AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಮೊದಲ ಮ್ಯಾಚ್​ನಲ್ಲೇ 5 ಭರ್ಜರಿ ದಾಖಲೆಗಳು ನಿರ್ಮಾಣ!

India vs England: ಚೆಸ್ಟರ್-ಲೆ-ಸ್ಟ್ರೀಟ್​ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟಿ20 ಪಂದ್ಯವು ಮೊದಲ ಇನಿಂಗ್ಸ್​ಗೆ ಸೀಮಿತವಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​​ಗಳಲ್ಲಿ 189 ರನ್​ ಕಲೆಹಾಕಿತು. ಆದರೆ ದ್ವಿತೀಯ ಇನಿಂಗ್ಸ್ ಆರಂಭಕ್ಕೂ ಮುನ್ನ ಸುರಿದ ಭಾರೀ ಮಳೆಯಿಂದಾಗಿ ಪಂದ್ಯವನ್ನು ರದ್ದುಗೊಳಿಸಲಾಯಿತು.

ಝಾಹಿರ್ ಯೂಸುಫ್
|

Updated on: Jul 02, 2026 | 7:53 AM

Share
ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟಿ20 ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಈ ರದ್ದಾಗುವಿಕೆ ನಡುವೆ ಹಲವು ದಾಖಲೆಗಳು ನಿರ್ಮಾಣವಾಗಿದೆ. ಅಂದರೆ ಈ ಪಂದ್ಯದಲ್ಲಿ ಮೊದಲ ಇನಿಂಗ್ಸ್ ಆಡಿದ ಭಾರತೀಯ ಬ್ಯಾಟರ್​ಗಳು ಕೆಲ ಭರ್ಜರಿ ದಾಖಲೆಗಳನ್ನು ನಿರ್ಮಿಸಿದ್ದಾರೆ. ಆ ದಾಖಲೆಗಳ ಪಟ್ಟಿ ಇಲ್ಲಿದೆ... (PC: BCCI)

1 / 6
ಮೊದಲ ನಾಯಕ: ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ 47 ಎಸೆತಗಳಲ್ಲಿ 68 ರನ್ ಬಾರಿಸಿದ್ದರು. ಈ ಮೂಲಕ ಇಂಗ್ಲೆಂಡ್​ನಲ್ಲಿ ಟಿ20 ಕ್ರಿಕೆಟ್​ನಲ್ಲಿ ಅರ್ಧಶತಕ ಸಿಡಿಸಿದ ಭಾರತದ ಮೊದಲ ನಾಯಕನೆಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: BCCI)

2 / 6
ಸ್ಫೋಟಕ ಫಿಫ್ಟಿ: ಈ ಮ್ಯಾಚ್​ನಲ್ಲಿ ಅಭಿಷೇಕ್ ಶರ್ಮಾ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಮೂಲಕ ಅಂತಾರಾಷ್ಟ್ರೀಯ ಟಿ20 ಇತಿಹಾಸದಲ್ಲಿ 5 ಬಾರಿ 20 ಅಥವಾ ಅದಕ್ಕಿಂತ ಕಡಿಮೆ ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ವಿಶ್ವದ ಮೊದಲ ಪೂರ್ಣ ಪ್ರಮಾಣದ ಐಸಿಸಿ ಸದಸ್ಯ ರಾಷ್ಟ್ರದ ಬ್ಯಾಟರ್ ಎನಿಸಿಕೊಂಡಿದ್ದಾರೆ. (PC: BCCI)

3 / 6
ನೂರು ಸಿಕ್ಸರ್: ಈ ಪಂದ್ಯದಲ್ಲಿ ಬಾರಿಸಿದ 4 ಸಿಕ್ಸರ್​ಗಳೊಂದಿಗೆ ಅಭಿಷೇಕ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ನೂರು ಸಿಕ್ಸರ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಅತೀ ಕಡಿಮೆ ಎಸೆತಗಳಲ್ಲಿ 100 ಸಿಕ್ಸ್​ ಸಿಡಿಸಿದ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್ ಎವಿನ್ ಲೂಯಿಸ್ (789 ಎಸೆತಗಳು) ಹೆಸರಿನಲ್ಲಿತ್ತು. ಇದೀಗ 785 ಎಸೆತಗಳಲ್ಲಿ 100 ಸಿಕ್ಸ್ ಬಾರಿಸಿ ಅಭಿಷೇಕ್ ಶರ್ಮಾ ಹೊಸ ಇತಿಹಾಸ ನಿರ್ಮಿಸಿದ್ದಾರೆ. (PC: BCCI)

4 / 6
ಸ್ಟ್ರೈಕಿಂಗ್ ಸರದಾರ: ಈ ಪಂದ್ಯದಲ್ಲಿ ಅಭಿಷೇಕ್ ಶರ್ಮಾ 245.83ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ್ದರು. ಈ ಮೂಲಕ 200+ ಸ್ಟ್ರೈಕ್​ ರೇಟ್​ನಲ್ಲಿ ಅತ್ಯಧಿಕ ಅರ್ಧಶತಕ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ 13 ಅರ್ಧಶತಕಗಳೊಂದಿಗೆ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನದಲ್ಲಿದ್ದರೆ, ಇದೀಗ 9 ಸ್ಫೋಟಕ ಹಾಫ್ ಸೆಂಚುರಿಯೊಂದಿಗೆ ಅಭಿಷೇಕ್ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ. (PC: BCCI)

5 / 6
ಕೀಪರ್ ವಿಶ್ವ ದಾಖಲೆ: ಈ ಪಂದ್ಯದಲ್ಲಿ ಜೋಸ್ ಬಟ್ಲರ್ 1 ಸ್ಟಂಪಿಂಗ್ ಮತ್ತು 2 ರನ್ ಔಟ್‌ಗಳಲ್ಲಿ ಭಾಗಿಯಾಗಿದ್ದರು. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ  100 ಡಿಸ್ಮಿಸಲ್‌ಗಳನ್ನು (Dismissals) ಪೂರೈಸಿದ ವಿಶ್ವದ ಕೇವಲ 2ನೇ ವಿಕೆಟ್‌ಕೀಪರ್ ಎಂಬ ಐತಿಹಾಸಿಕ ದಾಖಲೆ ಬರೆದರು. ಈ ಪಟ್ಟಿಯಲ್ಲಿ   117 ಡಿಸ್ಮಿಸಲ್‌ಗಳನ್ನು ಹೊಂದಿರುವ ಸೌತ್ ಆಫ್ರಿಕಾದ ಕ್ವಿಂಟನ್ ಡಿಕಾಕ್ ಅಗ್ರಸ್ಥಾನದಲ್ಲಿದ್ದಾರೆ. (PC: Gary Day/AP)

6 / 6
Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು

ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!

ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್

ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ

ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್

ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ

ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ

‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ

ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ

ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು