂಗ್ಸ್‌ನಲ್ಲಿ ರೋಹಿತ್ 255 ಎಸೆತಗಳನ್ನು ಎದುರಿಸಿ 28 ಬೌಂಡರಿ ಮತ್ತು 6 ಸಿಕ್ಸರ್‌ಗಳನ್ನು ಬಾರಿಸಿದ್ದರು.
Updated on: Feb 22, 2024 | 9:12 PM

ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದ ಸಿದ್ಧತೆ ಪೂರ್ಣಗೊಂಡಿದೆ. 5 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಆಡಲು ಟೀಂ ಇಂಡಿಯಾ ರಾಂಚಿ ತಲುಪಿದೆ. ಕೊನೆಯದಾಗಿ ಭಾರತ ತಂಡ ಇಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಿತ್ತು. ಇದರಲ್ಲಿ ಆತಿಥೇಯ ತಂಡವು ಇನಿಂಗ್ಸ್ ಮತ್ತು 202 ರನ್‌ಗಳಿಂದ ಗೆದ್ದಿತು.

ಈ ಪಂದ್ಯದಲ್ಲಿ ಟೀಂ ಇಂಡಿಯಾ ಪರ ರೋಹಿತ್ ಶರ್ಮಾ 212 ರನ್ ಗಳ ಭರ್ಜರಿ ಇನ್ನಿಂಗ್ಸ್ ಆಡಿದ್ದರು. ತಮ್ಮ ದ್ವಿಶತಕದ ಆಟದಿಂದಾಗಿ ರೋಹಿತ್ ಶರ್ಮಾ ಪಂದ್ಯಶ್ರೇಷ್ಠ ಪ್ರಶಸ್ತಿಗೂ ಭಾಜನರಾಗಿದ್ದರು.

2019 ರಲ್ಲಿ ರಾಂಚಿಯಲ್ಲಿ ನಡೆದಿದ್ದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ರೋಹಿತ್ ಶರ್ಮಾ 212 ರನ್‌ಗಳ ಪ್ರಬಲ ಇನ್ನಿಂಗ್ಸ್ ಆಡಿದ್ದರು. ಈ ಇನ್ನಿಂಗ್ಸ್‌ನಲ್ಲಿ ರೋಹಿತ್ 255 ಎಸೆತಗಳನ್ನು ಎದುರಿಸಿ 28 ಬೌಂಡರಿ ಮತ್ತು 6 ಸಿಕ್ಸರ್‌ಗಳನ್ನು ಬಾರಿಸಿದ್ದರು.

ದಕ್ಷಿಣ ಆಫ್ರಿಕಾ ವಿರುದ್ಧದ ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರ ಬಲಿಷ್ಠ ದ್ವಿಶತಕದ ನೆರವಿನಿಂದ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು ಇನ್ನಿಂಗ್ಸ್ ಮತ್ತು 202 ರನ್‌ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಈ ಮೈದಾನದಲ್ಲಿ ಟೆಸ್ಟ್ ಪಂದ್ಯವನ್ನು ಸೋಲದ ದಾಖಲೆಯನ್ನು ಉಳಿಸಿಕೊಂಡಿದೆ.

ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಅಲ್ಲದೆ ಅಜಿಂಕ್ಯ ರಹಾನೆ ಕೂಡ ತಂಡದ ಪರ ಶತಕ ಸಿಡಿಸಿದ್ದು, ಈ ಕಾರಣಕ್ಕೆ ಟೀಂ ಇಂಡಿಯಾ 9 ವಿಕೆಟ್ಗೆ 497 ರನ್ ಗಳಿಸಿ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ. ಇದಕ್ಕೆ ಉತ್ತರವಾಗಿ ದಕ್ಷಿಣ ಆಫ್ರಿಕಾ ತಂಡ ಮೊದಲ ಇನಿಂಗ್ಸ್‌ನಲ್ಲಿ 162 ರನ್‌ಗಳಿಗೆ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 133 ರನ್‌ಗಳಿಗೆ ಆಲೌಟ್ ಆಗಿ 202 ರನ್‌ಗಳಿಂದ ಸೋಲೊಪ್ಪಿಕೊಂಡಿತ್ತು.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.



















