AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ನಾಯಕನಾಗಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ರೋಹಿತ್ ಶರ್ಮಾ

IND vs ENG: ಭಾರತ ಹಾಗೂ ಇಂಗ್ಲೆಂಡ್ ನಡುವೆ ಧರ್ಮಶಾಲಾದಲ್ಲಿ ನಡೆಯುತ್ತಿರುವ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಅಜೇಯ ಅರ್ಧಶತಕ ಸಿಡಿಸಿದ ನಾಯಕ ರೋಹಿತ್ ಶರ್ಮಾ ವಿಶೇಷ ಮೈಲಿಗಲ್ಲನ್ನು ತಲುಪಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವ ಕ್ರಿಕೆಟ್​ನ ಆರನೇ ನಾಯಕ ಎನಿಸಿಕೊಂಡಿದ್ದಾರೆ.

ಪೃಥ್ವಿಶಂಕರ
|

Updated on: Mar 07, 2024 | 6:44 PM

Share
ಭಾರತ ಹಾಗೂ ಇಂಗ್ಲೆಂಡ್ ನಡುವೆ ಧರ್ಮಶಾಲಾದಲ್ಲಿ ನಡೆಯುತ್ತಿರುವ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಅಜೇಯ ಅರ್ಧಶತಕ ಸಿಡಿಸಿದ ನಾಯಕ ರೋಹಿತ್ ಶರ್ಮಾ ವಿಶೇಷ ಮೈಲಿಗಲ್ಲನ್ನು ತಲುಪಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವ ಕ್ರಿಕೆಟ್​ನ ಆರನೇ ನಾಯಕ ಎನಿಸಿಕೊಂಡಿದ್ದಾರೆ.

1 / 6
ಇಂಗ್ಲೆಂಡ್ ವಿರುದ್ಧದ ಈ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ 83 ಎಸೆತಗಳನ್ನು ಎದುರಿಸಿದ ರೋಹಿತ್ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 52 ರನ್ ಕಲೆಹಾಕಿದ್ದಾರೆ. ಈ ಮೂಲಕ ನಾಯಕನಾಗಿ ಟೆಸ್ಟ್ ಮಾದರಿಯಲ್ಲಿ 1000 ರನ್ ಪೂರೈಸಿದ್ದಾರೆ.

2 / 6
ರೋಹಿತ್​ಗೂ ಮೊದಲು ಈ ಸಾಧನೆ ಮಾಡಿದವರ ಪೈಕಿ ಟೀಂ ಇಂಡಿಯಾದ ಮಾಜಿ ನಾಯಕರಾದ ವಿರಾಟ್ ಕೊಹ್ಲಿ, ಎಂಎಸ್ ಧೋನಿ, ನ್ಯೂಜಿಲೆಂಡ್​ನ ಕೇನ್ ವಿಲಿಯಮ್ಸನ್, ದಕ್ಷಿಣ ಆಫ್ರಿಕಾದ ಫಾಫ್ ಡು ಪ್ಲೆಸಿಸ್ ಮತ್ತು ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಸೇರಿದ್ದಾರೆ.

3 / 6
ಟೀಂ ಇಂಡಿಯಾ ನಾಯಕನಾಗಿ ಇದುವರೆಗೆ 114 ಪಂದ್ಯಗಳನ್ನು ಆಡಿರುವ ರೋಹಿತ್, ತಮ್ಮ ನಾಯಕತ್ವದಲ್ಲಿ ತಂಡವನ್ನು 84 ಪಂದ್ಯಗಳಲ್ಲಿ ಗೆಲುವಿನತ್ತ ಮುನ್ನಡೆಸಿದ್ದರೆ, 26 ಪಂದ್ಯಗಳಲ್ಲಿ ಸೋಲನುಭವಿಸಿದ್ದಾರೆ. ಇದರಲ್ಲಿ ಎರಡು ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದ್ದರೆ, 1 ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ.

4 / 6
ಇನ್ನು ಟೆಸ್ಟ್ ಮಾದರಿಯ ಬಗ್ಗೆ ಹೇಳುವುದಾದರೆ ರೋಹಿತ್ ಶರ್ಮಾ ನಾಯಕನಾಗಿ 15 ಟೆಸ್ಟ್ ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿದ್ದಾರೆ. ಇದರಲ್ಲಿ ಒಂಬತ್ತು ಪಂದ್ಯಗಳನ್ನು ಗೆದ್ದಿರುವ ರೋಹಿತ್, ನಾಲ್ಕು ಪಂದ್ಯಗಳಲ್ಲಿ ಸೋಲಿನ ಕಹಿ ಉಂಡಿದ್ದಾರೆ. ರೋಹಿತ್ ಗೆಲುವಿನ ಶೇಕಡಾವಾರು 69.23 ಆಗಿದ್ದು, ನಾಯಕನಾಗಿ ರೋಹಿತ್ ಶರ್ಮಾ ಅವರ ದಾಖಲೆಯು ಇಲ್ಲಿಯವರೆಗೆ ಅತ್ಯುತ್ತಮವಾಗಿದೆ.

5 / 6
ಇದಲ್ಲದೆ ಇದೇ ಪಂದ್ಯದಲ್ಲಿ ಎರಡು ಸಿಕ್ಸರ್​ಗಳನ್ನು ಬಾರಿಸಿದ ರೋಹಿತ್, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ನಲ್ಲಿ ಅಧಿಕ ಸಿಕ್ಸರ್ ಬಾರಿಸಿದ ಎರಡನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಡಬ್ಲ್ಯುಟಿಸಿಯಲ್ಲಿ ಇದುವರೆಗೆ 32 ಪಂದ್ಯಗಳನ್ನಾಡಿರುವ ರೋಹಿತ್ ಸಿಕ್ಸರ್​ಗಳ ಅರ್ಧಶತಕ ಪೂರೈಸಿದ್ದಾರೆ.

6 / 6
Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ

‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ

ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ

‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್

ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು

ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ

ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ

ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ

ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?

ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್