- Kannada News Photo gallery Cricket photos IND vs ENG 5th Test Five down Ravindra Jadeja Century and England trail by 332 runs at stumps
IND vs ENG: ಭಾರತದ ಮಾರಕ ಬೌಲಿಂಗ್ ದಾಳಿಗೆ ನಲುಗಿದ ಇಂಗ್ಲೆಂಡ್: ಇಲ್ಲಿದೆ 2ನೇ ದಿನದ ಹೈಲೇಟ್ಸ್
ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದನೇ ಟೆಸ್ಟ್ ಪಂದ್ಯ ಕುತೂಹಲ ಕೆರಳಿಸಿದೆ. ಭರ್ಜರಿ ಫಾರ್ಮ್ ನಲ್ಲಿದ್ದ ಆಂಗ್ಲ ಬ್ಯಾಟರ್ ಗಳು ಭಾರತದ ಬೌಲಿಂಗ್ ದಾಳಿಗೆ ಸಿಲುಕಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ಎರಡನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ 5 ವಿಕೆಟ್ ಕಳೆದುಕೊಂಡು 84 ರನ್ ಗಳನ್ನಷ್ಟೆ ಕಳೆದುಕೊಂಡಿದೆ.
Updated on: Jul 03, 2022 | 7:45 AM

ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದನೇ ಟೆಸ್ಟ್ ಪಂದ್ಯ ಕುತೂಹಲ ಕೆರಳಿಸಿದೆ. ಭರ್ಜರಿ ಫಾರ್ಮ್ ನಲ್ಲಿದ್ದ ಆಂಗ್ಲ ಬ್ಯಾಟರ್ ಗಳು ಭಾರತದ ಬೌಲಿಂಗ್ ದಾಳಿಗೆ ಸಿಲುಕಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ಎರಡನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ 5 ವಿಕೆಟ್ ಕಳೆದುಕೊಂಡು 84 ರನ್ ಗಳನ್ನಷ್ಟೆ ಕಳೆದುಕೊಂಡಿದೆ. ಇನ್ನೂ 332 ರನ್ ಗಳ ಹಿನ್ನಡೆಯಲ್ಲಿದೆ.

ಪಂದ್ಯ ಆರಂಭವಾದಾಗ ಆರಂಭಿಕ ಆಘಾತ ಅನುಭವಿಸಿದ್ದ ಟೀಮ್ ಇಂಡಿಯಾ 98 ರನ್ ಗಳಿಗೆ ತನ್ನ ಮೊದಲ 5 ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ನಂತರ ರವೀಂದ್ರ ಜಡೇಜಾ ಮತ್ತು ರಿಷಭ್ ಪಂತ್ ಆರನೇ ವಿಕೆಟ್ ಗೆ ಜತೆಯಾಗಿ 222 ರನ್ಗಳ ಬೃಹತ್ ಜತೆಯಾಟವನ್ನಾಡಿ ತಂಡಕ್ಕೆ ಆಸರೆಯಾದರು.

ತಂಡದ ಪರ ರಿಷಬ್ ಪಂತ್ ಹಾಗೂ ರವೀಂದ್ರ ಜಡೇಜಾ ಶತಕಗಳನ್ನು ಬಾರಿಸಿದರೆ, ಅಂತಿಮ ಹಂತದಲ್ಲಿ ಅಬ್ಬರಿಸಿದ ನಾಯಕ ಜಸ್ಪ್ರೀತ್ ಬುಮ್ರಾ 31 ರನ್ ಕಲೆಹಾಕಿ ಅಜೇಯರಾಗಿ ಉಳಿದರು. ಪರಿಣಾಮ ಭಾರತ 84.5 ಓವರ್ನಲ್ಲಿ 416 ರನ್ ಕಲೆಹಾಕಿತು.

ಜಡೇಜಾ 194 ಎಸೆತಗಳಲ್ಲಿ 13 ಫೋರ್ ಬಾರಿಸಿ 104 ರನ್ ಸಿಡಿಸಿದರು.

ಬೌಲಿಂಗ್ ನಲ್ಲೂ ಮಿಂಚಿದ ಬುಮ್ರಾ 11 ಓವರ್ ಗೆ 35 ರನ್ ನೀಡಿ 3 ವಿಕೆಟ್ ಕಬಳಿಸಿದ್ದಾರೆ.

ಭಾರತ ಬೌಲಿಂಗ್ ನಲ್ಲಿ ಅದ್ಭುತ ಪ್ರದರ್ಶನ ತೋರುತ್ತಿದ್ದು ಮೂರನೇ ದಿನದಾಟ ಸಾಕಷ್ಟು ರೋಚಕತೆ ಸೃಷ್ಟಿಸಿದೆ.
