AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG 5th Test: 300 ರನ್​ಗಳ ಮುನ್ನಡೆಯತ್ತ ಭಾರತ ಚಿತ್ತ: ಮ್ಯಾಜಿಕ್ ಮಾಡ್ತಾರ ಬುಮ್ರಾ-ಕುಲ್ದೀಪ್

India vs England 5th Test, Day 3: ರೋಹಿತ್ ಶರ್ಮಾ-ಶುಭ್​ಮನ್ ಗಿಲ್ ಶತಕ, ದೇವದತ್ ಪಡಿಕ್ಕಲ್-ಸರ್ಫರಾಜ್ ಖಾನ್ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ 255 ರನ್​ಗಳ ಮುನ್ನಡೆ ಸಾಧಿಸಿದೆ. ಜಸ್​ಪ್ರಿತ್ ಬುಮ್ರಾ ಹಾಗೂ ಕುಲ್ದೀಪ್ ಯಾದವ್ ಕ್ರೀಸ್​ನಲ್ಲಿದ್ದು, ಮೂರನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. 300 ರನ್​ಗಳ ಮುನ್ನಡೆ ಸಾಧಿಸುವತ್ತ ಚಿತ್ತ ನೆಟ್ಟಿದೆ.

Vinay Bhat
|

Updated on: Mar 09, 2024 | 6:54 AM

Share
ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್‌ನ ಮೊದಲ ಎರಡು ದಿನಗಳ ಆಟದಲ್ಲಿ ಭಾರತ ಸಂಪೂರ್ಣ ಮೇಲುಗೈ ಸಾಧಿಸಿತು. ಬ್ಯಾಟಿಂಗ್​ನಲ್ಲಿ ದಿಢೀರ್ ಕುಸಿತ ಕಂಡರೂ ಉತ್ತಮ ಮುನ್ನಡೆ ಪಡೆದುಕೊಂಡಿದೆ. ಇಂಗ್ಲೆಂಡ್ ಅನ್ನು 218 ರನ್​ಗಳಿಗೆ ಆಲೌಟ್ ಮಾಡಿ ಮೊದಲ ಇನ್ನಿಂಗ್ಸ್ ಆಡುತ್ತಿರುವ ಭಾರತ 2ನೇ ದಿನದಾಟದ ಅಂತ್ಯಕ್ಕೆ 8 ವಿಕೆಟ್ ಕಳೆದುಕೊಂಡು 473 ರನ್ ಗಳಿಸಿದೆ.

1 / 6
ರೋಹಿತ್ ಶರ್ಮಾ-ಶುಭ್​ಮನ್ ಗಿಲ್ ಶತಕ, ದೇವದತ್ ಪಡಿಕ್ಕಲ್-ಸರ್ಫರಾಜ್ ಖಾನ್ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ 255 ರನ್​ಗಳ ಮುನ್ನಡೆ ಸಾಧಿಸಿದೆ. ಜಸ್​ಪ್ರಿತ್ ಬುಮ್ರಾ ಹಾಗೂ ಕುಲ್ದೀಪ್ ಯಾದವ್ ಕ್ರೀಸ್​ನಲ್ಲಿದ್ದು, ಮೂರನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. 300 ರನ್​ಗಳ ಮುನ್ನಡೆ ಸಾಧಿಸುವತ್ತ ಚಿತ್ತ ನೆಟ್ಟಿದೆ.

2 / 6
ಮೊದಲ ದಿನದಾಟದಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 135 ರನ್ ಕಲೆಹಾಕಿದ್ದ ಭಾರತ ಇಲ್ಲಿಂದ ಎರಡನೇ ದಿನದಾಟವನ್ನು ಆರಂಭಿಸಿತು. ರೋಹಿತ್ ಹಾಗೂ ಶುಭ್​ಮನ್ ಗಿಲ್ ಇಬ್ಬರೂ ಶತಕ ಸಿಡಿಸುವುದರೊಂದಿಗೆ ತಂಡಕ್ಕೆ ಭದ್ರ ಅಡಿಪಾಯ ಹಾಕಿಕೊಟ್ಟರು. ರೋಹಿತ್ 162 ಎಸೆತಗಳಲ್ಲಿ 103 ರನ್ ಹಾಗೂ ಗಿಲ್ 150 ಎಸೆತಗಳಲ್ಲಿ 110 ರನ್ ಕಲೆಹಾಕಿದರು.

