IND vs ENG: ಯಶಸ್ವಿ ಜೈಸ್ವಾಲ್ ತೋಳ್ಬಲಕ್ಕೆ ಕಿಂಗ್ ಕೊಹ್ಲಿ ದಾಖಲೆ ಉಡೀಸ್..!

|

Updated on: Feb 24, 2024 | 6:44 PM

IND vs ENG: ಯಶಸ್ವಿ ಜೈಸ್ವಾಲ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರನ್​ಗಳ ಶಿಖರ ಕಟ್ಟಿದ್ದಾರೆ. ಸರಣಿಯಲ್ಲಿ ಈಗಾಗಲೇ ಎರಡು ದ್ವಿಶತಕ ಸಿಡಿಸಿರುವ ಜೈಸ್ವಾಲ್, ರಾಂಚಿಯಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ಕಿಂಗ್ ಕೊಹ್ಲಿಯ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ.

1 / 7
ಟೀಂ ಇಂಡಿಯಾದಲ್ಲಿ ಸಿಕ್ಕ ಅವಕಾಶವನ್ನು ಎರಡು ಕೈಗಳಿಂದ ಬಾಚಿಕೊಂಡಿರುವ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರನ್​ಗಳ ಶಿಖರ ಕಟ್ಟಿದ್ದಾರೆ. ಸರಣಿಯಲ್ಲಿ ಈಗಾಗಲೇ ಎರಡು ದ್ವಿಶತಕ ಸಿಡಿಸಿರುವ ಜೈಸ್ವಾಲ್, ರಾಂಚಿಯಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ಕಿಂಗ್ ಕೊಹ್ಲಿಯ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ.

2 / 7
ರಾಂಚಿ ಟೆಸ್ಟ್​ನ ಮೊದಲ ಟೆಸ್ಟ್​ನಲ್ಲಿ ಟೀಂ ಇಂಡಿಯಾ ಪರ ಏಕಾಂಗಿ ಹೋರಾಟ ನಡೆಸಿದ ಜೈಸ್ವಾಲ್, ಬರೋಬ್ಬರಿ 117 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 73 ರನ್​ಗಳ ಅವಶ್ಯಕ ಇನ್ನಿಂಗ್ಸ್ ಆಡಿದರು. ಈ ವೇಳೆ ಯಶಸ್ವಿ ಸಿಡಿಸಿದ ಏಕೈಕ ಇನ್ನಿಂಗ್ಸ್, ಟೆಸ್ಟ್ ವೃತ್ತಿಜೀವನದಲ್ಲಿ ಕಿಂಗ್ ಕೊಹ್ಲಿ ಇದುವರೆಗೆ ಮಾಡಿರುವ ಸಾಧನೆಯನ್ನು ಸರಿಗಟ್ಟಿದರು.

3 / 7
ವಾಸ್ತವವಾಗಿ 2011ರಲ್ಲಿ ಟೀಂ ಇಂಡಿಯಾ ಪರ ಟೆಸ್ಟ್‌ಗೆ ಪದಾರ್ಪಣೆ ಮಾಡಿದ ವಿರಾಟ್ ಕೊಹ್ಲಿ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಇದುವರೆಗೆ 26 ಸಿಕ್ಸರ್ಗಳನ್ನು ಹೊಡೆದಿದ್ದಾರೆ. ಆದರೆ ಕಳೆದ ವರ್ಷ ಭಾರತ ಟೆಸ್ಟ್ ತಂಡಕ್ಕೆ ಪದಾರ್ಪಣೆ ಮಾಡಿದ ಯಶಸ್ವಿ ಜೈಸ್ವಾಲ್, ಕಿಂಗ್ ಕೊಹ್ಲಿಯ ಸಿಕ್ಸರ್​ಗಳ ಸಂಖ್ಯೆಯನ್ನು ಸರಿಗಟ್ಟಿದ್ದಾರೆ.

