IND vs ENG: ಮೂರನೇ ದಿನದಾಟದಂತ್ಯಕ್ಕೆ ಇಂಗ್ಲೆಂಡ್ 67/1
IND vs ENG: ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಗೆಲುವಿಗೆ 399 ರನ್ಗಳ ಬೃಹತ್ ಟಾರ್ಗೆಟ್ ಬೆನ್ನಟ್ಟಿರುವ ಇಂಗ್ಲೆಂಡ್ ತಂಡ ಮೂರನೇ ದಿನದಾಟದಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 67 ರನ್ ಕಲೆಹಾಕಿದೆ. ಇದರೊಂದಿಗೆ ಇನ್ನು 332 ರನ್ಗಳ ಹಿನ್ನಡೆಯಲ್ಲಿದೆ.
1 / 6
ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಗೆಲುವಿಗೆ 399 ರನ್ಗಳ ಬೃಹತ್ ಟಾರ್ಗೆಟ್ ಬೆನ್ನಟ್ಟಿರುವ ಇಂಗ್ಲೆಂಡ್ ತಂಡ ಮೂರನೇ ದಿನದಾಟದಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 67 ರನ್ ಕಲೆಹಾಕಿದೆ. ಇದರೊಂದಿಗೆ ಇನ್ನು 332 ರನ್ಗಳ ಹಿನ್ನಡೆಯಲ್ಲಿದೆ.
2 / 6
ಇಂಗ್ಲೆಂಡ್ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಬೆನ್ ಡಕೆಟ್ 28 ರನ್ ಕಲೆಹಾಕಿ ಅಶ್ವಿನ್ಗೆ ಬಲಿಯಾದರೆ, ಮತ್ತೊಬ್ಬ ಆರಂಭಿಕ ಝಾಕ್ ಕ್ರಾಲಿ 29 ರನ್ ಹಾಗೂ ರೆಹಾನ್ ಅಹ್ಮದ್ 8 ರನ್ ಕಲೆಹಾಕಿ 4ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
3 / 6
ಇದಕ್ಕೂ ಮುನ್ನ ಟೀಂ ಇಂಡಿಯಾ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ ಬೃಹತ್ ಮೊತ್ತ ಕಲೆಹಾಕುವ ಅವಕಾಶ ಹೊಂದಿದ್ದರೂ ಕೇವಲ 255 ರನ್ಗಳಿಗೆ ಆಲೌಟ್ ಆಗುವ ಮೂಲಕ ಇಂಗ್ಲೆಂಡ್ಗೆ 399 ರನ್ ಗುರಿ ನೀಡಿತು.
4 / 6
ಟೀಂ ಇಂಡಿಯಾ ಪರ ಆರಂಭಿಕ ಶುಭ್ಮನ್ ಗಿಲ್ 147 ಎಸೆತಗಳಲ್ಲಿ 11 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 104 ರನ್ಗಳ ಇನ್ನಿಂಗ್ಸ್ ಆಡಿದರೆ, ಆಲ್ರೌಂಡರ್ ಅಕ್ಷರ್ ಪಟೇಲ್ 45 ರನ್ಗಳ ಕೊಡುಗೆ ನೀಡಿದರು.
5 / 6
ಶ್ರೇಯಸ್ ಅಯ್ಯರ್ ಮತ್ತು ಆರ್ ಅಶ್ವಿನ್ ತಲಾ 29 ರನ್ಗಳ ಕಾಣಿಕೆ ನೀಡಿದರೆ, ಮೊದಲ ಇನ್ನಿಂಗ್ಸ್‌ನಲ್ಲಿ ದ್ವಿಶತಕ ಸಿಡಿಸಿದ್ದ ಯಶಸ್ವಿ ಜೈಸ್ವಾಲ್ 17 ರನ್ಗಳಿಗೆ ಸುಸ್ತಾದರು. ಇಡೀ ಸರಣಿಯಲ್ಲಿ ರನ್ ಬರ ಎದುರಿಸುತ್ತಿರುವ ನಾಯಕ ರೋಹಿತ್ ಶರ್ಮಾ ಕೂಡ 13 ರನ್ಗಳಿಗೆ ಪೆವಿಲಿಯನ್ ಸೇರಿಕೊಂಡರು.
6 / 6
ಇಂಗ್ಲೆಂಡ್ ಪರ ಟಾಮ್ ಹಾರ್ಟ್ಲಿ 4 ವಿಕೆಟ್ ಪಡೆದರೆ, ರೆಹಾನ್ ಅಹ್ಮದ್ 3 ವಿಕೆಟ್, ಅನುಭವಿ ವೇಗಿ ಜೇಮ್ಸ್ ಅಂಡರ್ಸನ್ 2 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.