AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ವಿಕೆಟ್ ಉರುಳಿಸಿ ದಾಖಲೆಗೆ ದೀಪವಿಟ್ಟ ಆಕಾಶ್

India vs England 2nd Test: ಇಂಗ್ಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 587 ರನ್​ ಕಲೆಹಾಕಿದರೆ, ಇಂಗ್ಲೆಂಡ್ 407 ರನ್​ಗಳಿಸಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ 427 ರನ್​ಗಳಿಸಿ ಟೀಮ್ ಇಂಡಿಯಾ ಡಿಕ್ಲೇರ್ ಘೋಷಿಸಿದೆ. ಅದರಂತೆ ಅಂತಿಮ ಇನಿಂಗ್ಸ್​ನಲ್ಲಿ 608 ರನ್​ಗಳ ಗುರಿ ಪಡೆದ ಇಂಗ್ಲೆಂಡ್ 271 ರನ್​ಗಳಿಗೆ ಆಲೌಟ್ ಆಗುವ ಮೂಲಕ 336 ರನ್​ಗಳಿಂದ ಹೀನಾಯವಾಗಿ ಸೋಲೊಪ್ಪಿಕೊಂಡಿದೆ.

ಝಾಹಿರ್ ಯೂಸುಫ್
|

Updated on:Jul 07, 2025 | 7:58 AM

Share
ಎಡ್ಜ್ ಬಾಸ್ಟನ್ ಸ್ಟೇಡಿಯಂನಲ್ಲಿ ಮಾರಕ ದಾಳಿ ಸಂಘಟಿಸಿ ಟೀಮ್ ಇಂಡಿಯಾ ವೇಗಿ ಆಕಾಶ್ ದೀಪ್ (Akash Deep) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಬರೋಬ್ಬರಿ 10 ವಿಕೆಟ್ ಕಬಳಿಸಿ ಎಂಬುದು ವಿಶೇಷ.

1 / 5
ಈ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ 4 ವಿಕೆಟ್ ಪಡೆದು ಮಿಂಚಿದ್ದ ಆಕಾಶ್, ದ್ವಿತೀಯ ಇನಿಂಗ್ಸ್ ನಲ್ಲಿ 99 ರನ್ ನೀಡಿ 6 ವಿಕೆಟ್ ಉರುಳಿಸಿದ್ದಾರೆ. ಈ‌ ಮೂಲಕ ಒಟ್ಟು 10 ವಿಕೆಟ್ ಕಬಳಿಸಿ ಭಾರತ ತಂಡಕ್ಕೆ ಐತಿಹಾಸಿಕ ಗೆಲುವು ತಂದುಕೊಟ್ಟಿದ್ದಾರೆ.

2 / 5
ಈ ಐತಿಹಾಸಿಕ ಗೆಲುವಿನೊಂದಿಗೆ ಆಕಾಶ್ ದೀಪ್ ವಿಶೇಷ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ. ಅಂದರೆ ಎಡ್ಜ್ ಬಾಸ್ಟನ್ ಸ್ಟೇಡಿಯಂನಲ್ಲಿ ಅತೀ ಕಡಿಮೆ ರನ್ ನೀಡಿ 10 ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಯನ್ನು ಆಕಾಶ್ ದೀಪ್ ತಮ್ಮದಾಗಿಸಿಕೊಂಡಿದ್ದಾರೆ.

3 / 5
ಇದಕ್ಕೂ ಮುನ್ನ ಇಂತಹದೊಂದು ಸಾಧನೆ ಮಾಡಿದ್ದು ಚೇತನ್ ಶರ್ಮಾ. 1986 ರಲ್ಲಿ ಎಡ್ಜ್​ ಬಾಸ್ಟನ್​ನಲ್ಲಿ ನಡೆದ ಇಂಗ್ಲೆಂಡ್​ ವಿರುದ್ಧದ ಟೆಸ್ಟ್​ನಲ್ಲಿ ಚೇತನ್ ಶರ್ಮಾ 188 ರನ್ ನೀಡಿ  ಒಟ್ಟು 10 ವಿಕೆಟ್ ಕಬಳಿಸಿದ್ದರು. ಇದಾದ ಬಳಿಕ ಈ ಮೈದಾನದಲ್ಲಿ ಟೀಮ್ ಇಂಡಿಯಾದ ಯಾವುದೇ ಬೌಲರ್ ಟೆಸ್ಟ್ ಪಂದ್ಯವೊಂದರಲ್ಲಿ 10 ವಿಕೆಟ್ ಪಡೆದಿರಲಿಲ್ಲ.

4 / 5
ಇದೀಗ ಬರೋಬ್ಬರಿ 39 ವರ್ಷಗಳ ಬಳಿಕ ಆಕಾಶ್ ದೀಪ್ ಭರ್ಜರಿ ಬೌಲಿಂಗ್ ಪ್ರದರ್ಶಿಸಿದ್ದಾರೆ. ಅಲ್ಲದೆ 187 ರನ್ ನೀಡಿ 10 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಎಡ್ಜ್ ಬಾಸ್ಟನ್ ಸ್ಟೇಡಿಯಂನಲ್ಲಿ ಅತೀ ಕಡಿಮೆ ರನ್ ನೀಡಿ 10 ವಿಕೆಟ್ ಕಬಳಿಸಿದ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ.

5 / 5

Published On - 7:57 am, Mon, 7 July 25