AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

93 ವರ್ಷಗಳಲ್ಲಿ ಟೀಮ್ ಇಂಡಿಯಾ ಇಂತಹದೊಂದು ಗೆಲುವು ದಾಖಲಿಸಿಲ್ಲ..!

India vs England 2nd Test: ಇಂಗ್ಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 587 ರನ್​ ಕಲೆಹಾಕಿದರೆ, ಇಂಗ್ಲೆಂಡ್ 407 ರನ್​ಗಳಿಸಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ 427 ರನ್​ಗಳಿಸಿ ಟೀಮ್ ಇಂಡಿಯಾ ಡಿಕ್ಲೇರ್ ಘೋಷಿಸಿದೆ. ಅದರಂತೆ ಅಂತಿಮ ಇನಿಂಗ್ಸ್​ನಲ್ಲಿ 608 ರನ್​ಗಳ ಗುರಿ ಪಡೆದ ಇಂಗ್ಲೆಂಡ್ 271 ರನ್​ಗಳಿಗೆ ಆಲೌಟ್ ಆಗಿದೆ.

ಝಾಹಿರ್ ಯೂಸುಫ್
|

Updated on: Jul 07, 2025 | 10:55 AM

Share
ಭಾರತ ತಂಡ ಟೆಸ್ಟ್ ಕ್ರಿಕೆಟ್ ಆಡಲು ಶುರುವಾಗಿ 93 ವರ್ಷಗಳು ಕಳೆದಿವೆ. ಈ ತೊಂಬತ್ತಮೂರು ವರ್ಷಗಳಲ್ಲಿ ಟೀಮ್ ಇಂಡಿಯಾ 591 ಪಂದ್ಯಗಳನ್ನಾಡಿದೆ. ಇದರಲ್ಲಿ 293 ಪಂದ್ಯಗಳನ್ನು ವಿದೇಶದಲ್ಲಿ ಆಡಿದೆ. ಈ ವೇಳೆ ಭಾರತ ತಂಡ ಗೆದ್ದಿರುವುದು 61 ಮ್ಯಾಚ್​ಗಳಲ್ಲಿ ಮಾತ್ರ. ಅಲ್ಲದೆ 108 ಮ್ಯಾಚ್​ಗಳನ್ನು ಡ್ರಾ ಮಾಡಿಕೊಂಡಿದೆ.

1 / 5
ವಿಶೇಷ ಎಂದರೆ ಟೀಮ್ ಇಂಡಿಯಾ ಗೆದ್ದ 61 ಪಂದ್ಯಗಳಲ್ಲಿ ಅಮೋಘ ಗೆಲುವು ದಾಖಲಿಸಿದ್ದು ಕ್ರಿಕೆಟ್ ಜನಕರಾದ ಇಂಗ್ಲೆಂಡ್ ವಿರುದ್ಧ. ಈ ಐತಿಹಾಸಿಕ ಗೆಲುವು ತಂದುಕೊಟ್ಟಿರುವುದು ಯಂಗ್ ಇಂಡಿಯಾ ಎಂಬುದು ವಿಶೇಷ. ಅಂದರೆ ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾ 330 ಕ್ಕೂ ಅಧಿಕ ರನ್​ಗಳಿಂದ ವಿದೇಶದಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿದೆ.

2 / 5
ಈ ಹಿಂದೆ 2019 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 318 ರನ್​ಗಳ ಜಯ ಸಾಧಿಸಿದ್ದು ವಿದೇಶದಲ್ಲಿ ಟೀಮ್ ಇಂಡಿಯಾದ ಶ್ರೇಷ್ಠ ಸಾಧನೆಯಾಗಿತ್ತು. ಆದರೆ ಈ ಬಾರಿ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆಯುವಲ್ಲಿ ಟೀಮ್ ಇಂಡಿಯಾ ಆಟಗಾರರು ಯಶಸ್ವಿಯಾಗಿದ್ದಾರೆ. ಅದು ಕೂಡ 336 ರನ್​ಗಳೊಂದಿಗೆ ಎಂಬುದು ವಿಶೇಷ.

