- Kannada News Photo gallery Cricket photos IND vs ENG 4th Test: Shubman Gill Breaks Virat Kohli's Record
Shubman Gill: ಗಿಲ್ ಗಿಲಕ್ಗೆ ವಿರಾಟ್ ಕೊಹ್ಲಿ ದಾಖಲೆ ಉಡೀಸ್
India vs England: ಮ್ಯಾಂಚೆಸ್ಟರ್ನಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್ನಲ್ಲಿ 358 ರನ್ ಕಲೆಹಾಕಿದರೆ, ಇಂಗ್ಲೆಂಡ್ ಮೊದಲ ಇನಿಂಗ್ಸ್ನಲ್ಲಿ 669 ರನ್ಗಳಿಸಿತು. ಇದೀಗ ದ್ವಿತೀಯ ಇನಿಂಗ್ಸ್ ಆಡುತ್ತಿರುವ ಟೀಮ್ ಇಂಡಿಯಾ 4ನೇ ದಿನದಾಟದ ಅಂತ್ಯಕ್ಕೆ 2 ವಿಕೆಟ್ ಕಳೆದುಕೊಂಡು 174 ರನ್ಗಳಿಸಿದೆ.
Updated on: Jul 27, 2025 | 1:50 PM

ಟೀಮ್ ಇಂಡಿಯಾದ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ (Virat Kohli) ಮತ್ತೊಂದು ಭರ್ಜರಿ ದಾಖಲೆಯನ್ನು ಶುಭ್ಮನ್ ಗಿಲ್ (Shubman Gill) ಮುರಿದಿದ್ದಾರೆ. ಮ್ಯಾಂಚೆಸ್ಟರ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ಗಿಲ್ ಅಜೇಯ 78 ರನ್ ಬಾರಿಸಿದ್ದಾರೆ. ಈ 78 ರನ್ಗೊಂದಿಗೆ ಶುಭ್ಮನ್ ಗಿಲ್ ಭಾರತದ ಪರ ಟೆಸ್ಟ್ ಸರಣಿಯೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ನಾಯಕ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ 2014 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ 692 ರನ್ ಗಳಿಸಿ ಈ ಭರ್ಜರಿ ದಾಖಲೆ ನಿರ್ಮಿಸಿದ್ದರು. ಇದೀಗ ಚೊಚ್ಚಲ ಟೆಸ್ಟ್ ನಾಯಕತ್ವದಲ್ಲೇ ಶುಭ್ಮನ್ ಗಿಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ 11 ವರ್ಷಗಳ ಹಳೆಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಶುಭ್ಮನ್ ಗಿಲ್ ಪ್ರಸ್ತುತ ಇಂಗ್ಲೆಂಡ್ ಸರಣಿಯಲ್ಲಿ ಈವರೆಗೆ 697 ರನ್ ಕಲೆಹಾಕಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಸರಣಿವೊಂದರಲ್ಲಿ ಭಾರತದ ಪರ ಅತ್ಯಧಿಕ ರನ್ ಗಳಿಸಿದ ಟೀಮ್ ಇಂಡಿಯಾ ಕ್ಯಾಪ್ಟನ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಹಾಗೆಯೇ ಆಂಗ್ಲರ ನಾಡಿನಲ್ಲಿ ಸರಣಿವೊಂದರಲ್ಲಿ ಅತ್ಯಧಿಕ ರನ್ಗಳಿಸಿದ ಏಷ್ಯನ್ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಪಾಕಿಸ್ತಾನದ ಮಾಜಿ ಆಟಗಾರ ಮೊಹಮ್ಮದ್ ಯೂಸುಫ್ ಹೆಸರಿನಲ್ಲಿತ್ತು. 2006 ರಲ್ಲಿ ಮೊಹಮ್ಮದ್ ಯೂಸುಫ್ ಇಂಗ್ಲೆಂಡ್ನಲ್ಲಿ 631 ರನ್ ಕಲೆಹಾಕಿದ್ದರು. ಈ ಮೂಲಕ ಇಂಗ್ಲೆಂಡ್ನಲ್ಲಿ ಟೆಸ್ಟ್ ಸರಣಿವೊಂದರಲ್ಲಿ ಅತೀ ಹೆಚ್ಚು ರನ್ಗಳಿಸಿದ ಏಷ್ಯಾದ ಬ್ಯಾಟರ್ ಎನಿಸಿಕೊಂಡಿದ್ದರು. ಇದೀಗ 697 ರನ್ಗಳೊಂದಿಗೆ ಶುಭ್ಮನ್ ಗಿಲ್ ಈ ದಾಖಲೆಯನ್ನು ಸಹ ಮುರಿದಿದ್ದಾರೆ.

ಇದಲ್ಲದೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿರುವ ಸರ್ವಶ್ರೇಷ್ಠ ದಾಖಲೆಯತ್ತ ಕೂಡ ಶುಭ್ಮನ್ ಗಿಲ್ ದಾಪುಗಾಲಿಟ್ಟಿದ್ದಾರೆ. ಟೀಮ್ ಇಂಡಿಯಾ ಪರ ಟೆಸ್ಟ್ ಸರಣಿವೊಂದರಲ್ಲಿ ಅತೀ ಹೆಚ್ಚು ರನ್ ಗಳಿಸಿದ ದಾಖಲೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿದೆ. 1971 ರಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಗವಾಸ್ಕರ್ 774 ರನ್ ಕಲೆಹಾಕಿದ್ದರು. ಇದೀಗ 697 ರನ್ಗಳಿಸಿರುವ ಗಿಲ್ 4ನೇ ಟೆಸ್ಟ್ನಲ್ಲಿ ಅಥವಾ 5ನೇ ಟೆಸ್ಟ್ ಪಂದ್ಯದ ಮೂಲಕ ಒಟ್ಟು 78 ರನ್ ಬಾರಿಸಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.




