IND vs ENG: ಮತ್ತೆ ನಿರ್ಲಕ್ಷ್ಯಕ್ಕೊಳಗಾದ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರ

|

Updated on: Feb 10, 2024 | 4:07 PM

Cheteshwar Pujara: ರಣಜಿ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಪೂಜಾರ ಇಂಗ್ಲೆಂಡ್ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳಿಗೆ ಟೀಂ ಇಂಡಿಯಾದಲ್ಲಿ ಆಯ್ಕೆಯಾಗಬಹುದು ಎಂದು ಅಭಿಮಾನಿಗಳು ನಿರೀಕ್ಷಿಸಿದ್ದರು. ಆದರೆ ಆಯ್ಕೆಗಾರರು ಮತ್ತೊಮ್ಮೆ ಪೂಜಾರ ಅವರನ್ನು ಕಡೆಗಣಿಸಿದ್ದಾರೆ.

1 / 7
ಭಾರತ ಮತ್ತು ಇಂಗ್ಲೆಂಡ್ ನಡುವೆ 5 ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದ್ದು, ಕೊನೆಯ ಮೂರು ಟೆಸ್ಟ್ ಪಂದ್ಯಗಳಿಗೆ ಟೀಂ ಇಂಡಿಯಾವನ್ನು ಪ್ರಕಟಿಸಿಲಾಗಿದೆ. ತಂಡದಲ್ಲಿ ಹೆಚ್ಚು ಬದಲಾವಣೆಗಳಾಗದಿದ್ದರು, ಹಲವರು ನಿರೀಕ್ಷಿಸುತ್ತಿದ್ದ ಹೆಸರನ್ನು ಆಯ್ಕೆ ಮಂಡಳಿ ಮತ್ತೊಮ್ಮೆ ಕಡೆಗಣಿಸಿದೆ. ಆ ಹೆಸರು ಯಾವುದೆಂದರೆ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರ.

2 / 7
ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಸೀಸನ್​ನಲ್ಲಿ ಸೌರಾಷ್ಟ್ರ ಪರ ಆಡುತ್ತಿರುವ ಚೇತೇಶ್ವರ ಪೂಜಾರ ಶತಕಗಳ ಮೇಲೆ ಶತಕ ಸಿಡಿಸುತ್ತಿದ್ದಾರೆ. ಹೀಗಾಗಿ ರಣಜಿ ಟ್ರೋಫಿಯಲ್ಲಿ ಅವರ ಅದ್ಭುತ ಪ್ರದರ್ಶನದ ನಂತರ, ಇಂಗ್ಲೆಂಡ್ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳಿಗೆ ಟೀಂ ಇಂಡಿಯಾದಲ್ಲಿ ಚೇತೇಶ್ವರ ಪೂಜಾರ ಆಯ್ಕೆಯಾಗಬಹುದು ಎಂದು ಅಭಿಮಾನಿಗಳು ನಿರೀಕ್ಷಿಸಿದ್ದರು. ಆದರೆ ಆಯ್ಕೆಗಾರರು ಮತ್ತೊಮ್ಮೆ ಪೂಜಾರ ಅವರನ್ನು ಕಡೆಗಣಿಸಿದ್ದಾರೆ.

3 / 7
2024 ರ ರಣಜಿ ಟ್ರೋಫಿಯಲ್ಲಿ, ಸೌರಾಷ್ಟ್ರ ಪರ ಆಡುತ್ತಿರುವ ಚೇತೇಶ್ವರ ಪೂಜಾರ, ರಾಜಸ್ಥಾನ ವಿರುದ್ಧ ಅದ್ಭುತ ಶತಕ ಸಿಡಿಸಿದ್ದರು. ಇದು ಅವರ ಪ್ರಥಮ ದರ್ಜೆ ಕ್ರಿಕೆಟ್ ಜೀವನದ 62ನೇ ಶತಕವಾಗಿತ್ತು. ಇದರ ಹೊರತಾಗಿಯೂ ಚೇತೇಶ್ವರ ಪೂಜಾರ ಅವರನ್ನು ಟೆಸ್ಟ್ ಟೀಂ ಇಂಡಿಯಾ ನಿರಂತರವಾಗಿ ಕಡೆಗಣಿಸುತ್ತಿದೆ.

