IND vs ENG: ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾದಿಂದ ಯುವ ಆಟಗಾರ ಔಟ್

Updated on: Jun 26, 2025 | 7:24 AM

India vs England Test Series: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳ ಸೋಲನುಭವಿಸಿದೆ. ಇನ್ನು ಉಭಯ ತಂಡಗಳ ನಡುವಣ ಎರಡನೇ ಪಂದ್ಯವು ಜುಲೈ 2 ರಿಂದ ಶುರುವಾಗಲಿದ್ದು, ಈ ಪಂದ್ಯಕ್ಕೆ ಎಡ್ಜ್ ಬಾಸ್ಟನ್‌ ಸ್ಟೇಡಿಯಂ ಆತಿಥ್ಯವಹಿಸಲಿದೆ.

1 / 5
India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಎರಡನೇ ಟೆಸ್ಟ್ ಪಂದ್ಯವು ಜುಲೈ 2 ರಿಂದ ಶುರುವಾಗಲಿದೆ. ಬರ್ಮಿಂಗ್​ಹ್ಯಾಮ್​ನ ಎಡ್ಜ್ ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದಿಂದ ಯುವ ವೇಗಿಯನ್ನು ಕೈ ಬಿಡಲಾಗಿದೆ.

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಎರಡನೇ ಟೆಸ್ಟ್ ಪಂದ್ಯವು ಜುಲೈ 2 ರಿಂದ ಶುರುವಾಗಲಿದೆ. ಬರ್ಮಿಂಗ್​ಹ್ಯಾಮ್​ನ ಎಡ್ಜ್ ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದಿಂದ ಯುವ ವೇಗಿಯನ್ನು ಕೈ ಬಿಡಲಾಗಿದೆ.

2 / 5

ಲೀಡ್ಸ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಭಾರತ ತಂಡವನ್ನು ಕೂಡಿಕೊಂಡಿದ್ದ ಯುವ ವೇಗಿ ಹರ್ಷಿತ್ ರಾಣಾ ಅವರನ್ನು ಇದೀಗ ತಂಡದಿಂದ ಕೈ ಬಿಡಲಾಗಿದೆ ಎಂದು ವರದಿಯಾಗಿದೆ. ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಗೆ ಆಯ್ಕೆ ಮಾಡಲಾದ 18 ಸದಸ್ಯರ ಬಳಗದಲ್ಲಿ ರಾಣಾ ಕಾಣಿಸಿಕೊಂಡಿರಲಿಲ್ಲ.

3 / 5

ಆದರೆ ಟೀಮ್ ಇಂಡಿಯಾ ವೇಗಿಗಳಲ್ಲಿ ಕೆಲವರು ಕಣಕಾಲು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ಭಾರತ ಎ ತಂಡದಲ್ಲಿದ್ದ ಹರ್ಷಿತ್ ರಾಣಾ ಅವರನ್ನು ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಅದರಂತೆ ಅವರು ಹೆಡಿಂಗ್ಲೆಯಲ್ಲಿ ನಡೆದ ಟೆಸ್ಟ್ ಪಂದ್ಯದ ವೇಳೆ ಟೀಮ್ ಇಂಡಿಯಾ ಜೊತೆ ಕಾಣಿಸಿಕೊಂಡಿದ್ದರು.

4 / 5

ಇದೀಗ ಟೀಮ್ ಇಂಡಿಯಾದಲ್ಲಿರುವ ಎಲ್ಲಾ ವೇಗಿಗಳು ಫಿಟ್ ನೆಸ್ ಸಾಧಿಸಿದ್ದು, ಹೀಗಾಗಿ ಹರ್ಷಿತ್ ರಾಣಾ ಅವರನ್ನು ತಂಡದಿಂದ ಕೈ ಬಿಡಲಾಗಿದೆ ಎಂದು ತಿಳಿದು ಬಂದಿದೆ. ಅಷ್ಟೇ ಅಲ್ಲದೆ ಎರಡನೇ ಟೆಸ್ಟ್‌ ಗಾಗಿ ಬರ್ಮಿಂಗ್​ಹ್ಯಾಮ್​ಗೆ ತೆರಳಿರುವ ಭಾರತ ತಂಡದ ಜೊತೆ ರಾಣಾ ಕಾಣಿಸಿಕೊಂಡಿಲ್ಲ. ಹೀಗಾಗಿ ಮುಂದಿನ ಟೆಸ್ಟ್ ಪಂದ್ಯಗಳಲ್ಲಿ ಅವರು ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ.

5 / 5

ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್.

Loading...
Unable to load recommendations.
Follow Us