AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಟೀಂ ಇಂಡಿಯಾ ಪರ ಇತಿಹಾಸ ಸೃಷ್ಟಿಸಿದ ಅರ್ಷದೀಪ್ ಸಿಂಗ್

Arshdeep Singh: ಭಾರತದ ಯುವ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅಂತಾ ಟಿ20 ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಯುಜುವೇಂದ್ರ ಚಹಾಲ್ ಅವರನ್ನು ಹಿಂದಿಕ್ಕಿರುವ ಅವರು ಇದೀಗ 100 ವಿಕೆಟ್‌ಗಳನ್ನು ಪೂರೈಸುವ ಸಮೀಪದಲ್ಲಿದ್ದಾರೆ.

ಪೃಥ್ವಿಶಂಕರ
|

Updated on: Jan 22, 2025 | 8:46 PM

Share
ಭಾರತದ ಯುವ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಭಾರತದ ಪರ ದೊಡ್ಡ ದಾಖಲೆ ಮಾಡಿದ್ದಾರೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ವೇಗಿ ಅರ್ಷದೀಪ್ ಸಿಂಗ್ ಟೀಂ ಇಂಡಿಯಾಗೆ ಬಲಿಷ್ಠ ಆರಂಭ ನೀಡಿದರು.

1 / 6
ಅವರು ತಮ್ಮ ಮೊದಲ 2 ಓವರ್‌ಗಳಲ್ಲಿ ಪ್ರಮುಖ 2 ವಿಕೆಟ್‌ಗಳನ್ನು ಕಬಳಿಸಿ, ಇಂಗ್ಲೆಂಡ್​ಗೆ ಆರಂಭಿಕ ಆಘಾತ ನೀಡಿದರು. ಇದರೊಂದಿಗೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಭಾರತ ಪರ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆಯನ್ನೂ ಅರ್ಷದೀಪ್ ಸಿಂಗ್ ಮಾಡಿದ್ದಾರೆ.

2 / 6
2022ರ ನವೆಂಬರ್‌ನಲ್ಲಿ ಅರ್ಷದೀಪ್ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಇದೀಗ ಕೇವಲ 2 ವರ್ಷಗಳಲ್ಲಿ ಟಿ20 ಕ್ರಿಕೆಟ್‌ನಲ್ಲಿ ಭಾರತ ಪರ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಮಾಡಿದ್ದಾರೆ. ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಅವರು ತಮ್ಮ ಮೊದಲ ಓವರ್‌ನಲ್ಲಿಯೇ ಫಿಲ್ ಸಾಲ್ಟ್ ಅವರ ವಿಕೆಟ್ ಪಡೆದರು.

3 / 6
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಫಿಲ್ ಸಾಲ್ಟ್ ಖಾತೆ ತೆರೆಯದೆ ಪೆವಿಲಿಯನ್​ಗೆ ಮರಳಿದರು. ಈ ವಿಕೆಟ್‌ನೊಂದಿಗೆ ಅರ್ಷದೀಪ್​ಸಿಂಗ್ ಭಾರತದ ಪರ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಯುಜುವೇಂದ್ರ ಚಾಹಲ್‌ರನ್ನು ಸರಿಗಟ್ಟಿದರು. ಇದರ ನಂತರ, ಅವರು ತಮ್ಮ ಮುಂದಿನ ಓವರ್‌ನಲ್ಲಿ ಬೆನ್ ಡಕೆಟ್ ಅವರನ್ನು ಬಲಿಪಶುವಾಗಿ ಮಾಡಿ ಚಹಾಲ್ ದಾಖಲೆಯನ್ನು ಮುರಿದರು.

4 / 6
ಅರ್ಷದೀಪ್ ಸಿಂಗ್‌ಗಿಂತ ಮೊದಲು, ಯುಜ್ವೇಂದ್ರ ಚಹಾಲ್ 96 ವಿಕೆಟ್‌ಗಳೊಂದಿಗೆ ಅಂತಾರಾಷ್ಟ್ರೀಯ ಟಿ20ಯಲ್ಲಿ ಭಾರತದ ಅತ್ಯಂತ ಯಶಸ್ವಿ ಬೌಲರ್ ಆಗಿದ್ದರು. ಇದೀಗ ಅರ್ಷದೀಪ್ ಸಿಂಗ್ ಕೇವಲ 61 ಪಂದ್ಯಗಳಲ್ಲಿ 97 ವಿಕೆಟ್ ಪಡೆಯುವ ಮೂಲಕ ಚಹಾಲ್ ದಾಖಲೆಯನ್ನು ಮುರಿದಿದ್ದಾರೆ.

5 / 6
ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಭುವನೇಶ್ವರ್ ಕುಮಾರ್ ಟಿ20 ಕ್ರಿಕೆಟ್‌ನಲ್ಲಿ 90 ವಿಕೆಟ್‌ಗಳನ್ನು ಪಡೆದಿದ್ದಾರೆ. ಇವರಲ್ಲದೆ ಜಸ್ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ಕೂಡ ತಲಾ 89 ವಿಕೆಟ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ.

6 / 6
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು

ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್