4 / 7
ಇದಕ್ಕೂ ಮುನ್ನ ಚೇತೇಶ್ವರ್ ಪೂಜಾರ ಅವರನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆ ಮಾಡಿರಲಿಲ್ಲ. ನಂತರ ಆಯ್ಕೆಗಾರರ ​​ನಿರ್ಧಾರದ ಮೇಲೆ ಹಲವು ಪ್ರಶ್ನೆಗಳು ಎದ್ದವು. ಕೆಲವು ಸಮಯದಿಂದ, ಆಯ್ಕೆದಾರರು ಯುವ ಆಟಗಾರರ ಮೇಲೆ ಹೆಚ್ಚಿನ ವಿಶ್ವಾಸವನ್ನು ತೋರಿಸುತ್ತಿದ್ದಾರೆ. ಇದರಿಂದಾಗಿ ಚೇತೇಶ್ವರ ಪೂಜಾರ ಅವರಂತಹ ಹಿರಿಯ ಆಟಗಾರರಿಗೆ ತಂಡದಲ್ಲಿ ಸ್ಥಾನ ಪಡೆಯುವುದು ತುಂಬಾ ಕಷ್ಟವಾಗುತ್ತಿದೆ.

5 / 7
ಭಾರತ ಮತ್ತು ಇಂಗ್ಲೆಂಡ್ ನಡುವಿನ ಸರಣಿಯ ಮೂರನೇ ಟೆಸ್ಟ್ ಪಂದ್ಯ ಫೆಬ್ರವರಿ 15 ರಿಂದ ರಾಜ್‌ಕೋಟ್‌ನಲ್ಲಿ ನಡೆಯಲಿದೆ. ಇದೀಗ ಈ ಟೆಸ್ಟ್​ಗೆ ಟೀಂ ಇಂಡಿಯಾ ಕೂಡ ಘೋಷಣೆಯಾಗಿದೆ. ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಈ ಸಂಪೂರ್ಣ ಸರಣಿಯಿಂದ ಹೊರಗುಳಿಯಲ್ಲಿದ್ದಾರೆ ಎಂಬ ಸುದ್ಧಿ ಮೊದಲೇ ಹೊರಬಿದ್ದಿತ್ತು.

6 / 7
 ಹೀಗಾಗಿ ಚೇತೇಶ್ವರ ಪೂಜಾರ ಅವರನ್ನು ಸರಣಿಯ ಉಳಿದ ಮೂರು ಪಂದ್ಯಗಳಿಗೆ ಟೀಂ ಇಂಡಿಯಾಕ್ಕೆ ಸೇರಿಸಿಕೊಳ್ಳಬಹುದು ಎಂದು ಅಭಿಮಾನಿಗಳು ಭರವಸೆ ಹೊಂದಿದ್ದರು. ಆದರೆ ಅಭಿಮಾನಿಗಳ ನಿರೀಕ್ಷೆ ಈಗ ಹುಸಿಯಾಗಿದೆ. ಯುವ ಆಟಗಾರರ ಮೇಲೆ ಆಯ್ಕೆದಾರರು ಮತ್ತೊಮ್ಮೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

7 / 7
ಇದೀಗ ಸೋಶಿಯಲ್ ಮೀಡಿಯಾದಲ್ಲಿ ಚೇತೇಶ್ವರ ಪೂಜಾರ ಬಗ್ಗೆ ಅಭಿಮಾನಿಗಳು ವಿಭಿನ್ನ ರೀತಿಯ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಆಯ್ಕೆಗಾರರ ​​ಈ ನಿರ್ಧಾರಕ್ಕೆ ಹಲವು ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.