IND vs ENG: ಧರ್ಮಶಾಲಾದಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ಆರ್ ಅಶ್ವಿನ್..!
Ravichandran Ashwin: ಧರ್ಮಶಾಲಾದಲ್ಲಿ ನಡೆಯಲ್ಲಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದನೇ ಹಾಗೂ ಸರಣಿಯ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾದ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇತಿಹಾಸ ಸೃಷ್ಟಿಸಲು ಸಿದ್ಧರಾಗಿದ್ದಾರೆ.
1 / 7
ಧರ್ಮಶಾಲಾದಲ್ಲಿ ನಡೆಯಲ್ಲಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದನೇ ಹಾಗೂ ಸರಣಿಯ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾದ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇತಿಹಾಸ ಸೃಷ್ಟಿಸಲು ಸಿದ್ಧರಾಗಿದ್ದಾರೆ.
2 / 7
ಮಾರ್ಚ್ 7 ರಿಂದ ಆರಂಭವಾಗಲಿರುವ ಅಂತಿಮ ಟೆಸ್ಟ್ ಅನುಭವಿ ಸ್ಪಿನ್ನರ್ ಅಶ್ವಿನ್ಗೆ 100ನೇ ಟೆಸ್ಟ್ ಪಂದ್ಯವಾಗಲಿದೆ. ಇದರೊಂದಿಗೆ ಅಶ್ವಿನ್, ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿಯಂತಹ ದಿಗ್ಗಜರ ಕ್ಲಬ್ ಸೇರಲಿದ್ದಾರೆ.
3 / 7
ಭಾರತದ ಪರ ಇದುವರೆಗೆ 99 ಟೆಸ್ಟ್ ಪಂದ್ಯಗಳಲ್ಲಿ 507 ವಿಕೆಟ್ ಪಡೆದಿರುವ ಅಶ್ವಿನ್ 100ನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ 14ನೇ ಭಾರತೀಯ ಆಟಗಾರನಾಗಲಿದ್ದಾರೆ. 'ಕ್ರಿಕೆಟ್ ದೇವರು' ಸಚಿನ್ ತೆಂಡೂಲ್ಕರ್ ಭಾರತದ ಪರ ಗರಿಷ್ಠ ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಅವರು 200 ಪಂದ್ಯಗಳಲ್ಲಿ 15921 ರನ್ ಗಳಿಸಿದ್ದಾರೆ.
4 / 7
ಅಶ್ವಿನ್‌ಗಿಂತ ಮೊದಲು ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ವಿವಿಎಸ್ ಲಕ್ಷ್ಮಣ್, ಅನಿಲ್ ಕುಂಬ್ಳೆ, ಕಪಿಲ್ ದೇವ್, ಸುನಿಲ್ ಗವಾಸ್ಕರ್, ದಿಲೀಪ್ ವೆಂಗ್‌ಸರ್ಕರ್, ಸೌರವ್ ಗಂಗೂಲಿ, ವಿರಾಟ್ ಕೊಹ್ಲಿ, ಇಶಾಂತ್ ಶರ್ಮಾ, ಹರ್ಭಜನ್ ಸಿಂಗ್, ಚೇತೇಶ್ವರ್ ಪೂಜಾರ ಮತ್ತು ವೀರೇಂದ್ರ ಸೆಹ್ವಾಗ್ ಅವರು ಭಾರತದ ಪರ 100 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ.
5 / 7
ಇದಕ್ಕೂ ಮುನ್ನ ರಾಜ್ಕೋಟ್ನಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ 500 ಟೆಸ್ಟ್ ವಿಕೆಟ್ ಪೂರೈಸಿದ್ದ ಅಶ್ವಿನ್, ಅನಿಲ್ ಕುಂಬ್ಳೆ ನಂತರ ಭಾರತ ಪರ ಈ ಸಾಧನೆ ಮಾಡಿದ ಎರಡನೇ ಬೌಲರ್ ಎನಿಸಿಕೊಂಡರು. ಇದೀಗ ತಮ್ಮ ವೃತ್ತಿ ಜೀವನದ 100ನೇ ಪಂದ್ಯವನ್ನಾಡುವ ಮೂಲಕ ಹೊಸ ದಾಖಲೆ ಬರೆಯಲಿದ್ದಾರೆ.
6 / 7
ಇದಲ್ಲದೆ ರಾಂಚಿ ಟೆಸ್ಟ್‌ನಲ್ಲಿ ಅಶ್ವಿನ್ ಭಾರತದ ನೆಲದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಈ ವಿಚಾರದಲ್ಲಿ ಮಾಜಿ ನಾಯಕ ಅನಿಲ್ ಕುಂಬ್ಳೆ ಅವರನ್ನು ಹಿಂದಿಕ್ಕಿದ್ದರು. ಕುಂಬ್ಳೆ ಭಾರತದ ಮೈದಾನದಲ್ಲಿ ಒಟ್ಟು 63 ಪಂದ್ಯಗಳನ್ನು ಆಡಿದ್ದು, 350 ವಿಕೆಟ್ ಪಡೆದಿದ್ದರು. ಹಾಗೆಯೇ ತಮ್ಮ ವೃತ್ತಿಜೀವನದಲ್ಲಿ 132 ಟೆಸ್ಟ್‌ಗಳಲ್ಲಿ ಒಟ್ಟು 619 ವಿಕೆಟ್‌ಗಳನ್ನು ಕಬಳಿಸಿದ್ದಾರೆ.
7 / 7
ashwin