AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಭರ್ಜರಿ ಶತಕ ಸಿಡಿಸಿ ಬಾಬರ್, ಗೇಲ್ ದಾಖಲೆ ಮುರಿದ ರೋಹಿತ್ ಶರ್ಮಾ..!

Rohit Sharma: ಧರ್ಮಶಾಲಾದಲ್ಲಿ ನಡೆಯುತ್ತಿರುವ ಅಂತಿಮ ಟೆಸ್ಟ್​ ಪಂದ್ಯದ ಮೊದಲೆರಡು ದಿನ ಟೀಂ ಇಂಡಿಯಾ ಮೇಲುಗೈ ಸಾಧಿಸಿದೆ. ಇನ್ನು ಈ ಪಂದ್ಯದಲ್ಲಿ ಶತಕ ಬಾರಿಸಿದ ನಾಯಕ ರೋಹಿತ್ ಶರ್ಮಾಗೆ ಟೆಸ್ಟ್ ಕ್ರಿಕೆಟ್​ನಲ್ಲಿ 12ನೇ ಶತಕವಾಗಿದ್ದು, ಈ ಶತಕದೊಂದಿಗೆ ಹಿಟ್‌ಮ್ಯಾನ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.

ಪೃಥ್ವಿಶಂಕರ
|

Updated on: Mar 08, 2024 | 2:51 PM

Share
ಧರ್ಮಶಾಲಾದಲ್ಲಿ ನಡೆಯುತ್ತಿರುವ ಅಂತಿಮ ಟೆಸ್ಟ್​ ಪಂದ್ಯದ ಮೊದಲೆರಡು ದಿನ ಟೀಂ ಇಂಡಿಯಾ ಮೇಲುಗೈ ಸಾಧಿಸಿದೆ. ಮೊದಲ ಇನ್ನಿಂಗ್ಸ್​ನಲ್ಲಿ ಇಂಗ್ಲೆಂಡ್ ತಂಡವನ್ನು 218 ರನ್​ಗಳಿಗೆ ಆಲೌಟ್ ಮಾಡಿದ ರೋಹಿತ್ ಪಡೆ, ತನ್ನ ಮೊದಲ ಇನ್ನಿಂಗ್ಸ್​ನಲ್ಲಿ ಬೃಹತ್ ಮುನ್ನಡೆಯತ್ತ ದಾಪುಗಾಲಿಟ್ಟಿದೆ.

1 / 9
ಭಾರತದ ಪರ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಶತಕ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ತಂಡದ ಮುನ್ನಡೆಯನ್ನು 100 ರ ಗಡಿ ದಾಟುವಂತೆ ಮಾಡಿದ್ದಾರೆ. ಇನ್ನು ಈ ಪಂದ್ಯದಲ್ಲಿ ಶತಕ ಬಾರಿಸಿದ ನಾಯಕ ರೋಹಿತ್ ಶರ್ಮಾಗೆ ಟೆಸ್ಟ್ ಕ್ರಿಕೆಟ್​ನಲ್ಲಿ 12ನೇ ಶತಕವಾಗಿದೆ.

2 / 9
ಒಟ್ಟಾರೆಯಾಗಿ ರೋಹಿತ್ ಏಕದಿನದಲ್ಲಿ 31 ಶತಕ ಮತ್ತು ಅಂತರಾಷ್ಟ್ರೀಯ ಟಿ20 ಯಲ್ಲಿ 5 ಶತಕಗಳನ್ನು ಬಾರಿಸಿದ್ದಾರೆ. ಈ ಟೆಸ್ಟ್ ಶತಕದೊಂದಿಗೆ ರೋಹಿತ್ ಶರ್ಮಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಅವರನ್ನು ಹಿಂದಿಕ್ಕಿ ಸ್ಟೀವ್ ಸ್ಮಿತ್‌ ದಾಖಲೆಯುನ್ನು ಸರಿಗಟ್ಟಿದ್ದಾರೆ.

3 / 9
ಮೊದಲ ಇನ್ನಿಂಗ್ಸ್​ನಲ್ಲಿ 54 ಎಸೆತಗಳನ್ನು ಎದುರಿಸಿದ ರೋಹಿತ್ ಶರ್ಮಾ 3 ಸಿಕ್ಸರ್ ಮತ್ತು 13 ಬೌಂಡರಿಗಳ ನೆರವಿನಿಂದ ಶತಕ ಗಳಿಸಿದರು. ಈ ಸರಣಿಯಲ್ಲಿ ರೋಹಿತ್ ಗಳಿಸಿದ ಎರಡನೇ ಶತಕ ಇದಾಗಿದೆ. ಇದಕ್ಕೂ ಮುನ್ನ ವಿಶಾಖಪಟ್ಟಣಂನಲ್ಲಿಯೂ ರೋಹಿತ್ ಶತಕ ಬಾರಿಸಿದ್ದರು. ಅಲ್ಲದೆ ಇದು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ರೋಹಿತ್ ಅವರ ಒಂಬತ್ತನೇ ಶತಕವಾಗಿದೆ.

