IND vs ENG: ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ಗೆ ಇಂಜುರಿ; ಎರಡನೇ ಟಿ20 ಪಂದ್ಯಕ್ಕೆ ಅನುಮಾನ
IND vs ENG: ಕೋಲ್ಕತ್ತಾದಲ್ಲಿ ನಡೆದ ಮೊದಲ ಟಿ20 ಪಂದ್ಯವನ್ನು ಭಾರತ ಅತ್ಯಂತ ಸುಲಭವಾಗಿ ಗೆದ್ದುಕೊಂಡಿತ್ತು. ಈ ಗೆಲುವಿನ ಹೀರೋಗಳಲ್ಲಿ ಒಬ್ಬರಾದ ಯುವ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರು 79 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ್ದರು. ಆದರೆ ಎರಡನೇ ಟಿ 20 ಪಂದ್ಯಕ್ಕೂ ಮುನ್ನ ಅವರ ಫಿಟ್‌ನೆಸ್ ಟೀಮ್ ಇಂಡಿಯಾಕ್ಕೆ ಟೆನ್ಶನ್ ಆಗಿದೆ.
1 / 5
ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಗೆಲುವಿನೊಂದಿಗೆ ಆರಂಭಿಸಿರುವ ಟೀಂ ಇಂಡಿಯಾ ಇದೀಗ ಎರಡನೇ ಟಿ20 ಪಂದ್ಯವನ್ನೂ ಗೆದ್ದು ಸರಣಿಯಲ್ಲಿ 2-0 ಅಂತರದ ಮುನ್ನಡೆ ಪಡೆದುಕೊಳ್ಳಲು ಎದುರು ನೋಡುತ್ತಿದೆ. ಆದರೆ ಅದಕ್ಕೂ ಮುನ್ನ ಟೀಂ ಇಂಡಿಯಾಗೆ ಆಘಾತ ಎದುರಾಗಿದೆ.
2 / 5
ಕ್ರಿಕ್‌ಬಜ್ ವರದಿಯ ಪ್ರಕಾರ, ತಂಡದ ಸ್ಫೋಟಕ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅಭ್ಯಾಸದ ಸಮಯದಲ್ಲಿ ಗಾಯಗೊಂಡು ಮೈದಾನದಿಂದ ಹೊರನಡೆದಿದ್ದಾರೆ. ಬ್ಯಾಟಿಂಗ್ ಮಾಡುವಾಗ ಅಭಿಷೇಕ್ ಅವರ ಬಲಗಾಲಿಗೆ ಇಂಜುರಿಯಾಗಿದ್ದು, ತೀವ್ರ ನೋವಿನಿಂದ ಬಳಲುತ್ತಿದ್ದ ಅಭಿಷೇಕ್ ಅಭ್ಯಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ.
3 / 5
ಹೀಗಾಗಿ ನಾಳೆ ನಡೆಯಲ್ಲಿರುವ ಎರಡನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಆಡುವ ಬಗ್ಗೆ ಅನುಮಾನ ಮೂಡಿದೆ. ಇದು ಟೀಂ ಇಂಡಿಯಾ ಅಭಿಮಾನಿಗಳು ಆತಂಕಗೊಳ್ಳುವಂತೆ ಮಾಡಿದೆ. ಏಕೆಂದರೆ ಮೊದಲ ಟಿ20 ಪಂದ್ಯದಲ್ಲಿ ಅಭಿಷೇಕ್ 34 ಎಸೆತಗಳಲ್ಲಿ 79 ರನ್ ಗಳಿಸಿ ಅದ್ಭುತ ಇನ್ನಿಂಗ್ಸ್ ಆಡಿದರು. ಇದರಲ್ಲಿ ಅವರು 8 ಸಿಕ್ಸರ್ ಮತ್ತು 5 ಬೌಂಡರಿಗಳನ್ನು ಬಾರಿಸಿದರು.
4 / 5
ಇದೀಗ ಅಭಿಷೇಕ್ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಓಪನಿಂಗ್ ಮಾಡಲು ಯಾರನ್ನು ಕಣಕ್ಕಿಳಿಸುತ್ತದೆ ಎಂಬುದು ಈಗ ಪ್ರಶ್ನೆ. ಈ ವಿಷಯದಲ್ಲಿ, ಪ್ರಸ್ತುತ ಅತ್ಯಂತ ಸೂಕ್ತವಾದ ಸ್ಪರ್ಧಿ ಎಂದರೆ ಮೊದಲ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ತಿಲಕ್ ವರ್ಮಾ. ಆದಾಗ್ಯೂ, ಇದಕ್ಕೂ ಮೊದಲು, ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ, ತಿಲಕ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವಾಗ ಸತತ ಎರಡು ಶತಕಗಳನ್ನು ಗಳಿಸಿದ್ದರು. ಅಂತಹ ಪರಿಸ್ಥಿತಿಯಲ್ಲಿ, ಅವರು ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆಗಳಿವೆ.
5 / 5
ಇನ್ನು ಮೊದಲ ಟಿ20 ಪಂದ್ಯದ ಬಗ್ಗೆ ಮಾತನಾಡುವುದಾದರೆ... ಅಭಿಷೇಕ್ ಅವರ ಸ್ಫೋಟಕ ಇನ್ನಿಂಗ್ಸ್ನಿಂದಾಗಿ, ಟೀಂ ಇಂಡಿಯಾ ಇಂಗ್ಲೆಂಡ್ ತಂಡವನ್ನು 7 ವಿಕೆಟ್ ಗಳಿಂದ ಸೋಲಿಸಿತು. ಮೊದಲು ಬ್ಯಾಟ್ ಮಾಡಿದ ತಂಡವು ಕೇವಲ 132 ರನ್‌ಗಳಿಗೆ ಆಲೌಟ್ ಆಗಿತ್ತು. 133 ರನ್‌ಗಳ ಗುರಿಯನ್ನು ಟೀಂ ಇಂಡಿಯಾ ಕೇವಲ 12.5 ಓವರ್‌ಗಳಲ್ಲಿ ತಲುಪಿತು.