ಆಂಗ್ಲರ ವಿರುದ್ಧ 87 ರನ್‌ಗಳ ಇನ್ನಿಂಗ್ಸ್ ಆಡಿದ ನಾಯಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 18 ಸಾವಿರ ರನ್ ಪೂರೈಸಿದರು. ರೋಹಿತ್ ತಮ್ಮ 457ನೇ ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದರು. ಈ ಮೂಲಕ ಭಾರತ ಪರ ಅತಿ ಹೆಚ್ಚು ರನ್ ಗಳಿಸಿದ ಟಾಪ್-5 ಆಟಗಾರರ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ರಾಹುಲ್ ದ್ರಾವಿಡ್ ಮತ್ತು ಸೌರವ್ ಗಂಗೂಲಿ ನಂತರ ರೋಹಿತ್ ಸ್ಥಾನ ಪಡೆದರು.