AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 21 ಟೆಸ್ಟ್‌ಗಳ ನಂತರ ಈ ಸಾಧನೆ ಮಾಡಿದ ಮೊದಲ ವಿದೇಶಿ ತಂಡ ಇಂಗ್ಲೆಂಡ್..!

IND vs ENG: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಪ್ರವಾಸಿ ತಂಡ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿಯೂ 200 ರನ್‌ಗಳ ಸ್ಕೋರ್ ದಾಟುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ ಕಳೆದ 21 ಟೆಸ್ಟ್ ಪಂದ್ಯಗಳಲ್ಲಿ ಯಾವುದೇ ತಂಡ ಮಾಡದ ಸಾಧನೆಯನ್ನು ಇಂಗ್ಲೆಂಡ್ ತಂಡ ಭಾರತದಲ್ಲಿ ಮಾಡುವಲ್ಲಿ ಯಶಸ್ವಿಯಾಗಿದೆ.

ಪೃಥ್ವಿಶಂಕರ
|

Updated on: Jan 27, 2024 | 7:23 PM

Share
ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಪ್ರವಾಸಿ ತಂಡ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿಯೂ 200 ರನ್‌ಗಳ ಸ್ಕೋರ್ ದಾಟುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ ಕಳೆದ 21 ಟೆಸ್ಟ್ ಪಂದ್ಯಗಳಲ್ಲಿ ಯಾವುದೇ ತಂಡ ಮಾಡದ ಸಾಧನೆಯನ್ನು ಇಂಗ್ಲೆಂಡ್ ತಂಡ ಭಾರತದಲ್ಲಿ ಮಾಡುವಲ್ಲಿ ಯಶಸ್ವಿಯಾಗಿದೆ.

1 / 6
ಈ ಪಂದ್ಯದಲ್ಲಿ, ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 246 ರನ್‌ಗಳಿಗೆ ಆಲೌಟ್ ಆಗಿತ್ತು. ನಂತರ ಆತಿಥೇಯ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 436 ರನ್​ಗಳ ಬೃಹತ್ ಮೊತ್ತ ಕಲೆಹಾಕಿ, 195 ರನ್​ಗಳ ಮುನ್ನಡೆ ಕಾಯ್ದುಕೊಂಡಿತ್ತು.

2 / 6
ವಾಸ್ತವವಾಗಿ ಕಳೆದ ಕೆಲವು ವರ್ಷಗಳಿಂದ ವಿದೇಶಿ ತಂಡಕ್ಕೆ ಭಾರತದ ನೆಲದಲ್ಲಿ ಟೆಸ್ಟ್ ಕ್ರಿಕೆಟ್ ಆಡುವುದು ಕಬ್ಬಿಣದ ಕಡಲೆಯಾಗಿದೆ. ಹೆಚ್ಚಿನ ಪಂದ್ಯಗಳು 3 ರಿಂದ 4 ದಿನಗಳಲ್ಲಿ ಕೊನೆಗೊಳ್ಳುತ್ತವೆ. ಹೀಗಿರುವಾಗ ಹೈದರಾಬಾದ್ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ತನ್ನ ಮೊದಲ ಇನಿಂಗ್ಸ್‌ನಲ್ಲಿ 246 ರನ್‌ಗಳಿಗೆ ಆಲೌಟ್ ಆದಾಗ ಈ ಪಂದ್ಯ ಕೂಡ ಬೇಗನೇ ಮುಗಿಯುತ್ತದೆ ಎಂದು ನಿರೀಕ್ಷಿಸಲಾಗಿತ್ತು.

3 / 6
ಆದಾಗ್ಯೂ, ಎರಡನೇ ಇನ್ನಿಂಗ್ಸ್‌ನಲ್ಲಿ ಉತ್ತಮ ಹೋರಾಟ ನೀಡಿದ ಇಂಗ್ಲೆಂಡ್‌ ತಂಡವು 200 ರನ್ ಗಡಿ ದಾಟುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ, ಭಾರತದಲ್ಲಿ 21 ಟೆಸ್ಟ್ ಪಂದ್ಯಗಳ ನಂತರ, ಇಂಗ್ಲೆಂಡ್ ಎರಡೂ ಇನಿಂಗ್ಸ್‌ಗಳಲ್ಲಿ 200 ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಪ್ರವಾಸಿ ತಂಡ ಎನಿಸಿಕೊಂಡಿದೆ.

4 / 6
ನಾವು ಇಂಗ್ಲೆಂಡ್ ತಂಡದ ಎರಡನೇ ಇನ್ನಿಂಗ್ಸ್ ಬಗ್ಗೆ ಮಾತನಾಡುವುದಾದರೆ, ತಂಡದ ಇಬ್ಬರು ಅನುಭವಿ ಆಟಗಾರರಾದ ಜೋ ರೂಟ್ ಮತ್ತು ನಾಯಕ ಬೆನ್ ಸ್ಟೋಕ್ಸ್ ಈ ಇನ್ನಿಂಗ್ಸ್‌ನಲ್ಲಿ ಬಹುಬೇಗನೇ ಪೆವಿಲಿನ್ ಸೇರಿಕೊಂಡರು. ಸ್ಟೋಕ್ಸ್ ಕೇವಲ 6 ರನ್ ಗಳಿಸಿದರೆ, ರೂಟ್ ಕೇವಲ 2 ರನ್ ಗಳಿಸಿ ಪೆವಿಲಿಯನ್‌ ಸೇರಿಕೊಂಡರು.

5 / 6
ಆದಾಗ್ಯೂ ತಂಡದ ಪರ ಏಕಾಂಗಿ ಹೋರಾಟ ನಡೆಸುತ್ತಿರುವ ಓಲಿ ಪೋಪ್ ಅಜೇಯ 148 ರನ್ ಕಲೆಹಾಕಿ ನಾಲ್ಕನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಅಲ್ಲದೆ ಎರಡನೇ ಇನ್ನಿಂಗ್ಸ್​ನಲ್ಲಿ ತಂಡ 126 ರನ್​ಗಳ ಮುನ್ನಡೆ ಕಾಯ್ದುಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

6 / 6
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!