3 / 6
ಇವರ ನಿರ್ಗಮನದ ಬಳಿಕ ತಂಡದ ಇನ್ನಿಂಗ್ಸ್ ಜವಾಬ್ದಾರಿ ಹೊತ್ತ ಯುವ ಬ್ಯಾಟರ್​ಗಳಾದ ಸರ್ಫರಾಜ್ ಖಾನ್ ಹಾಗೂ ದೇವದತ್ ಪಡಿಕ್ಕಲ್ ತಲಾ ಅರ್ಧಶತಕ ಸಿಡಿಸುವುದರೊಂದಿಗೆ ತಂಡವನ್ನು 400 ರನ್​ಗಳ ಗಡಿ ದಾಟಿಸಿದರು. ಸರ್ಫರಾಜ್ 60 ಎಸೆತಗಳಲ್ಲಿ 56 ಸಿಡಿಸಿ ವಿಕೆಟ್ ಒಪ್ಪಿಸಿದರೆ, ಪಡಿಕ್ಕಲ್ 103 ಎಸೆತಗಳಲ್ಲಿ 65 ರನ್ ಕಲೆಹಾಕಿ ಪೆವಿಲಿಯನ್ ಸೇರಿಕೊಂಡರು.

4 / 6
ರವೀಂದ್ರ ಜಡೇಜಾ 15 ರನ್​ಗಳಿಗೆ ಸುಸ್ತಾದರೆ, ದ್ರುವ್ ಜುರೇಲ್ ಆಟವೂ 15 ರನ್​ಗಳಿಗೆ ಅಂತ್ಯಗೊಂಡಿತು. ನೂರನೇ ಟೆಸ್ಟ್ ಪಂದ್ಯವನ್ನು ಆಡುತ್ತಿರುವ ಅಶ್ವಿನ್ ಖಾತೆ ತೆರೆಯದೆ ನಿರ್ಗಮಿಸಿದರೆ, ದಿನದಂತ್ಯದವರೆಗೂ ಆಂಗ್ಲರ ಬೌಲಿಂಗ್​ಗೆ ತಕ್ಕ ಉತ್ತರ ನೀಡಿದ ಕುಲ್ದೀಪ್ ಯಾದವ್ 27 ರನ್ ಹಾಗೂ ಜಸ್ಪ್ರೀತ್ ಬುಮ್ರಾ 19 ರನ್ ಸಿಡಿಸಿ ಮೂರನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

5 / 6
ಇಂಗ್ಲೆಂಡ್ ಪರ ಬೌಲಿಂಗ್​ನಲ್ಲಿ ಮಿಂಚಿದ ಶೊಯೇಬ್ ಬಶೀರ್ ಪ್ರಮುಖ 4 ವಿಕೆಟ್ ಪಡೆದರೆ, ಮತ್ತೊಬ್ಬ ಸ್ಪಿನ್ನರ್ ಟಾಮ್ ಹಾರ್ಟ್ಲಿ 2 ವಿಕೆಟ್, ಬೆನ್ ಸ್ಟೋಕ್ಸ್ ಹಾಗೂ ಜೇಮ್ಸ್ ಆಂಡರ್ಸನ್ ತಲಾ 1 ವಿಕೆಟ್ ಪಡೆದರು. ಇಂದಿನ ಮೂರನೇ ದಿನದಾಟ ರೋಚಕತೆ ಸೃಷ್ಟಿಸಿದ್ದು, ಭಾರತವನ್ನು ಬೇಗ ಆಲೌಟ್ ಮಾಡಿದರೂ ಇಂಗ್ಲೆಂಡ್​ಗೆ ಈ ಟೆಸ್ಟ್ ಕಬ್ಬಿಣದ ಕಡಲೆಯಂತಾಗಿದೆ.

6 / 6
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ

ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ

ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು

ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು

ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ

ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು