- Kannada News Photo gallery Cricket photos IND vs ENG 5th test rohit sharma completes 1 thousand runs as a captain
IND vs ENG: ನಾಯಕನಾಗಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ರೋಹಿತ್ ಶರ್ಮಾ
IND vs ENG: ಭಾರತ ಹಾಗೂ ಇಂಗ್ಲೆಂಡ್ ನಡುವೆ ಧರ್ಮಶಾಲಾದಲ್ಲಿ ನಡೆಯುತ್ತಿರುವ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಅಜೇಯ ಅರ್ಧಶತಕ ಸಿಡಿಸಿದ ನಾಯಕ ರೋಹಿತ್ ಶರ್ಮಾ ವಿಶೇಷ ಮೈಲಿಗಲ್ಲನ್ನು ತಲುಪಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವ ಕ್ರಿಕೆಟ್ನ ಆರನೇ ನಾಯಕ ಎನಿಸಿಕೊಂಡಿದ್ದಾರೆ.
Updated on: Mar 07, 2024 | 6:44 PM

ಭಾರತ ಹಾಗೂ ಇಂಗ್ಲೆಂಡ್ ನಡುವೆ ಧರ್ಮಶಾಲಾದಲ್ಲಿ ನಡೆಯುತ್ತಿರುವ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಅಜೇಯ ಅರ್ಧಶತಕ ಸಿಡಿಸಿದ ನಾಯಕ ರೋಹಿತ್ ಶರ್ಮಾ ವಿಶೇಷ ಮೈಲಿಗಲ್ಲನ್ನು ತಲುಪಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವ ಕ್ರಿಕೆಟ್ನ ಆರನೇ ನಾಯಕ ಎನಿಸಿಕೊಂಡಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಈ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ 83 ಎಸೆತಗಳನ್ನು ಎದುರಿಸಿದ ರೋಹಿತ್ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 52 ರನ್ ಕಲೆಹಾಕಿದ್ದಾರೆ. ಈ ಮೂಲಕ ನಾಯಕನಾಗಿ ಟೆಸ್ಟ್ ಮಾದರಿಯಲ್ಲಿ 1000 ರನ್ ಪೂರೈಸಿದ್ದಾರೆ.

ರೋಹಿತ್ಗೂ ಮೊದಲು ಈ ಸಾಧನೆ ಮಾಡಿದವರ ಪೈಕಿ ಟೀಂ ಇಂಡಿಯಾದ ಮಾಜಿ ನಾಯಕರಾದ ವಿರಾಟ್ ಕೊಹ್ಲಿ, ಎಂಎಸ್ ಧೋನಿ, ನ್ಯೂಜಿಲೆಂಡ್ನ ಕೇನ್ ವಿಲಿಯಮ್ಸನ್, ದಕ್ಷಿಣ ಆಫ್ರಿಕಾದ ಫಾಫ್ ಡು ಪ್ಲೆಸಿಸ್ ಮತ್ತು ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಸೇರಿದ್ದಾರೆ.

ಟೀಂ ಇಂಡಿಯಾ ನಾಯಕನಾಗಿ ಇದುವರೆಗೆ 114 ಪಂದ್ಯಗಳನ್ನು ಆಡಿರುವ ರೋಹಿತ್, ತಮ್ಮ ನಾಯಕತ್ವದಲ್ಲಿ ತಂಡವನ್ನು 84 ಪಂದ್ಯಗಳಲ್ಲಿ ಗೆಲುವಿನತ್ತ ಮುನ್ನಡೆಸಿದ್ದರೆ, 26 ಪಂದ್ಯಗಳಲ್ಲಿ ಸೋಲನುಭವಿಸಿದ್ದಾರೆ. ಇದರಲ್ಲಿ ಎರಡು ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದ್ದರೆ, 1 ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ.

ಇನ್ನು ಟೆಸ್ಟ್ ಮಾದರಿಯ ಬಗ್ಗೆ ಹೇಳುವುದಾದರೆ ರೋಹಿತ್ ಶರ್ಮಾ ನಾಯಕನಾಗಿ 15 ಟೆಸ್ಟ್ ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿದ್ದಾರೆ. ಇದರಲ್ಲಿ ಒಂಬತ್ತು ಪಂದ್ಯಗಳನ್ನು ಗೆದ್ದಿರುವ ರೋಹಿತ್, ನಾಲ್ಕು ಪಂದ್ಯಗಳಲ್ಲಿ ಸೋಲಿನ ಕಹಿ ಉಂಡಿದ್ದಾರೆ. ರೋಹಿತ್ ಗೆಲುವಿನ ಶೇಕಡಾವಾರು 69.23 ಆಗಿದ್ದು, ನಾಯಕನಾಗಿ ರೋಹಿತ್ ಶರ್ಮಾ ಅವರ ದಾಖಲೆಯು ಇಲ್ಲಿಯವರೆಗೆ ಅತ್ಯುತ್ತಮವಾಗಿದೆ.

ಇದಲ್ಲದೆ ಇದೇ ಪಂದ್ಯದಲ್ಲಿ ಎರಡು ಸಿಕ್ಸರ್ಗಳನ್ನು ಬಾರಿಸಿದ ರೋಹಿತ್, ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಅಧಿಕ ಸಿಕ್ಸರ್ ಬಾರಿಸಿದ ಎರಡನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಡಬ್ಲ್ಯುಟಿಸಿಯಲ್ಲಿ ಇದುವರೆಗೆ 32 ಪಂದ್ಯಗಳನ್ನಾಡಿರುವ ರೋಹಿತ್ ಸಿಕ್ಸರ್ಗಳ ಅರ್ಧಶತಕ ಪೂರೈಸಿದ್ದಾರೆ.