4 / 7
ರಾಂಚಿ ಟೆಸ್ಟ್​ನ ಮೊದಲ ಇನ್ನಿಂಗ್ಸ್‌ನಲ್ಲಿ ಒಂದು ಸಿಕ್ಸರ್ ಬಾರಿಸುವ ಮೂಲಕ ಜೈಸ್ವಾಲ್ ತಮ್ಮ ವೃತ್ತಿಜೀವನದಲ್ಲಿ 26 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಈ ಮೂಲಕ ತಮ್ಮ ವೃತ್ತಿ ಜೀವನದಲ್ಲಿ 26 ಸಿಕ್ಸರ್‌ಗಳನ್ನು ಬಾರಿಸಿರುವ ವಿರಾಟ್ ಕೊಹ್ಲಿಯನ್ನು ಯಶಸ್ವಿ ಜೈಸ್ವಾಲ್ ಸರಿಟ್ಟಿದ್ದಾರೆ.

5 / 7
2023 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯೊಂದಿಗೆ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದ ಯಶಸ್ವಿ ಜಸ್ವಾಲ್ ತಮ್ಮ ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿದಲ್ಲದೆ 171 ರನ್‌ಗಳ ಇನ್ನಿಂಗ್ಸ್‌ ಆಡಿದ್ದರು. ಇದೀಗ ಇಂಗ್ಲೆಂಡ್ ವಿರುದ್ಧದ ಎರಡನೇ ಮತ್ತು ಮೂರನೇ ಟೆಸ್ಟ್ ಪಂದ್ಯಗಳಲ್ಲಿ ಸತತ ಎರಡು ದ್ವಿಶತಕಗಳನ್ನು ಬಾರಿಸಿದರು.

6 / 7
ಎರಡನೇ ಟೆಸ್ಟ್ ಪಂದ್ಯದಲ್ಲಿ 209 ರನ್ ಕಲೆಹಾಕಿದ್ದ ಯಶಸ್ವಿ, ಮೂರನೇ ಟೆಸ್ಟ್ ಪಂದ್ಯದಲ್ಲಿ 214 ರನ್ಗಳ ಇನ್ನಿಂಗ್ಸ್ ಆಡಿದ್ದರು. ಇದಲ್ಲದೆ ಈ ಸರಣಿಯಲ್ಲಿ ಇದುವರೆಗೆ 600 ಕ್ಕೂ ಅಧಿಕ ರನ್ ಬಾರಿಸಿರುವ ಯಶಸ್ವಿ, ಒಂದು ಸರಣಿಯಲ್ಲಿ ಅಧಿಕ ರನ್ ಬಾರಿಸಿದವರ ಪಟ್ಟಿಯಲ್ಲಿ ಡಾನ್ ಬ್ರಾಡಮನ್​ರಂತಹ ಲೆಜೆಂಡ್​ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

7 / 7
ಯಶಸ್ವಿ ಜೈಸ್ವಾಲ್ ಐಪಿಎಲ್ 2023 ರಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಟೀಂ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡರು. ಭಾರತದ ಪರ ಇದುವರೆಗೆ 8 ಟೆಸ್ಟ್ ಪಂದ್ಯಗಳನ್ನಾಡಿರುವ ಜೈಸ್ವಾಲ್ 934 ರನ್ ಕಲೆಹಾಕಿದ್ದಾರೆ. ಇದರಲ್ಲಿ ಮೂರು ಶತಕಗಳು ಮತ್ತು ಮೂರು ಅರ್ಧ ಶತಕಗಳು ಸೇರಿವೆ. ಇದಲ್ಲದೇ ಭಾರತ ತಂಡದ ಪರ 17 ಟಿ20 ಪಂದ್ಯಗಳಲ್ಲಿ ಯಶಸ್ವಿ 502 ರನ್ ಗಳಿಸಿದ್ದಾರೆ.