3 / 5
ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಸಂಘಟಿತ ಪ್ರದರ್ಶನ ನೀಡಿದ ಭಾರತ ತಂಡವು ಆತಿಥೇಯರನ್ನು ಬರೋಬ್ಬರಿ 336 ರನ್​ಗಳಿಂದ ಮಣಿಸಿದೆ. ಈ ಮೂಲಕ ಟೆಸ್ಟ್ ಇತಿಹಾಸದಲ್ಲೇ ಭಾರತ ತಂಡವು ವಿದೇಶದಲ್ಲಿ ರನ್​ಗಳ ಅಂತರದಲ್ಲಿ ತನ್ನ ಶ್ರೇಷ್ಠ ಗೆಲುವು ದಕ್ಕಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

4 / 5
ಅಲ್ಲದೆ ಇಂಗ್ಲೆಂಡ್ ತಂಡವನ್ನು ಅವರದ್ದೇ ಪಿಚ್​ನಲ್ಲಿ ಇದೇ ಮೊದಲ ಬಾರಿಗೆ 300+ ರನ್​ಗಳಿಂದ ಸೋಲಿಸಿ ಐತಿಹಾಸಿಕ ಸಾಧನೆ ಮಾಡಿದೆ. ಇದಕ್ಕೂ ಮುನ್ನ 1986 ರಲ್ಲಿ ಲೀಡ್ಸ್​ನಲ್ಲಿ ನಡೆದ ಆಂಗ್ಲರ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 279 ರನ್​ಗಳ ಜಯ ಸಾಧಿಸಿತ್ತು. ಇದೀಗ ಈ ದಾಖಲೆಯನ್ನು ಅಳಿಸಿ ಹಾಕಿ ಶುಭ್​ಮನ್ ಗಿಲ್ ನಾಯಕತ್ವದ ಯುವ ಪಡೆ ಹೊಸ ಇತಿಹಾಸ ಬರೆದಿದ್ದಾರೆ.

5 / 5
ಕೇಂದ್ರ ಸಚಿವ ಮುರುಗನ್ ನಿವಾಸದಲ್ಲಿ ಪೊಂಗಲ್ ಆಚರಿಸಿದ ಪ್ರಧಾನಿ ಮೋದಿ

ನೆಲಮಂಗಲದಲ್ಲಿ ಚಿರತೆ ದಾಳಿ ಹೆಚ್ಚಳ
ನೆಲಮಂಗಲದಲ್ಲಿ ಚಿರತೆ ದಾಳಿ ಹೆಚ್ಚಳ
ಚೊಚ್ಚಲ ಪಂದ್ಯ... ಅರ್ಧದಲ್ಲೇ ಬ್ಯಾಟಿಂಗ್ ನಿಲ್ಲಿಸಿ ವಾಪಸ್ ಕರೆಸಿದ ಕೋಚ್..!

JDS ಮುಖಂಡೆ ಪುತ್ರನ ಕಿರುಕಳಕ್ಕೆ ಯುವತಿ ಆತ್ಮಹತ್ಯೆ ಕೇಸ್​​ಗೆ ಟ್ವಿಸ್ಟ್​​

ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ನಿವಾಸದಲ್ಲಿ ಅಗ್ನಿ ಅವಘಡ

ಹಾಸನ ಜಿಲ್ಲೆಯ ವಿವಿಧೆಡೆ ಭಾರಿ ಮಳೆ: ಒಣಗಲು ಹಾಕಿದ್ದ ಕಾಫಿ ಬೆಳೆಗೆ ಹಾನಿ

ಮೆಟ್ರೋ ಕಾಮಗಾರಿ ವೇಳೆ ಕ್ರೇನ್​​ ಪಲ್ಟಿ: ತಪ್ಪಿದ ಭಾರೀ ದುರಂತ

ಲಕ್ಕುಂಡಿಯ ಸಿಕ್ಕ ಚಿನ್ನ ಮನೆಯಲ್ಲಿ ಇಟ್ಕೊಂಡ್ರೆ ಏನಾಗತ್ತೆ ಗೊತ್ತಾ?

ಲಕ್ಕುಂಡಿಯ ಈ ಸ್ಥಳದಲ್ಲಿ ಇಂದಿಗೂ ಸಿಗುತ್ತದೆ ಚಿನ್ನ, ರತ್ನ, ಹವಳ

ಲಕ್ಕುಂಡಿಯಲ್ಲಿ ಪತ್ತೆಯಾದ ನಿಧಿ ಯಾವ ಕಾಲದ್ದು ಗೊತ್ತೇ? ಬಯಲಾಯ್ತು ರಹಸ್ಯ