4 / 9
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದವರ ವಿಷಯದಲ್ಲಿ ಜೋ ರೂಟ್ ಮೊದಲ ಸ್ಥಾನದಲ್ಲಿದ್ದಾರೆ. ಇದುವರೆಗೆ ಡಬ್ಲ್ಯುಟಿಸಿಯಲ್ಲಿ 52 ಪಂದ್ಯಗಳನ್ನಾಡಿರುವ ರೂಟ್ 13 ಶತಕ ಸಿಡಿಸಿದ್ದಾರೆ.

5 / 9
ಎರಡನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾದ ಮಾರ್ನಸ್ ಲಬುಶೇನ್ 11 ಶತಕ ಸಿಡಿಸಿದ್ದಾರೆ. ನ್ಯೂಜಿಲೆಂಡ್ ತಂಡದ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಮೂರನೇ ಸ್ಥಾನದಲ್ಲಿದ್ದು, ಇದುವರೆಗೂ ಅವರು 10 ಶತಕಗಳನ್ನು ಸಿಡಿಸಿದ್ದಾರೆ.

6 / 9
ನಾಲ್ಕನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಇದುವರೆಗೆ 9 ಶತಕ ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ 9ನೇ ಶತಕ ದಾಖಲಿಸಿರುವ ರೋಹಿತ್, ಸ್ಮಿತ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಸ್ಟೀವ್ ಸ್ಮಿತ್ 45 ಪಂದ್ಯಗಳಲ್ಲಿ 9 ಶತಕ ಸಿಡಿಸಿದ್ದರೆ, ರೋಹಿತ್ 32 ಪಂದ್ಯಗಳಲ್ಲಿ 9 ಶತಕಗಳ ಪೂರೈಸಿದ್ದಾರೆ. ಪಾಕಿಸ್ತಾನದ ಬಾಬರ್ ಆಝಂ 29 ಪಂದ್ಯಗಳಲ್ಲಿ 8 ಶತಕಗಳನ್ನು ಬಾರಿಸಿದ್ದು, ಇದೀಗ ರೋಹಿತ್, ಬಾಬರ್ ದಾಖಲೆಯನ್ನು ಮುರಿದಿದ್ದಾರೆ.

7 / 9
ಇಷ್ಟೇ ಅಲ್ಲ, ಆರಂಭಿಕ ಆಟಗಾರನಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಸಿಡಿಸಿದ ವಿಷಯದಲ್ಲಿ ರೋಹಿತ್ ಶರ್ಮಾ ವೆಸ್ಟ್ ಇಂಡೀಸ್‌ನ ದಂತಕಥೆ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಅವರನ್ನು ಹಿಂದಿಕ್ಕಿದ್ದಾರೆ. ಕ್ರಿಸ್ ಗೇಲ್ ಎಲ್ಲಾ ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಆಗಿ 42 ಶತಕಗಳನ್ನು ಸಿಡಿಸಿದ್ದರೆ, ರೋಹಿತ್ ಶರ್ಮಾ ಖಾತೆಯಲ್ಲಿ 43 ಶತಕಗಳು ದಾಖಲಾಗಿವೆ.

8 / 9
ಇನ್ನು ಈ ವಿಚಾರದಲ್ಲಿ ರೋಹಿತ್‌ಗಿಂತ ಇಬ್ಬರು ಬ್ಯಾಟ್ಸ್‌ಮನ್‌ಗಳು ಮುಂದಿದ್ದಾರೆ. ಅವರಲ್ಲಿ ಒಬ್ಬರು ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಹಾಗೂ ಸಚಿನ್ ತೆಂಡೂಲ್ಕರ್. ವಾರ್ನರ್ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆರಂಭಿಕರಾಗಿ 49 ಶತಕಗಳನ್ನು ಕಲೆಹಾಕಿ ನಂಬರ್ ಒನ್ ಸ್ಥಾನದಲ್ಲಿದ್ದರೆ, ಸಚಿನ್ ತೆಂಡೂಲ್ಕರ್ ಎರಡನೇ ಸ್ಥಾನದಲ್ಲಿದ್ದು, ಅವರ ಖಾತೆಯಲ್ಲಿ 45 ಶತಕಗಳು ದಾಖಲಾಗಿವೆ.

9 / 9
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