Shubman Gill: ಗಿಲ್ ಗಿಲಕ್​ಗೆ ವಿರಾಟ್ ಕೊಹ್ಲಿ ದಾಖಲೆ ಉಡೀಸ್

Updated on: Jul 27, 2025 | 1:50 PM

India vs England: ಮ್ಯಾಂಚೆಸ್ಟರ್​ನಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 358 ರನ್ ಕಲೆಹಾಕಿದರೆ, ಇಂಗ್ಲೆಂಡ್ ಮೊದಲ ಇನಿಂಗ್ಸ್​ನಲ್ಲಿ 669 ರನ್​ಗಳಿಸಿತು. ಇದೀಗ ದ್ವಿತೀಯ ಇನಿಂಗ್ಸ್ ಆಡುತ್ತಿರುವ ಟೀಮ್ ಇಂಡಿಯಾ 4ನೇ ದಿನದಾಟದ ಅಂತ್ಯಕ್ಕೆ 2 ವಿಕೆಟ್ ಕಳೆದುಕೊಂಡು 174 ರನ್​ಗಳಿಸಿದೆ.

1 / 5
ಟೀಮ್ ಇಂಡಿಯಾದ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ (Virat Kohli) ಮತ್ತೊಂದು ಭರ್ಜರಿ ದಾಖಲೆಯನ್ನು ಶುಭ್​ಮನ್​ ಗಿಲ್ (Shubman Gill) ಮುರಿದಿದ್ದಾರೆ. ಮ್ಯಾಂಚೆಸ್ಟರ್​​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಗಿಲ್ ಅಜೇಯ 78 ರನ್ ಬಾರಿಸಿದ್ದಾರೆ. ಈ 78 ರನ್​ಗೊಂದಿಗೆ ಶುಭ್​ಮನ್ ಗಿಲ್ ಭಾರತದ ಪರ ಟೆಸ್ಟ್​ ಸರಣಿಯೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ನಾಯಕ ಎನಿಸಿಕೊಂಡಿದ್ದಾರೆ.

2 / 5
ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ 2014 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ 692 ರನ್ ಗಳಿಸಿ ಈ ಭರ್ಜರಿ ದಾಖಲೆ ನಿರ್ಮಿಸಿದ್ದರು. ಇದೀಗ ಚೊಚ್ಚಲ ಟೆಸ್ಟ್​ ನಾಯಕತ್ವದಲ್ಲೇ ಶುಭ್​ಮನ್ ಗಿಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ 11 ವರ್ಷಗಳ ಹಳೆಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

3 / 5
ಶುಭ್​ಮನ್ ಗಿಲ್ ಪ್ರಸ್ತುತ ಇಂಗ್ಲೆಂಡ್ ಸರಣಿಯಲ್ಲಿ ಈವರೆಗೆ 697 ರನ್ ಕಲೆಹಾಕಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಸರಣಿವೊಂದರಲ್ಲಿ ಭಾರತದ ಪರ ಅತ್ಯಧಿಕ ರನ್​ ಗಳಿಸಿದ ಟೀಮ್ ಇಂಡಿಯಾ ಕ್ಯಾಪ್ಟನ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಹಾಗೆಯೇ ಆಂಗ್ಲರ ನಾಡಿನಲ್ಲಿ ಸರಣಿವೊಂದರಲ್ಲಿ ಅತ್ಯಧಿಕ ರನ್​ಗಳಿಸಿದ ಏಷ್ಯನ್ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

4 / 5
ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಪಾಕಿಸ್ತಾನದ ಮಾಜಿ ಆಟಗಾರ ಮೊಹಮ್ಮದ್ ಯೂಸುಫ್ ಹೆಸರಿನಲ್ಲಿತ್ತು. 2006 ರಲ್ಲಿ ಮೊಹಮ್ಮದ್ ಯೂಸುಫ್ ಇಂಗ್ಲೆಂಡ್​ನಲ್ಲಿ 631 ರನ್​ ಕಲೆಹಾಕಿದ್ದರು. ಈ ಮೂಲಕ ಇಂಗ್ಲೆಂಡ್​ನಲ್ಲಿ ಟೆಸ್ಟ್​ ಸರಣಿವೊಂದರಲ್ಲಿ ಅತೀ ಹೆಚ್ಚು ರನ್​ಗಳಿಸಿದ ಏಷ್ಯಾದ ಬ್ಯಾಟರ್ ಎನಿಸಿಕೊಂಡಿದ್ದರು. ಇದೀಗ 697 ರನ್​ಗಳೊಂದಿಗೆ ಶುಭ್​ಮನ್ ಗಿಲ್ ಈ ದಾಖಲೆಯನ್ನು ಸಹ ಮುರಿದಿದ್ದಾರೆ.

5 / 5
ಇದಲ್ಲದೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿರುವ ಸರ್ವಶ್ರೇಷ್ಠ ದಾಖಲೆಯತ್ತ ಕೂಡ ಶುಭ್​ಮನ್ ಗಿಲ್ ದಾಪುಗಾಲಿಟ್ಟಿದ್ದಾರೆ. ಟೀಮ್ ಇಂಡಿಯಾ ಪರ ಟೆಸ್ಟ್ ಸರಣಿವೊಂದರಲ್ಲಿ ಅತೀ ಹೆಚ್ಚು ರನ್​ ಗಳಿಸಿದ ದಾಖಲೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿದೆ. 1971 ರಲ್ಲಿ ನಡೆದ ವೆಸ್ಟ್ ಇಂಡೀಸ್​ ವಿರುದ್ಧದ ಸರಣಿಯಲ್ಲಿ ಗವಾಸ್ಕರ್ 774 ರನ್ ಕಲೆಹಾಕಿದ್ದರು. ಇದೀಗ 697 ರನ್​ಗಳಿಸಿರುವ ಗಿಲ್ 4ನೇ ಟೆಸ್ಟ್​ನಲ್ಲಿ ಅಥವಾ 5ನೇ ಟೆಸ್ಟ್ ಪಂದ್ಯದ ಮೂಲಕ ಒಟ್ಟು 78 ರನ್ ಬಾರಿಸಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.